





ಸುಳ್ಯ: ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಗೂನಡ್ಕ ಪ್ರದೇಶದಲ್ಲಿರುವ ಮಸೀದಿಯ ಆವರಣದಲ್ಲಿದ್ದ ಕಾಣಿಕೆ ಡಬ್ಬಿ ಕಳವು ಪ್ರಕರಣವನ್ನು ಸುಳ್ಯ ಪೊಲೀಸರು ಭೇದಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಾ.30ರಂದು ನಡೆದ ಈ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ. 45/2026ರಡಿ ಕಲಂ 303(2) BNS-2023 ಪ್ರಕಾರ ಪ್ರಕರಣ ದಾಖಲಾಗಿತ್ತು. ಪ್ರಕರಣದ ಕುರಿತು ತಕ್ಷಣವೇ ತನಿಖೆ ಆರಂಭಿಸಿದ ಪೊಲೀಸರು, ಏ.6ರಂದು ಸುಳ್ಯ ತಾಲೂಕಿನ ಕೆಮ್ರಾಜೆ ಎಲಿಮಲೆ ಪ್ರದೇಶದಲ್ಲಿ ಆರೋಪಿಯನ್ನು ಬಂಧಿಸಿದರು.
ಬಂಧಿತ ಆರೋಪಿಯನ್ನು ಆಂಧ್ರಪ್ರದೇಶದ ಪಶ್ಚಿಮ ಗೊದಾವರಿ ಜಿಲ್ಲೆಯ ನಿವಾಸಿಯಾದ ಮಹಮ್ಮದ್ ಸಲ್ಮಾನ್(35) ಎಂದು ಗುರುತಿಸಲಾಗಿದೆ. ಬಂಧನದ ವೇಳೆ ಆರೋಪಿತನಿಂದ ಕಳವು ಮಾಡಿದ್ದ 2,000 ರೂ. ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಂತರ ಆರೋಪಿಯನ್ನು ಮಾನ್ಯ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.




