





ನೆಲ್ಯಾಡಿ : ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೀರಕಟ್ಟೆ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಸ್ಕೂಟಿಯಲ್ಲಿ ಇದ್ದ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಮಾಹಿತಿ ಪ್ರಕಾರ ಸಂಚರಿಸುತ್ತಿದ್ದ ಸ್ಕೂಟಿ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಸ್ಕೂಟಿ ಸವಾರ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಗಾಯಗೊಂಡ ಮಹಿಳೆಯನ್ನು ತಕ್ಷಣ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಹಾಗೂ ಗಾಯಾಳುವಿನ ಗುರುತು ಇನ್ನಷ್ಟೇ ತಿಳಿದುಬರಬೇಕಿದೆ. ಅಪಘಾತದ ನಿಖರ ಕಾರಣಗಳ ಕುರಿತು ತನಿಖೆ ಮುಂದುವರೆದಿದೆ.



