






ನೆಲ್ಯಾಡಿ: ಕಡಬ ತಾಲೂಕಿನ ಕೊಣಾಲು ಗ್ರಾಮದ ಎಣ್ಣೆತ್ತೋಡಿ ನಿವಾಸಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಪೂವಪ್ಪ ಗೌಡ ಎಣ್ಣೆತ್ತೋಡಿ(66ವ.)ರವರು ಅಲ್ಪಕಾಲದ ಅಸೌಖ್ಯದಿಂದ ಮೇ 29ರಂದು ಬೆಳಗ್ಗೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಇವರು ಬಾಲ್ಯದಿಂದಲೇ ರಾಷ್ಟ್ರೀಯ ಸ್ವಯಂಸೇವಕ ಸಂಘ ಮತ್ತು ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದರು. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ನಡೆದ ಕರಸೇವೆಯಲ್ಲಿ ಭಾಗವಹಿಸಿ ಕರಸೇವಕರಾಗಿ ಅಯೋಧ್ಯೆಗೆ ತೆರಳಿದ್ದರು. ಊರಿನಲ್ಲಿ ಕೃಷಿಯ ಜೊತೆಗೆ ಸಾಮಾಜಿಕವಾಗಿ ಮತ್ತು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಮೂರು ದಿನದ ಹಿಂದೆ ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಾಗಿದ್ದ ಅವರು ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ.
ಮೃತರು ಪತ್ನಿ ಕುಶಾಲಾಕ್ಷಿ, ಪುತ್ರ ತಿಲಕ್‍ರಾಜ್, ಪುತ್ರಿ ರೋಶನಿ ಹಾಗೂ ನಾಲ್ವರು ಸಹೋದರರನ್ನು ಅಗಲಿದ್ದಾರೆ. ಮೃತರ ಮನೆಗೆ ಹಲವು ಗಣ್ಯರು ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.


