ದ್ವಿತೀಯ ಪಿಯುಸಿ ಮರುಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ; ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಯಾನ ಪೊನ್ನಮ್ಮಗೆ 600ಕ್ಕೆ 600 ಅಂಕ

ಶೇರ್ ಮಾಡಿ

 

ದ್ವಿತೀಯ ಪಿಯುಸಿ ಮರುಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ; ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಯಾನ ಪೊನ್ನಮ್ಮಗೆ 600ಕ್ಕೆ 600 ಅಂಕ

ಬೆಳ್ತಂಗಡಿ :ಗುರುವಾಯನಕೆರೆ ಇಲ್ಲಿನ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಯಾನ ಪೊನ್ನಮ್ಮ ಅವರು ದ್ವಿತೀಯ ಪಿಯುಸಿ ಮರುಪರೀಕ್ಷೆಯಲ್ಲಿ ಅಪೂರ್ವ ಸಾಧನೆ ಮಾಡಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಈ ಹಿಂದಿನ ಪರೀಕ್ಷೆಯಲ್ಲಿ ಯಾನ ಪೊನ್ನಮ್ಮ ಅವರು 600ಕ್ಕೆ 597 ಅಂಕಗಳನ್ನು ಪಡೆದು ಗಮನ ಸೆಳೆದಿದ್ದರು. ಆದರೆ ಈ ಬಾರಿ ನಡೆದ ದ್ವಿತೀಯ ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲೂ ಶೇ.100 ಫಲಿತಾಂಶ ಸಾಧಿಸಿ 600ಕ್ಕೆ 600 ಅಂಕಗಳನ್ನು ಗಳಿಸುವ ಮೂಲಕ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ.

ಮೊದಲ ಪರೀಕ್ಷೆಯಲ್ಲಿ ಇಂಗ್ಲಿಷ್ ವಿಷಯದಲ್ಲಿ 97 ಅಂಕಗಳನ್ನು ಪಡೆದಿದ್ದ ಯಾನ ಪೊನ್ನಮ್ಮ ಅವರಿಗೆ ಮರುಪರೀಕ್ಷೆಯಲ್ಲಿ ಇಂಗ್ಲಿಷ್‌ನಲ್ಲೂ 100 ಅಂಕಗಳು ಲಭಿಸಿವೆ. ಉಳಿದಂತೆ ಕನ್ನಡ, ಅರ್ಥಶಾಸ್ತ್ರ, ಬಿಸಿನೆಸ್ ಸ್ಟಡೀಸ್, ಅಕೌಂಟೆನ್ಸಿ ಹಾಗೂ ಕಂಪ್ಯೂಟರ್ ಸೈನ್ಸ್ ವಿಷಯಗಳಲ್ಲಿ ಮೊದಲ ಪರೀಕ್ಷೆಯಲ್ಲಿಯೇ ತಲಾ 100 ಅಂಕಗಳನ್ನು ಪಡೆದಿದ್ದರು. ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.

 

Leave a Reply

error: Content is protected !!