ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರ ಸಭಾಭವನಕ್ಕೆ ರೂ.5 ಲಕ್ಷ ಅನುದಾನ: ಸಂಸದ ಬ್ರಿಜೇಶ್ ಚೌಟರಿಂದ ಮಂಜೂರು

ಶೇರ್ ಮಾಡಿ

 

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರ ಸಭಾಭವನಕ್ಕೆ ರೂ.5 ಲಕ್ಷ ಅನುದಾನ: ಸಂಸದ ಬ್ರಿಜೇಶ್ ಚೌಟರಿಂದ ಮಂಜೂರು

ಕೊಕ್ಕಡ: ಹತ್ಯಡ್ಕ ಗ್ರಾಮದ ಅರಸಿನಮಕ್ಕಿಯ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದ ಸಭಾಭವನ ನಿರ್ಮಾಣ ಕಾಮಗಾರಿಗೆ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.5 ಲಕ್ಷ ಅನುದಾನ ಮಂಜೂರಾಗಿದೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಈ ಅನುದಾನವನ್ನು ಮಂಜೂರು ಮಾಡಿದ್ದು, ಈ ಹಿಂದೆ ಸಭಾಭವನ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡುವಂತೆ ಕೋರಿ ದೇಗುಲದ ಪದಾಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಸಂಸದರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು.

ಸಭಾಭವನ ನಿರ್ಮಾಣಕ್ಕೆ ಪೂರಕವಾಗಿ ಅನುದಾನ ಮಂಜೂರು ಮಾಡುವಂತೆ ಕೋರಿ ಈ ಹಿಂದೆ ದೇಗುಲದ ಪದಾಧಿಕಾರಿಗಳು ಮತ್ತು ಗ್ರಾಮದ ಸ್ಥಳೀಯ ಮುಖಂಡರು ಸಂಸದರನ್ನು ಭೇಟಿ ಮಾಡಿ ಮನವಿ ಮಾಡಿದ್ದರು. ಈ ಅನುದಾನ ಮಂಜೂರಾತಿಗೆ ವಿಶೇಷವಾಗಿ ಸಹಕಾರ ನೀಡಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬಿಜೆಪಿ ಬೆಳ್ತಂಗಡಿ ತಾಲೂಕು ಮಂಡಲಾಧ್ಯಕ್ಷ ಶ್ರೀನಿವಾಸ ರಾವ್ ಹಾಗೂ ಹತ್ಯಡ್ಕ ಗ್ರಾಮದ ಪ್ರಮುಖರಿಗೆ ವನದುರ್ಗಾ ಸೇವಾ ಟ್ರಸ್ಟ್ ನ ಅಧ್ಯಕ್ಷ ಪ್ರಕಾಶ್ ಪಿಲಿಕ್ಕಬೆಯವರು ಕೃತಜ್ಞತೆಯನ್ನು ಸಲ್ಲಿಸಿದರು.

 

Leave a Reply

error: Content is protected !!