ಉಪ್ಪಿನಂಗಡಿ ಸಮೀಪ 70 ಅಡಿ ಆಳದ ಹೊಂಡಕ್ಕೆ ಕಾರು; ಪಟ್ಟೂರು ಶಿಕ್ಷಣ ಸಂಸ್ಥೆಯ ಸಂಚಾಲಕ ಸೇರಿ ಇಬ್ಬರು ಪಾರು

ಶೇರ್ ಮಾಡಿ

 

ನೆಲ್ಯಾಡಿ: ಉಪ್ಪಿನಂಗಡಿಯಿಂದ ಪಟ್ಟೂರುಗೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಕಾರೊಂದು ಹೆದ್ದಾರಿ ಬದಿಯ ಸುಮಾರು 70 ಅಡಿ ಆಳದ ಹೊಂಡಕ್ಕೆ ಉರುಳಿ ಬಿದ್ದ ಘಟನೆ ಮೇ 22ರ ಸಂಜೆ ಉಪ್ಪಿನಂಗಡಿ ಸಮೀಪದ ಪಂಜಳದಲ್ಲಿ ನಡೆದಿದೆ.

ಅಪಘಾತಕ್ಕೀಡಾದ ಕಾರಿನಲ್ಲಿ ಪಟ್ರಮೆ ಗ್ರಾಮದ ದೇರಾಜೆ ನಿವಾಸಿ ಹಾಗೂ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ಸಂಚಾಲಕರಾದ ಪ್ರಶಾಂತ್ ದೇರಾಜೆ ಮತ್ತು ಅವರ ಸಹೋದರ ಪ್ರವೀಣ್ ದೇರಾಜೆ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ಹೆದ್ದಾರಿ ಬದಿಯಿಂದ ಕೆಳಕ್ಕೆ ಉರುಳಿ ಆಳವಾದ ಹೊಂಡಕ್ಕೆ ಬಿದ್ದಿದೆ. ಘಟನೆಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅಲ್ಪಸ್ವಲ್ಪ ತರಚುಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಪರಿಚಿತರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ಸಹಕರಿಸಿದರು. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

 

Leave a Reply

error: Content is protected !!