ಕಡಬ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಶೇರ್ ಮಾಡಿ

 

ಕಡಬದ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕಡಬ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕಡಬದ ಕ್ನಾನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಕೋ ಕ್ಲಬ್ ವತಿಯಿಂದ ಜೂ.5ರಂದು ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಫೆಡರಲ್ ಬ್ಯಾಂಕ್‌ನ ಮ್ಯಾನೇಜರ್ ಬಿನ್ಲಿ ಜೋನ್ ಹಾಗೂ ಸಿಬ್ಬಂದಿ ಮಯೂರ್ ಅವರು ಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ಅರಿವು ಮೂಡಿಸಿದರು. ಪ್ರಕೃತಿಯ ಸಮತೋಲನ ಕಾಪಾಡಲು ಪ್ರತಿಯೊಬ್ಬರೂ ಕನಿಷ್ಠ ಒಂದು ಗಿಡವನ್ನು ನೆಟ್ಟು ಅದರ ಪೋಷಣೆಯ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ಶಾಲಾ ಸಂಚಾಲಕ ಜಿಸ್ಮನ್ ಜೋಸ್, ಮುಖ್ಯ ಶಿಕ್ಷಕಿ ಸಿಸ್ಟರ್ ಉಷಾ, ಇಕೋ ಕ್ಲಬ್‌ನ ಪದಾಧಿಕಾರಿಗಳಾದ ಕುಸುಮಾಧರ ಹೆಚ್., ಉಷಾ ಹಾಗೂ ಮಾಧವಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಪರಿಸರದ ಮಹತ್ವದ ಬಗ್ಗೆ ಸಂದೇಶ ನೀಡಿದರು.

ವಿದ್ಯಾರ್ಥಿನಿ ಜೆನಿಲಿಯಾ ಕಾರ್ಯಕ್ರಮವನ್ನು ನಿರೂಪಿಸಿದರು. ಇಕೋ ಕ್ಲಬ್ ನ ಸದಸ್ಯ ವಿದ್ಯಾರ್ಥಿಗಳಿಂದ ವಿವಿಧ ಕಾರ್ಯಕ್ರಮ ನೆರವೇರಿತು.

 

Leave a Reply

error: Content is protected !!