ಇಚ್ಲಂಪಾಡಿ: ನೇರ್ಲ ಶಾಲೆಯಲ್ಲಿ ಪ್ರಜಾಪ್ರಭುತ್ವ ಮಾದರಿಯಲ್ಲಿ ಶಾಲಾ ಸಂಸತ್ ಚುನಾವಣೆ

ಶೇರ್ ಮಾಡಿ

 

ಇಚ್ಲಂಪಾಡಿ: ನೇರ್ಲ ಶಾಲೆಯಲ್ಲಿ ಪ್ರಜಾಪ್ರಭುತ್ವ ಮಾದರಿಯಲ್ಲಿ ಶಾಲಾ ಸಂಸತ್ ಚುನಾವಣೆ

ಇಚ್ಲಂಪಾಡಿ: ಇಲ್ಲಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ನೇರ್ಲದಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ತಿನ ಚುನಾವಣೆಯನ್ನು ಪ್ರಜಾಪ್ರಭುತ್ವದ ಮಾದರಿಯಲ್ಲಿ ಮತದಾನದ ಮೂಲಕ ಯಶಸ್ವಿಯಾಗಿ ನಡೆಸಲಾಯಿತು.

ಚುನಾವಣೆಯಲ್ಲಿ ಲತೇಶ್ ಅವರು ಶಾಲಾ ಮುಖ್ಯಮಂತ್ರಿಯಾಗಿ ಹಾಗೂ ಅನುಷ ಅವರು ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾದರು.

ಶಾಲಾ ಮುಖ್ಯ ಶಿಕ್ಷಕರಾದ ಹೆಚ್.ಎಂ.ಗಿರೀಶ್ ಅವರ ನೇತೃತ್ವದಲ್ಲಿ ಹಾಗೂ ಶಿಕ್ಷಕ ವೃಂದದ ಮಾರ್ಗದರ್ಶನದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲಾಯಿತು.

ಚುನಾವಣೆಯಲ್ಲಿ ಆಯ್ಕೆಯಾದ ನೂತನ ವಿದ್ಯಾರ್ಥಿ ಸಂಸತ್ತಿನ ಪದಾಧಿಕಾರಿಗಳಿಗೆ ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ ಹಾಗೂ ಶಾಲಾ ಸಿಬ್ಬಂದಿ ಶುಭ ಹಾರೈಸಿದರು.

 

Leave a Reply

error: Content is protected !!