ನೆಲ್ಯಾಡಿ ಸಂತ ಜಾರ್ಜ್ ಪ.ಪೂ.ಕಾಲೇಜಿಗೆ ವಾಣಿಜ್ಯ ವಿಭಾಗದಲ್ಲಿ ಶೇ.100 ಫಲಿತಾಂಶ

ಶೇರ್ ಮಾಡಿ

 

ನೆಲ್ಯಾಡಿ: 2025-26ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ವಾಣಿಜ್ಯ ವಿಭಾಗದಲ್ಲಿ ನೆಲ್ಯಾಡಿ ಸಂತಜಾರ್ಜ್ ಪ.ಪೂ.ಕಾಲೇಜಿಗೆ ಶೇ.100 ತೇರ್ಗಡೆ ಫಲಿತಾಂಶ ಲಭಿಸಿದೆ. ಕಲಾ ವಿಭಾಗಕ್ಕೆ 96.15 ಶೇ.ಫಲಿತಾಂಶ ಬಂದಿದೆ.

ವಾಣಿಜ್ಯ ವಿಭಾಗ:
ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 66 ವಿದ್ಯಾರ್ಥಿಗಳೂ ತೇರ್ಗಡೆಗೊಂಡು ಶೇ.100 ಫಲಿತಾಂಶ ಬಂದಿದೆ. 10 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ 55 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 1 ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಅನುಶ್ರೀ ಪಿ ನಾಯರ್ (580), ಅಕ್ಷತಾ ಪಿ.ವಿ (579), ಆಯಿಷಾತ್ ಫಾಹಿಮಾ(577), ಫಾತಿಮತ್ ಸಹಾನ ಎನ್. ಎ (563), ದೀಕ್ಷಾ (560), ಜೆಸ್ಟಿನ್ ಚಾರ್ಜ್(556), ಆದಿತ್ಯನ್. ಎಸ್. ಪಿ(555), ಲಿಖಿತಾ ಎಂ(534), ತನುಷ್ (524), ಇಶ್ರತ್ ರಂಸಿಯಾ (515) ಅಂಕ ಪಡೆದುಕೊಂಡು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆಯಾಗಿದ್ದಾರೆ.

ಕಲಾ ವಿಭಾಗ:
ಕಲಾ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 52 ವಿದ್ಯಾರ್ಥಿಗಳ ಪೈಕಿ 50 ವಿದ್ಯಾರ್ಥಿಗಳು ತೇರ್ಗಡೆಗೊಂಡು ಶೇ.96.15 ಫಲಿತಾಂಶ ಲಭಿಸಿದೆ. 4 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿ, 32 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 11 ವಿದ್ಯಾರ್ಥಿಗಳು ದ್ವಿತೀಯ ಹಾಗೂ 3 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ರಶ್ಮಿತಾ (545), ಗೌಶಿಯಾ ಬಾನು (542), ಸಿಮ್ರಾನ್ ಬಾನು (526), ದೀಕ್ಷಿತ್ ಕೆ (513) ಅಂಕ ಪಡೆದುಕೊಂಡು ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಸ್ಥಾಪಕ ಕಾರ್ಯದರ್ಶಿಗಳಾದ ಅಬ್ರಹಾಂ ವರ್ಗೀಸ್, ಸಂಚಾಲಕರಾದ ಫಾ.ನೋಮಿಸ್ ಕುರಿಯಾಕೋಸ್, ಕಾಲೇಜಿನ ಪ್ರಾಚಾರ್ಯ ಏಲಿಯಾಸ್ ಎಂ.ಕೆ, ಉಪನ್ಯಾಸಕ ವೃಂದ, ಅಧ್ಯಾಪಕ ವೃಂದ ಹಾಗೂ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

 

Leave a Reply

error: Content is protected !!