







ನೆಲ್ಯಾಡಿ: ಬೆಥನಿ ಕೈಗಾರಿಕಾ ತರಬೇತಿ ಸಂಸ್ಥೆಯ 30ನೇ ವರ್ಷದ ವಾರ್ಷಿಕೋತ್ಸವವು ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದಲ್ಲಿ ಸಮಾಜ ಸೇವೆಯಲ್ಲಿ ತೊಡಗಿರುವ ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಿ ಗೌರವಿಸಲಾಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬೆಥನಿ ಪದವಿಪೂರ್ವ ಕಾಲೇಜು ನೂಜಿಬಾಳ್ತಿಲದ ಪ್ರಾಂಶುಪಾಲ ಜಾರ್ಜ್ ಟಿ.ಎಸ್. ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಉಪಕರಣಗಳು ಯಾರ ಹೆಸರನ್ನೂ ಕೇಳುವುದಿಲ್ಲ. ಅವುಗಳ ಬಗ್ಗೆ ಜ್ಞಾನ ಹೊಂದಿರುವವರು ಮಾತ್ರ ಅವುಗಳನ್ನು ಸಮರ್ಪಕವಾಗಿ ಬಳಸಲು ಸಾಧ್ಯ. ಶಿಕ್ಷಣವು ನಿಂತ ನೀರಿನಂತಲ್ಲ; ಅದು ನಿರಂತರವಾಗಿ ಹರಿಯುವ ಪ್ರಕ್ರಿಯೆಯಾಗಿದೆ. ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ನಿರಂತರವಾಗಿ ಮುಂದುವರಿಸಿಕೊಂಡು ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಐಟಿಐ ಸಂಸ್ಥೆಯ 30ನೇ ವಾರ್ಷಿಕೋತ್ಸವದ ಅಂಗವಾಗಿ ನೆಲ್ಯಾಡಿ ಹಾಗೂ ಸುತ್ತಮುತ್ತಲಿನ ವಿವಿಧ ಆರೋಗ್ಯ ಕೇಂದ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹಿರಿಯ ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೆ. ಫಾ. ಡಾ. ವರ್ಗೀಸ್ ಕೈಪನಡ್ಕ ಅವರು ಆಶಾ ಕಾರ್ಯಕರ್ತೆಯರ ಸೇವಾ ಮನೋಭಾವವನ್ನು ಸ್ಮರಿಸಿ, ಅವರ ಸಮಾಜಮುಖಿ ಸೇವೆಯನ್ನು ಶ್ಲಾಘಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು
ಕಾರ್ಯಕ್ರಮದಲ್ಲಿ ಐಟಿಐ ಸಂಸ್ಥೆಯ ನಿರ್ದೇಶಕ ರೆ.ಫಾ.ಸ್ಯಾಮುವೆಲ್ ಜಾರ್ಜ್, ಪೂರ್ವ ವಿದ್ಯಾರ್ಥಿ ಸಾಬು ಜಾನ್, ಪ್ರಾಂಶುಪಾಲ ಸಜಿ ಕೆ.ಥೋಮಸ್ ಹಾಗೂ ತರಬೇತಿ ಅಧಿಕಾರಿ ಜಾನ್ ಪಿ.ಎಸ್. ಉಪಸ್ಥಿತರಿದ್ದರು. ಜಾನ್ ಪಿ.ಎಸ್. ಅವರು ಸ್ವಾಗತಿಸಿದರು. ಉಪನ್ಯಾಸಕ ಹರಿಪ್ರಸಾದ್ ರೈ ಕಾರ್ಯಕ್ರಮ ನಿರೂಪಿಸಿದರು.



