







ಉಪ್ಪಿನಂಗಡಿ: ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿನಿ ಅನುಪ್ರಿಯಾ ಯೋಗದ ಹಿನ್ನೆಲೆ, ಮಹತ್ವ ಹಾಗೂ ಯೋಗಾಭ್ಯಾಸದಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಆಗುವ ಪ್ರಯೋಜನಗಳ ಕುರಿತು ಮಾಹಿತಿ ನೀಡಿದರು.
ಶಾಲಾ ಮುಖ್ಯಶಿಕ್ಷಕಿ ವೀಣಾ ಆರ್. ಪ್ರಸಾದ್ ಮಾತನಾಡಿ, ಯೋಗವು ಭಾರತೀಯ ಸಂಸ್ಕೃತಿಯ ಅಮೂಲ್ಯ ಕೊಡುಗೆಯಾಗಿದ್ದು, ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಯೋಗಾಭ್ಯಾಸವನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಯೋಗ ದಿನಾಚರಣೆಯ ಮಹತ್ವವನ್ನು ವಿವರಿಸಿದರು.
ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಶಿಕ್ಷಕಿ ಹಾಗೂ ಯೋಗ ಶಿಕ್ಷಕಿಯಾದ ವಿದ್ಯಾ ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಪ್ರಾಣಾಯಾಮ ಮತ್ತು ವಿವಿಧ ಯೋಗಾಸನಗಳನ್ನು ಅಭ್ಯಾಸ ಮಾಡಿದರು.
ಕಾರ್ಯಕ್ರಮದಲ್ಲಿ ಎಂಟನೇ ತರಗತಿಯ ಅದಿತಿ ಹಾಗೂ ಐದನೇ ತರಗತಿಯ ಅದ್ವಿಕಾ ಯೋಗ ಪ್ರದರ್ಶನ ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.



