ಪುತ್ತೂರು: ಹೃದಯಾಘಾತದಿಂದ ಭೂ ನ್ಯಾಯ ಮಂಡಳಿಯ ಸದಸ್ಯ ನಿರಂಜನ ರೈ ಮಠಂತಬೆಟ್ಟು ನಿಧನ

ಶೇರ್ ಮಾಡಿ

 

ಪುತ್ತೂರು: ಹೃದಯಾಘಾತದಿಂದ ಭೂ ನ್ಯಾಯ ಮಂಡಳಿಯ ಸದಸ್ಯ ನಿರಂಜನ ರೈ ಮಠಂತಬೆಟ್ಟು ನಿಧನ

ಪುತ್ತೂರು: ಭೂ ನ್ಯಾಯ ಮಂಡಳಿಯ ಸದಸ್ಯರು, ಕೋಡಿಂಬಾಡಿ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿದ್ದ ನಿರಂಜನ ರೈ ಮಠಂತಬೆಟ್ಟು ಅವರು ಬುಧವಾರ ಹೃದಯಾಘಾತದಿಂದ ನಿಧನರಾದರು.

ಬುಧವಾರ ಬೆಳಿಗ್ಗೆ ಪುತ್ತೂರಿನ ಸಹಾಯಕ ಆಯುಕ್ತರ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಭೂ ನ್ಯಾಯ ಮಂಡಳಿಯ ಕಲಾಪಕ್ಕೆ ಹಾಜರಾಗಿದ್ದ ನಿರಂಜನ ರೈ ಅವರು ಏಕಾಏಕಿ ಅಸ್ವಸ್ಥಗೊಂಡು ಕುಸಿದು ಬಿದ್ದರು. ಸ್ಥಳದಲ್ಲಿದ್ದವರು ಕೂಡಲೇ ಅವರನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು ಎಂದು ತಿಳಿದುಬಂದಿದೆ.

ನಿರಂಜನ ರೈ ಅವರು ಭೂ ನ್ಯಾಯ ಮಂಡಳಿಯ ಸದಸ್ಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದುದರ ಜೊತೆಗೆ ಕೋಡಿಂಬಾಡಿ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದರು. ಧಾರ್ಮಿಕ, ಸಾಮಾಜಿಕ ಹಾಗೂ ಸಾರ್ವಜನಿಕ ಕ್ಷೇತ್ರಗಳಲ್ಲಿ ಅವರ ಸೇವೆ ಗಮನಾರ್ಹವಾಗಿತ್ತು. ಕಂಬಳ ಕ್ಷೇತ್ರದಲ್ಲಿಯೂ ಅವರು ಚಿರಪರಿಚಿತರಾಗಿದ್ದು, ಪುತ್ತೂರು ಕೋಟಿ ಚೆನ್ನಯ ಕಂಬಳ ಸಮಿತಿಯ ಸಕ್ರಿಯ ಸದಸ್ಯರಾಗಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸಿದ್ದರು. ವಿವಿಧ ಕಂಬಳ ಸ್ಪರ್ಧೆಗಳಲ್ಲಿ ವೀಕ್ಷಕ ವಿವರಣೆಗಾರರಾಗಿ ತಮ್ಮ ವಿಶಿಷ್ಟ ನಿರೂಪಣೆಯ ಮೂಲಕ ಜನಮನ ಗೆದ್ದಿದ್ದರು.

 

Leave a Reply

error: Content is protected !!