





ಕೊಕ್ಕಡ: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕೊಕ್ಕಡ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶವನ್ನು ದಾಖಲಿಸಿಕೊಂಡಿದೆ.
ಪರೀಕ್ಷೆಗೆ ಹಾಜರಾದ ಒಟ್ಟು 47 ವಿದ್ಯಾರ್ಥಿಗಳಲ್ಲಿ, 6 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 26 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 11 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಹಾಗೂ 4 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು : ದೀಕ್ಷಿತಾ (560), ಧನು ಶ್ರೀ (553), ತ್ರಿಷಾ (551), ದಿವ್ಯಾ(551), ಶೈನಿ(532), ಸುಪ್ರಿಯಾ(532), ಸಾಹಲಾ(528), ನೇಹಾ(519), ದೀಪ್ತಿ(517), ಗೌರಿ(512), ಕುಶನ್ಯ(501) ಅಂಕಗಳನ್ನು ಪಡೆದು ತೇರ್ಗಡೆಗೊಂಡಿದ್ದಾರೆ.




