ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಶೇರ್ ಮಾಡಿ

 

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ, ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಿರುದ್ಯಾವರ ಗ್ರಾಮದಲ್ಲಿ ಬುಧವಾರ ನಡೆದಿದೆ.

ಕಡಿರುದ್ಯಾವರದ ಪಾಡಿ ನಿವಾಸಿ ನಿಖಿತಾ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ನಿಖಿತಾ ಪ್ರಥಮ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ತಾಯಿ,ಮಗಳು ಇಬ್ಬರೇ ಮನೆಯಲ್ಲಿದ್ದರು. ತಾಯಿ ಬೆಳಗ್ಗೆ ಕೆಲಸಕ್ಕೆ ಹೋಗಿದ್ದರು. ಪುತ್ರಿ ನಿಖಿತಾ ಮನೆಯಲ್ಲಿ ಒಬ್ಬಳೇ ಇದ್ದಳು. ಮಧ್ಯಾಹ್ನದ ವೇಳೆಗೆ ಮನೆ ಎದುರಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬರಲಿಲ್ಲ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Leave a Reply

error: Content is protected !!