





ನೆಲ್ಯಾಡಿ: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಅದರಂತೆ ಸಂತ ಜಾರ್ಜ್ ಪ.ಪೂ ಕಾಲೇಜಿನ ಆಂಗ್ಲ ಮಾಧ್ಯಮ ಹಾಗೂ ಕನ್ನಡ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶವನ್ನು ದಾಖಲಿಸಿಕೊಂಡಿದೆ.

ಆಂಗ್ಲ ಮಾಧ್ಯಮದಿಂದ ಪರೀಕ್ಷೆಗೆ ಹಾಜರಾದ ವರ್ಷಾ ಎ (619) ಅಂಕಗಳನ್ನು ಪಡೆದು ರಾಜ್ಯಕ್ಕೆ 6ನೇ ಸ್ಥಾನ ಪಡೆದಿದ್ದಾರೆ.
ಆಂಗ್ಲ ಮಾಧ್ಯಮದಿಂದ ಪರೀಕ್ಷೆಗೆ ಹಾಜರಾದ ಒಟ್ಟು 44 ವಿದ್ಯಾರ್ಥಿಗಳಲ್ಲಿ 12 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 27 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 3 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ, 2 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು: ಜೆಸ್ಲಿನ್ ಅನ್ನ ಜೋಸೆಫ್ (606), ಅಭಿಜ್ಞಾ ಪಿ(603), ಶ್ರೇವತ್ಸ ಶರ್ಮಾ ಕೆ(598),ಶಾಮ್ಯ (567), ಝಕಿಯ(562), ಚಂದನ ಕೆ. ವಿ (557), ಅನನ್ಯ (549), ಗಗನ ಪಿ (547), ಮಾನಸ (535), ಎನ್. ರೇಷ್ಮಾ (534), ಅಮೃತ (533) ಅಂಕಗಳನ್ನು ಪಡೆದು ತೇರ್ಗಡೆಗೊಂಡಿದ್ದಾರೆ.
ಕನ್ನಡ ಮಾಧ್ಯಮದಿಂದ ಪರೀಕ್ಷೆಗೆ ಹಾಜರಾದ ಒಟ್ಟು 53 ವಿದ್ಯಾರ್ಥಿಗಳಲ್ಲಿ 9 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 35 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 9 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು : ಫಾತಿಮತ್ಇಬಾ(583), ಐಶ್ವರ್ಯ(576), ಯಶ್ಮಿತಾ (574), ಕಾವ್ಯಶ್ರೀ (573), ಧನುಷ (543), ಜ್ಯೋತಿ.ಎಚ್.ಬಿ(537), ಕೃತಿಕ (537), ಮುಫೀದಾ (536), ಶ್ರೇಯಾ.ಸಿ.ಎಚ್(533) ಅಂಕಗಳನ್ನು ಪಡೆದು ತೇರ್ಗಡೆಗೊಂಡಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಸ್ಥಾಪಕ ಕಾರ್ಯದರ್ಶಿಗಳಾದ ಅಬ್ರಹಾಂ ವರ್ಗೀಸ್ , ವಿದ್ಯಾ ಸಂಸ್ಥೆಯ ಸಂಚಾಲಕರಾದ ಫಾ.ನೋಮಿಸ್ ಕುರಿಯಾಕೋಸ್, ಕಾಲೇಜಿನ ಪ್ರಾಚಾರ್ಯ ಏಲಿಯಾಸ್ ಎಂ.ಕೆ, ಕನ್ನಡ ಮಾಧ್ಯಮ ವಿಭಾಗದ ಮುಖ್ಯಶಿಕ್ಷಕ ಎಂ.ವೈ ತೋಮಸ್, ಇಂಗ್ಲಿಷ್ ಮಾಧ್ಯಮ ವಿಭಾಗದ ಹರಿಪ್ರಸಾದ್ ಉಪನ್ಯಾಸಕ ವೃಂದ, ಅಧ್ಯಾಪಕ ವೃಂದ ಹಾಗೂ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.




