ನೆಲ್ಯಾಡಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಚಿತ್ರಕಲಾ ಸ್ಪರ್ಧೆ

ಶೇರ್ ಮಾಡಿ

 

ನೆಲ್ಯಾಡಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಚಿತ್ರಕಲಾ ಸ್ಪರ್ಧೆ

ನೆಲ್ಯಾಡಿ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿಜಯ ಕರ್ನಾಟಕ ಪತ್ರಿಕೆಯ ವತಿಯಿಂದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಚಿತ್ರಕಲಾ ಸ್ಪರ್ಧೆಯು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪುಚ್ಚೇರಿ ಇಲ್ಲಿ ನಡೆಯಿತು.

ಪರಿಸರ ಸಂರಕ್ಷಣೆ, ಹಸಿರು ಪರಿಸರದ ಮಹತ್ವ ಹಾಗೂ ಪ್ರಕೃತಿ ಉಳಿವಿನ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ನಡೆದ ಈ ಸ್ಪರ್ಧೆಯಲ್ಲಿ ಶಾಲೆಯ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕಲಾತ್ಮಕ ಪ್ರತಿಭೆಯನ್ನು ಪ್ರದರ್ಶಿಸಿದರು. ಪರಿಸರದ ಕುರಿತ ವಿವಿಧ ವಿಷಯಗಳನ್ನು ಚಿತ್ರಗಳ ಮೂಲಕ ಮನಮುಟ್ಟುವ ರೀತಿಯಲ್ಲಿ ಬಿಂಬಿಸಿದ ವಿದ್ಯಾರ್ಥಿಗಳ ಪೈಕಿ ಅತ್ಯುತ್ತಮ ಚಿತ್ರಗಳನ್ನು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯಶಿಕ್ಷಕಿ ಗಿರಿಜಾ ಪಿ. ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಇಂತಹ ಸ್ಪರ್ಧೆಗಳು ಮಕ್ಕಳಲ್ಲಿ ಪರಿಸರದ ಬಗ್ಗೆ ಕಾಳಜಿ ಮತ್ತು ಜಾಗೃತಿ ಮೂಡಿಸಲು ಸಹಕಾರಿಯಾಗುತ್ತವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಿಕ್ಷಕರಾದ ಪುರಂದರ ಗೌಡ ಡಿ., ಜಾಹ್ನವಿ, ಯೋಗೀಶ, ದಿನೇಶ್ ಹಾಗೂ ರೋಹಿಣಿ ಉಪಸ್ಥಿತರಿದ್ದು, ಸ್ಪರ್ಧೆಯ ಯಶಸ್ವಿ ಆಯೋಜನೆಗೆ ಸಹಕರಿಸಿದರು.

 

Leave a Reply

error: Content is protected !!