





ನೆಲ್ಯಾಡಿ: ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಹೊಸಮಜಲು ಬರಮೇಲು ಎಂಬಲ್ಲಿ ಮನೆಯ ಅಂಗಳದಲ್ಲಿರುವ ಶಡ್‌ನಲ್ಲಿ ನಿಲ್ಲಿಸಿದ್ದ ಮೋಟಾರ್ ಸೈಕಲ್ ಕಳ್ಳತನವಾದ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಷ್ಣು ರಾಮ ಹೆಗಡೆ ಅವರು ನೀಡಿದ ದೂರಿನ ಪ್ರಕಾರ, ಮೇ 02ರಂದು ಮೋಟಾರ್ ಸೈಕಲ್ ಅನ್ನು ಮನೆಯ ಶಡ್‌ನಲ್ಲಿ ನಿಲ್ಲಿಸಿ ಸಂಬಂಧಿಕರ ಮನೆಗೆ ತೆರಳಿದ್ದರು. ಬಳಿಕ ರಾತ್ರಿ ಸುಮಾರು 11.00 ಗಂಟೆಗೆ ಮನೆಗೆ ವಾಪಸ್ಸಾದಾಗ ಬೈಕ್ ಶಡ್‌ನಲ್ಲೇ ಇದ್ದಿತು. ಆದರೆ, ಮರುದಿನ ಬೆಳಿಗ್ಗೆ ಸುಮಾರು 08.00 ಗಂಟೆಗೆ ಎದ್ದು ನೋಡಿದಾಗ ಶಡ್‌ನಲ್ಲಿ ನಿಲ್ಲಿಸಿದ್ದ ಮೋಟಾರ್ ಸೈಕಲ್ ಕಾಣೆಯಾಗಿರುವುದು ಗಮನಕ್ಕೆ ಬಂದಿದೆ.
ತಕ್ಷಣವೇ ನೆರೆಹೊರೆಯವರಲ್ಲಿ ವಿಚಾರಿಸಿದರೂ ಬೈಕ್ ಪತ್ತೆಯಾಗಿಲ್ಲ. ಈ ನಡುವೆ, ಪಕ್ಕದ ಮನೆಯ ಎದುರು ಭಾಗದಲ್ಲಿ ಮುಸುಕುದಾರಿ ವ್ಯಕ್ತಿಯೊಬ್ಬ ಸಂಚರಿಸುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಇದರಿಂದ ಕಳ್ಳತನದಲ್ಲಿ ಅಪರಿಚಿತ ವ್ಯಕ್ತಿಗಳ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ.
ಕಳುವಾದ ಮೋಟಾರ್ ಸೈಕಲ್‌ನ ಅಂದಾಜು ಮೌಲ್ಯ ರೂ. 40,000/- ಆಗಿದ್ದು, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಿಸಿ ಕ್ಯಾಮೆರಾ ದೃಶ್ಯಗಳನ್ನು ಆಧರಿಸಿ ತನಿಖೆ ಮುಂದುವರೆಸಿದ್ದಾರೆ.



