










ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕಡಬ ತಾಲೂಕು, ಕಡಬ ವಲಯದ ಭಜನಾ ಪರಿಷತ್ ಸಭೆಯು ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಸುಂದರ ಒಗ್ಗು ಅವರ ಅಧ್ಯಕ್ಷತೆಯಲ್ಲಿ ಯೋಜನಾ ಕಚೇರಿಯಲ್ಲಿ ನಡೆಯಿತು.
ಸಭೆಯಲ್ಲಿ ಕಡಬ ವಲಯದ ಭಜನಾ ಪರಿಷತ್‌ನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಪ್ರೇಮ ವಿದ್ಯಾನಗರ, ಉಪಾಧ್ಯಕ್ಷರಾಗಿ ಸುಂದರ ಗೌಡ ಪಿಜಕಳ, ಕಾರ್ಯದರ್ಶಿಯಾಗಿ ಹರ್ಷಿಣಿ ಶಿವಕುಮಾರ್ ಪಟ್ನ, ಜೊತೆ ಕಾರ್ಯದರ್ಶಿಯಾಗಿ ಶೇಖರ ಗೌಡ ಕೆದೊಟ್ಟು ಹಾಗೂ ಕೋಶಾಧಿಕಾರಿಯಾಗಿ ರಾಜು ಬೆದ್ರಾಜೆ ಆಯ್ಕೆಯಾದರು. ಅಲ್ಲದೆ ವಿವಿಧ ಸದಸ್ಯರನ್ನೂ ಸಭೆಯಲ್ಲಿ ಆಯ್ಕೆ ಮಾಡಲಾಯಿತು.
ಭಜನಾ ಪರಿಷತ್‌ನ ಗೌರವ ಸಲಹೆಗಾರ ಸತ್ಯನಾರಾಯಣ ಹೆಗ್ಡೆ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿ, ಭಜನಾ ಪರಿಷತ್ ಸಮಾಜದಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಹೇಳಿದರು.
ವಲಯ ಮೇಲ್ವಿಚಾರಕ ವಿಜೇಶ್ ಜೈನ್ ಪ್ರಾಸ್ತಾವಿಕವಾಗಿ ಮಾತನಾಡಿ, ಭಜನಾ ಮಂಡಳಿಗಳ ಚಟುವಟಿಕೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವಂತೆ ಕರೆ ನೀಡಿದರು.
ಸಭೆಯಲ್ಲಿ ವಲಯ ಭಜನಾ ಪರಿಷತ್‌ನ ಗೌರವ ಅಧ್ಯಕ್ಷ ರಮೇಶ್ ಅಡಿಲ್, ವಿವಿಧ ಭಜನಾ ಮಂಡಳಿಗಳ ಸದಸ್ಯರು ಹಾಗೂ ಸೇವಾಪ್ರತಿನಿಧಿಗಳಾದ ಸವಿತಾ, ಅಪರ್ಣ, ಸಂದ್ಯಾ, ಜಯಲಕ್ಷ್ಮಿ, ಸರಿತಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಸೇವಾಪ್ರತಿನಿಧಿ ಸುಗುಣ ನಿರೂಪಿಸಿದರು. ದುರ್ಗಾವತಿ ಸ್ವಾಗತಿಸಿ, ನಳಿನಿ ವಂದಿಸಿದರು.



