ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ

ಶೇರ್ ಮಾಡಿ

 

ಹೊಳೆಗೆ ಹಾರಿ ಮಹಿಳೆ ಆತ್ಮಹತ್ಯೆ

ಚಿಕ್ಕಮಗಳೂರು: ಹೊಳೆಗೆ ಹಾರಿ ನರ್ಸ್ ಆತ್ಮಹತ್ಯೆಗೆ ಶರಣಾಗಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಮುಡುಬ ಬಳಿ ನಡೆದಿದೆ.

ಮೃತರನ್ನ ರನ್ಯಾ ಬೇಸಿಲ್ (30) ಎಂದು ಗುರುತಿಸಲಾಗಿದೆ. ಎನ್.ಆರ್ ಪುರ ತಾಲೂಕಿನ ಮುತ್ತಿನಕೊಪ್ಪ ಮೂಲಕದ ಮೃತ ರನ್ಯಾ ಬೇಸಿಲ್ ಶಿವಮೊಗ್ಗದ ನಾರಾಯಣ ಹೃದಯಾಲಯದಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು.

ನಿನ್ನೆ ಕೂಡ ಆಸ್ಪತ್ರೆಗೆ ಹೋಗಿ ತನ್ನ ಕೆಲಸ ಮುಗಿಸಿ ಮನೆಗೆ ಬಂದಿದ್ದರು. ನಿತ್ಯ ಶಿವಮೊಗ್ಗಕ್ಕೆ ಓಡಾಡುತ್ತಿದ್ದ ರನ್ಯಾ ನಿನ್ನೆ ಸಂಜೆ ಕೆಲಸ ಮುಗಿಸಿ ಮನೆಗೆ ಬಂದಿದ್ದರು. ಮನೆಗೆ ಬಂದಿದ್ದ ರನ್ಯಾ ಮತ್ತೆ ಮುಡುಬ ಬಳಿ ಹೋಗಿ ಸೇತುವೆ ಮೇಲಿಂದ ಹೊಳೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. 12 ವರ್ಷದ ಹಿಂದೆ ಮದುವೆಯಾಗಿದ್ದ ರನ್ಯಾಗೆ ಇಬ್ಬರು ಮಕ್ಕಳಿದ್ದು, ಪತಿ ಕಾಫಿ ಬೆಳೆಗಾರರಾಗಿದ್ದಾರೆ. ಎನ್.ಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

 

Leave a Reply

error: Content is protected !!