ನೆಲ್ಯಾಡಿ: ಕಾಮಧೇನು ಶ್ರೀ ವರಮಹಾಲಕ್ಷ್ಮಿ ಸೇವಾ ಸಮಿತಿ ಸಭೆ

ಶೇರ್ ಮಾಡಿ

 

ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರಿ ಸಂಘ ನೆಲ್ಯಾಡಿಯ ಸಹಯೋಗದಲ್ಲಿ ಕಾಮಧೇನು ಶ್ರೀ ವರಮಹಾಲಕ್ಷ್ಮಿ ಸೇವಾ ಸಮಿತಿಯ ಸಭೆಯು ಸೋಮವಾರ ಮಧ್ಯಾಹ್ನ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಶಬರೀಶ ಕಲಾ ಮಂದಿರದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷೆಯನ್ನು ಕಾಮಧೇನು ಶ್ರೀ ವರಮಹಾಲಕ್ಷ್ಮಿ ಸೇವಾ ಸಮಿತಿಯ ಅಧ್ಯಕ್ಷರಾದ ಉಷಾ ಅಂಚನ್ ವಹಿಸಿಕೊಂಡು, ಆ.28ರಂದು ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಶಬರೀಶ ಕಲಾ ಮಂದಿರದಲ್ಲಿ ನಡೆಯಲಿರುವ ಶ್ರೀ ವರಮಹಾಲಕ್ಷ್ಮಿ ಪೂಜಾ ಮಹೋತ್ಸವದ ಸಿದ್ಧತೆ ಹಾಗೂ ವಿವಿಧ ವ್ಯವಸ್ಥೆಗಳ ಕುರಿತು ಸದಸ್ಯರೊಂದಿಗೆ ಸಮಾಲೋಚನೆ ನಡೆಸಿದರು.

ಪೂಜಾ ಕಾರ್ಯಕ್ರಮವನ್ನು ಭಕ್ತಿಪೂರ್ವಕವಾಗಿ ಹಾಗೂ ಅಚ್ಚುಕಟ್ಟಾಗಿ ನಡೆಸುವ ನಿಟ್ಟಿನಲ್ಲಿ ಅಗತ್ಯ ಪೂರ್ವಸಿದ್ಧತೆಗಳು, ಜವಾಬ್ದಾರಿ ಹಂಚಿಕೆ ಹಾಗೂ ಕಾರ್ಯಕ್ರಮದ ಯಶಸ್ಸಿಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಿತು.

ಸಭೆಯಲ್ಲಿ ಸಮಿತಿಯ ಪದಾಧಿಕಾರಿಗಳು, ಗೌರವಾನ್ವಿತ ಸದಸ್ಯರು ಹಾಗೂ ಮಹಿಳಾ ಸಹಕಾರಿ ಸಂಘದ ಸದಸ್ಯರು ಉಪಸ್ಥಿತರಿದ್ದು, ತಮ್ಮ ಸಲಹೆ-ಸೂಚನೆಗಳನ್ನು ಹಂಚಿಕೊಂಡರು.

ಸಮಿತಿಯ ಸಂಚಾಲಕರಾದ ಚೈತನ್ಯ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಸಮಿತಿಯ ಕಾರ್ಯದರ್ಶಿ ದಿವ್ಯಾ ಪಿ.ವಂದಿಸಿದರು.

 

Leave a Reply

error: Content is protected !!