ಅರಸಿನಮಕ್ಕಿ ಸರಕಾರಿ ಪ. ಪೂ. ಕಾಲೇಜಿಗೆ ಶೇ.96 ಫಲಿತಾಂಶ

ಶೇರ್ ಮಾಡಿ

 

ಕೊಕ್ಕಡ: 2025-26ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ವಾಣಿಜ್ಯ ವಿಭಾಗದಲ್ಲಿ ಹತ್ಯಡ್ಕ-ಅರಸಿನಮಕ್ಕಿ ಸರಕಾರಿ ಪ.ಪೂ. ಕಾಲೇಜಿಗೆ ಶೇ.96 ಫಲಿತಾಂಶ ಬಂದಿದೆ.

ವಾಣಿಜ್ಯ ವಿಭಾಗ:
ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 14 ವಿದ್ಯಾರ್ಥಿಗಳೂ ತೇರ್ಗಡೆಗೊಂಡು ಶೇ.100 ಫಲಿತಾಂಶ ಬಂದಿದೆ. 9 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಹರ್ಷಿತಾ ಎಸ್.(579), ಕೀರ್ತನಾ(566), ಸುಷ್ಮಾ (559), ಹರ್ಷಿತಾ.ವಿ (537) ಶೈಲೇಶ್ (536), ಲಿಖಿತಾ ಎ ಶೆಟ್ಟಿಗಾರ್ (529) ಅನನ್ಯ (518) ದೀಕ್ಷಾ (511) ವಿವೇಕ್ (509) ಅಂಕ ಪಡೆದುಕೊಂಡು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆಯಾಗಿದ್ದಾರೆ.

ಕಲಾ ವಿಭಾಗ:
ಕಲಾ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 13 ವಿದ್ಯಾರ್ಥಿಗಳ ಪೈಕಿ 12 ವಿದ್ಯಾರ್ಥಿಗಳು ತೇರ್ಗಡೆಗೊಂಡು ಶೇ.92 ಫಲಿತಾಂಶ ಲಭಿಸಿದೆ. 2 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿ ಅಂಕ ಪಡೆದುಕೊಂಡು ತೇರ್ಗಡೆಯಾಗಿದ್ದಾರೆ. ಕಲಾ ವಿಭಾಗದಲ್ಲಿ ಧನಂಜಯ(474), ಕೃತಿ ಕೆ.ಎಸ್ (453) ಅಂಕ ಪಡೆದುಕೊಂಡು ತೇರ್ಗಡೆಯಾಗಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಪ್ರಾಚಾರ್ಯ, ಉಪನ್ಯಾಸಕ ವೃಂದ ಹಾಗೂ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

 

Leave a Reply

error: Content is protected !!