ನೆಲ್ಯಾಡಿ ವಿ.ವಿ ಕಾಲೇಜಿನ ರಾಜ್ಯ ಶಾಸ್ತ್ರ ವಿಭಾಗದಿಂದ ಕಾರ್ಯಾಗಾರ

ಶೇರ್ ಮಾಡಿ

ನೇಸರ ಮಾ.22: ನೆಲ್ಯಾಡಿ ವಿ.ವಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ “ರಾಜ್ಯಶಾಸ್ತ್ರದ ಪ್ರಸ್ತುತತೆ” ಎಂಬ ವಿಷಯದಲ್ಲಿ ಕಾರ್ಯಾಗಾರವು ಜರುಗಿತು.
ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವ ವಿದ್ಯಾನಿಲಯ ಮಂಗಳ ಗಂಗೋತ್ರಿ ಕೊಣಾಜೆಯ ರಾಜ್ಯಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕ ಡಾ.ದಯಾನಂದ ನಾಯಕ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ, ಪ್ರಸ್ತುತ ವಿದ್ಯಾಮಾನಗಳ ಬಗೆಗೆ ಸಂಶೋಧನಾ ನೆಲೆಯ ಮೌಲ್ಯಾಧಾರಿತ ಗುಣ ಮಟ್ಟದ ಸರ್ವತೋಮುಖ ಅಭಿವೃದ್ಧಿಗೆ ಸಾಧನವಾಗಿರುವ ಆಧುನಿಕತೆಯಿಂದ ಭವಿಷ್ಯತ್ತನ್ನು ರೂಪಿಸಿ ನಡೆಸುವ ಜವಾಬ್ದಾರಿ ಯುವ ಪೀಳಿಗೆಗೆ ಇದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಸಂಯೋಜಕ ಡಾ.ಜಯರಾಜ್ ವಹಿಸಿದ್ದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಸುರೇಶ ಪ್ರಾಸ್ತವಿಕವಾಗಿ ಮಾತನಾಡಿದರು. ಕಾರ್ಯಕ್ರಮದ ಪ್ರಯುಕ್ತ ರಸ ಪ್ರಶ್ನೆ, ಪ್ರಬಂಧ ಸ್ಪರ್ಧೆ, ಚರ್ಚಾ ಸ್ಪರ್ಧೆ ಯನ್ನು ಹಮ್ಮಿಕೊಳ್ಳಲಾಗಿತ್ತು.
ವಿದ್ಯಾರ್ಥಿಗಳಾದ ಧನ್ಯಶ್ರೀ ಸ್ವಾಗತಿಸಿ, ಲೂಕ್ಮಾನ್ ನಿರೂಪಿಸಿ, ವಿಶಾಲ್ ಎನ್.ಟಿ . ವಂದಿಸಿದರು.

ವೀಕ್ಷಿಸಿ Subscribers ಮಾಡಿ

Leave a Reply

error: Content is protected !!