ನೆಲ್ಯಾಡಿಯ ವಿಶ್ವವಿದ್ಯಾಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ವತಿಯಿಂದ ಕುಲಪತಿಯವರಿಗೆ ಮನವಿ ಸಲ್ಲಿಕೆ

ಶೇರ್ ಮಾಡಿ

ನೇಸರ ಮಾ.24: ವಿಶ್ವವಿದ್ಯಾಲಯ ಕಾಲೇಜು ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ಹೆತ್ತವರು/ಪೋಷಕರ ಪದಾಧಿಕಾರಿಗಳಿಂದ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಯವರಾದ ಪ್ರೊಫೆಸರ್ ಪಿ.ಎಸ್.ಯಡಪಡಿತ್ತಾಯರವರಿಗೆ, ಕಾಲೇಜುಗೆ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಅಗತ್ಯವಾಗಿ ಬೇಕಿರುವ ಸ್ವಂತ ಕಟ್ಟಡ, ಹೆಚ್ಚುವರಿ ಕೊಠಡಿ, ಹಾಲ್, ಕಂಪ್ಯೂಟರ್ ಸೌಲಭ್ಯ ಮತ್ತು ನೀರಿನ ಸೌಲಭ್ಯ ಇತ್ಯಾದಿಗಳನ್ನು ಒದಗಿಸುವ ಕುರಿತಂತೆ ಮನವಿಯನ್ನು ಸಲ್ಲಿಸಲಾಯಿತು.
ವಿಶ್ವ ವಿದ್ಯಾಲಯ ಕಾಲೇಜು ನೆಲ್ಯಾಡಿಯಲ್ಲಿ ‘ಅಜಾದಿ ಕಾ ಅಮೃತ್ ಮಹೋತ್ಸವ- 75ನೇ ಸ್ವಾತಂತ್ರ್ಯ ಮಹೋತ್ಸವದ’ ಅಂಗವಾಗಿ ದಿನಾಂಕ-21-03-2022ರಂದು ನಡೆದ, ಅಂತರ್ ಕಾಲೇಜು ಮಟ್ಟದ ಪುರುಷರ ವಾಲಿಬಾಲ್, ಮಹಿಳೆಯರ ತ್ರೋಬಾಲ್ ಪಂದ್ಯಾಕೂಟದ ಉದ್ಘಾಟನಾ ಸಭಾ ಕಾರ್ಯಕ್ರಮದ ಅಧ್ಯಕ್ಷರಾಗಿ ಆಗಮಿಸಿದ್ದ ಉಪಕುಲಪತಿಯವರಿಗೆ ಮನವಿಯನ್ನು ಸಲ್ಲಿಸಲಾಯಿತು. ಸಮಸ್ಯೆಗಳನ್ನು ಆದಷ್ಟು ಶೀಘ್ರದಲ್ಲಿ ಪರಿಹರಿಸಲಾಗುವುದೆಂದು ಭರವಸೆಯನ್ನು ಮಾನ್ಯ ಕುಲಪತಿಯವರು ನೀಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯಸ್ಥರು ಹಾಗೂ ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷರಾದ ಡಾ.ಜಯರಾಜ್ ಎನ್, ಉಪಾಧ್ಯಕ್ಷರಾದ ಅಬ್ದುಲ್ ಖಾದರ್ ಎಂ., ಕಾರ್ಯಾಧ್ಯಕ್ಷರಾದ ಅಬ್ದುಲ್ ರಝಾಕ್ ಕೆಮ್ಮಾನ್.ಎ., ಸಹ ಕಾರ್ಯದರ್ಶಿ ನವೀನ್ ಆಚಾರಿ ಮೊದಲಾದವರು ಉಪಸ್ಥಿತರಿದ್ದರು.

 

—ಜಾಹೀರಾತು—

Leave a Reply

error: Content is protected !!