ಗುರುವಾಯನಕೆರೆ: ಭೀಕರ ರಸ್ತೆ ಅಪಘಾತ: ರಸ್ತೆ ದಾಟುತ್ತಿದ್ದ ವೃದ್ಧನಿಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ, ಸ್ಥಳದಲ್ಲೇ ಸಾವು

ಶೇರ್ ಮಾಡಿ

 

ಗುರುವಾಯನಕೆರೆ: ಭೀಕರ ರಸ್ತೆ ಅಪಘಾತ: ರಸ್ತೆ ದಾಟುತ್ತಿದ್ದ ವೃದ್ಧನಿಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ, ಸ್ಥಳದಲ್ಲೇ ಸಾವು

ಬೆಳ್ತಂಗಡಿ :ಉಪ್ಪಿನಂಗಡಿ ಮುಖ್ಯರಸ್ತೆಯ ವಿನಾಯಕ್ ಏಜೆನ್ಸಿ ಸಮೀಪ ಗುರುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ರಸ್ತೆ ದಾಟುತ್ತಿದ್ದ ಅಪರಿಚಿತ ವೃದ್ಧರೊಬ್ಬರು ಮಿನಿ ಗೂಡ್ಸ್ ವಾಹನದ ಡಿಕ್ಕಿಗೆ ಒಳಗಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಮೃತ ವೃದ್ಧರು ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಮಿನಿ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ವೃದ್ಧರು ಗಂಭೀರ ಗಾಯಗೊಂಡು ರಸ್ತೆಯಲ್ಲೇ ಕುಸಿದು ಬಿದ್ದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದ್ದು, ಸಂಬಂಧಪಟ್ಟ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಮೃತ ವೃದ್ಧರ ಗುರುತು ಇನ್ನೂ ಪತ್ತೆಯಾಗಿಲ್ಲ. ಶವವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಇಡಲಾಗಿದ್ದು ಮೃತರ ಗುರುತು ಪತ್ತೆ ಹಾಗೂ ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.

 

Leave a Reply

error: Content is protected !!