ಬಿಸಿಎ ವಿದ್ಯಾರ್ಥಿನಿ ಬಂಧನ; ₹35 ಲಕ್ಷ ಮೌಲ್ಯದ ಹೈಡ್ರೊವೀಡ್ ಗಾಂಜಾ ಜಪ್ತಿ

ಶೇರ್ ಮಾಡಿ

 

ಬಿಸಿಎ ವಿದ್ಯಾರ್ಥಿನಿ ಬಂಧನ; ₹35 ಲಕ್ಷ ಮೌಲ್ಯದ ಹೈಡ್ರೊವೀಡ್ ಗಾಂಜಾ ಜಪ್ತಿ

ಮಂಗಳೂರು: ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯ ಮುಲ್ಕಿ ಠಾಣಾ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಸುಮಾರು ₹35 ಲಕ್ಷ ಮೌಲ್ಯದ ಹೈಡ್ರೊವೀಡ್ ಗಾಂಜಾ ಮಾದಕ ದ್ರವ್ಯವನ್ನು ವಶಪಡಿಸಿಕೊಂಡು ಆರೋಪಿತೆಯೊಬ್ಬಳನ್ನು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.

ಮೇ 12 ರಂದು ಮುಲ್ಕಿ ಠಾಣಾ ವ್ಯಾಪ್ತಿಯ ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಹೈಡ್ರೊವೀಡ್ ಗಾಂಜಾ ಮಾದಕ ದ್ರವ್ಯವನ್ನು ಮಾರಾಟ ಮಾಡಲು ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪಣಂಬೂರು ಎಸಿಪಿ ತಂಡ ಹಾಗೂ ಮುಲ್ಕಿ ಪೊಲೀಸ್ ಠಾಣೆಯ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದರು.ಈ ವೇಳೆ ಸುಹಾನಾ (21) ಎಂಬ ಆರೋಪಿತೆಯನ್ನು ವಶಕ್ಕೆ ಪಡೆಯಲಾಗಿದೆ. ಆಕೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹುಲಿದೇವರ ಬನ ನಿವಾಸಿಯಾಗಿದ್ದು, ಪ್ರಸ್ತುತ ಕುಂದಾಪುರದ ಕಾಲೇಜೊಂದರಲ್ಲಿ ಅಂತಿಮ ವರ್ಷದ ಬಿಸಿಎ ವಿದ್ಯಾರ್ಥಿನಿಯಾಗಿರುವುದಾಗಿ ತಿಳಿದು ಬಂದಿದೆ.

ಆರೋಪಿತೆಯ ಬಳಿ ಇದ್ದ ಸುಮಾರು 1 ಕೆಜಿ 42 ಗ್ರಾಂ ತೂಕದ ಹೈಡ್ರೊವೀಡ್ ಗಾಂಜಾ ಮಾದಕ ದ್ರವ್ಯವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಇದರ ಅಂದಾಜು ಮೌಲ್ಯ ₹35 ಲಕ್ಷ ಎಂದು ತಿಳಿದು ಬಂದಿದೆ. ಜೊತೆಗೆ ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನ್ ಹಾಗೂ ಇತರ ಸೊತ್ತುಗಳನ್ನು ಸಹ ಜಪ್ತಿ ಮಾಡಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿತೆ ಚೆನ್ನೈನಿಂದ ಮಾದಕ ವಸ್ತುವನ್ನು ತಂದು ಮಂಗಳೂರಿನಲ್ಲಿ ಅಕ್ರಮವಾಗಿ ಪೂರೈಕೆ ಮಾಡಿ ಹಣ ಗಳಿಸುವ ಉದ್ದೇಶ ಹೊಂದಿದ್ದಳು ಎಂಬ ಮಾಹಿತಿ ಲಭ್ಯವಾಗಿದೆ.

ಈ ಸಂಬಂಧ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 32/2026ರಂತೆ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(ಸಿ), 20(ಬಿ) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇದೇ ಆರೋಪಿತೆಯ ವಿರುದ್ಧ ಈಗಾಗಲೇ ಮತ್ತೆರಡು ಮಾದಕ ದ್ರವ್ಯ ಸಂಬಂಧಿತ ಪ್ರಕರಣಗಳು ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.ಕಾವೂರು ಪೊಲೀಸ್ ಠಾಣೆ ಅ.ಕ್ರ. 37/2026 – ಎನ್‌ಡಿಪಿಎಸ್ ಕಾಯ್ದೆ ಕಲಂ 8(C), 22(C), ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕಸ್ಟಮ್ಸ್ O.R. No: 177/2025-26 – ಕಲಂ 20(b), 22(B), 23(b), 27(A) ಹಾಗೂ 29 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

 

Leave a Reply

error: Content is protected !!