ಮೇ 3 ರಂದು ನಡೆದ ನೀಟ್‌ ಪರೀಕ್ಷೆ ರದ್ದು

ಶೇರ್ ಮಾಡಿ

 

ಮೇ 3 ರಂದು ನಡೆದ ನೀಟ್‌ ಪರೀಕ್ಷೆ ರದ್ದು

ನವದೆಹಲಿ: ಮೇ 3 ರಂದು ನಡೆಸಲಾದ ನೀಟ್‌ ಯುಜಿ ಪರೀಕ್ಷೆಯನ್ನು (NEET UG Exam) ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ರದ್ದುಗೊಳಿಸಿದೆ.

ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಎನ್‌ಟಿಎ ಪರೀಕ್ಷೆಯನ್ನು ರದ್ದುಗೊಳಿಸಿದ್ದು ಶೀಘ್ರವೇ ಬದಲಿ ದಿನಾಂಕವನ್ನು ತಿಳಿಸುವುದಾಗಿ ಹೇಳಿದೆ.

ರಾಜಸ್ಥಾನದ ಸಿಕಾರ್‌ನಲ್ಲಿ ಮೇ 1 ರಂದೇ ‘ಊಹೆ ಪತ್ರಿಕೆ’ ರೂಪದಲ್ಲಿ ಪ್ರಶ್ನೆಗಳು ಪ್ರಸಾರವಾಗಿದ್ದವು ಎಂದು ವರದಿಯಾಗಿದೆ. ಈ ಊಹೆ ಪತ್ರಿಕೆಯಲ್ಲಿದ್ದ ಸುಮಾರು 100ಕ್ಕೂ ಹೆಚ್ಚು ಜೀವಶಾಸ್ತ್ರ ಮತ್ತು ರಸಾಯನಶಾಸ್ತ್ರದ ಪ್ರಶ್ನೆಗಳು ಅಸಲಿ ಪ್ರಶ್ನೆ ಪತ್ರಿಕೆಗೆ ಹೋಲಿಕೆಯಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.

ರಾಜಸ್ಥಾನದ ವಿಶೇಷ ಕಾರ್ಯಾಚರಣೆ ತಂಡವು ಈ ಆಪಾದಿತ ಅವ್ಯವಹಾರಗಳ ಕುರಿತು ತನಿಖೆ ಆರಂಭಿಸಿದೆ. ಸೋರಿಕೆಯಾದ ಮಾಹಿತಿ ಸಿಕ್ಕಿದ ಕೂಡಲೇ NTA ಇದನ್ನು ಕೇಂದ್ರ ತನಿಖಾ ಸಂಸ್ಥೆಗಳಿಗೆ ವರ್ಗಾಯಿಸಿತ್ತು.

2024 ಮತ್ತು 2025 ರಲ್ಲೂ ಇಂತಹದೇ ಆರೋಪಗಳು ಕೇಳಿಬಂದಿದ್ದವು. 2024ರ ಪ್ರಕರಣದಲ್ಲಿ ಸಿಬಿಐ ಪಾಟ್ನಾ ಮತ್ತು ಹಜಾರಿಬಾಗ್‌ನಲ್ಲಿ ಕೆಲವು ಆರೋಪಿಗಳನ್ನು ಬಂಧಿಸಿತ್ತು.

 

Leave a Reply

error: Content is protected !!