ನೆಲ್ಯಾಡಿ: ಸಿವಿಲ್ ಇಂಜಿನಿಯರ್ ಮ್ಯಾಥ್ಯೂ.ವಿ.ಎ ಹೃದಯಾಘಾತದಿಂದ ನಿಧನ

ಶೇರ್ ಮಾಡಿ

 

ನೆಲ್ಯಾಡಿ: ಸಿವಿಲ್ ಇಂಜಿನಿಯರ್ ಮ್ಯಾಥ್ಯೂ.ವಿ.ಎ ಹೃದಯಾಘಾತದಿಂದ ನಿಧನ

ನೆಲ್ಯಾಡಿ: ಕೌಕ್ರಾಡಿ ಗ್ರಾಮದ ಆಲಂಪಾಡಿ ನಿವಾಸಿ ಸಿವಿಲ್ ಇಂಜಿನಿಯರ್ ಮ್ಯಾಥ್ಯೂ ವಿ.ಎ (66) ಅವರು ಗುರುವಾರ ಬೆಳಿಗ್ಗೆ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು.

ಮೃತರು ಪುತ್ತೂರಿನ ಮಾಸ್ಟರ್ ಪ್ಲಾನ್‌ನಲ್ಲಿ ಹಲವು ವರ್ಷಗಳ ಕಾಲ ಸಿವಿಲ್ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸಿ, ತಮ್ಮ ವೃತ್ತಿ ಜೀವನದಲ್ಲಿ ಪ್ರಾಮಾಣಿಕ ಹಾಗೂ ನಿಷ್ಠಾವಂತ ಸೇವೆಯಿಂದ ಗುರುತಿಸಿಕೊಂಡಿದ್ದರು.

ಮೃತರು ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯ ಸ್ಥಾಪಕ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್ ಸೇರಿದಂತೆ ಮೂವರು ಸಹೋದರರು ಹಾಗೂ ನಾಲ್ವರು ಸಹೋದರಿಯರನ್ನು ಅಗಲಿದ್ದಾರೆ.

ಮೃತರ ನಿಧನಕ್ಕೆ ಕುಟುಂಬಸ್ಥರು, ಬಂಧು-ಬಳಗ, ಸ್ನೇಹಿತರು ಹಾಗೂ ಸಾರ್ವಜನಿಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

 

Leave a Reply

error: Content is protected !!