ಉಜಿರೆ: ನಿಯಂತ್ರಣ ತಪ್ಪಿದ ಶಾಲಾ ಬಸ್; ಮೂರು ಕಾರು, ಬೈಕ್‌ಗೆ ಡಿಕ್ಕಿ

ಶೇರ್ ಮಾಡಿ

 

ಉಜಿರೆ: ನಿಯಂತ್ರಣ ತಪ್ಪಿದ ಶಾಲಾ ಬಸ್; ಮೂರು ಕಾರು, ಬೈಕ್‌ಗೆ ಡಿಕ್ಕಿ

ಉಜಿರೆ: ಚಾರ್ಮಾಡಿ ಕಡೆಯಿಂದ ಉಜಿರೆ ಕಡೆಗೆ ಬರುತ್ತಿದ್ದ ಖಾಸಗಿ ವಿದ್ಯಾ ಸಂಸ್ಥೆಯ ಶಾಲಾ ಬಸ್ ಚಾಲಕನ ನಿಯಂತ್ರಣ ತಪ್ಪಿ ಮೂರು ಕಾರುಗಳು ಹಾಗೂ ಒಂದು ಬೈಕ್‌ಗೆ ಡಿಕ್ಕಿ ಹೊಡೆದ ಘಟನೆ ಶನಿವಾರ ಉಜಿರೆಯಲ್ಲಿ ನಡೆದಿದೆ.

ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ಬದಿಯಲ್ಲಿದ್ದ ಮಾರುತಿ ರಿಟ್ಸ್, ಮಾರುತಿ ಬಲೆನೋ, ಮಾರುತಿ ಬ್ರೆಝಾ ಕಾರುಗಳಿಗೆ ಹಾಗೂ ಒಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ವಾಹನಗಳು ಜಖಂಗೊಂಡಿವೆ. ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ವಾಹನ ಸಂಚಾರಕ್ಕೂ ಅಡಚಣೆ ಉಂಟಾಯಿತು. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಗಂಭೀರ ಗಾಯಗಳಾಗಿಲ್ಲ.

ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಅಪಘಾತದ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ.

 

Leave a Reply

error: Content is protected !!