ಕಡಬ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆಮರ ಮುರಿದು ಬಿದ್ದು ವ್ಯಕ್ತಿ ಮೃತ್ಯು; ಮೂವರು ಕಾರ್ಮಿಕರು ಅಪಾಯದಿಂದ ಪಾರು

ಶೇರ್ ಮಾಡಿ

 

ಕಡಬ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಡಿಕೆಮರ ಮುರಿದು ಬಿದ್ದು ವ್ಯಕ್ತಿ ಮೃತ್ಯು; ಮೂವರು ಕಾರ್ಮಿಕರು ಅಪಾಯದಿಂದ ಪಾರು

ಕಡಬ: ಕಡಬ ತಾಲೂಕಿನ ಕುಂತೂರು ಗ್ರಾಮದ ಗುತ್ತುಪಾಲು ಎಂಬಲ್ಲಿ ಶುಕ್ರವಾರದಂದು ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಬೀಸಿದ ಬಿರುಗಾಳಿ ಹಾಗೂ ಮಳೆಯ ಪರಿಣಾಮ ಅಡಿಕೆಮರವೊಂದು ಮುರಿದು ಬಿದ್ದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ಮೃತರನ್ನು ಕುಂತೂರು ಗ್ರಾಮದ ಕೇವಳ ನಿವಾಸಿ ಯಾದವ ಗೌಡ(66) ಎಂದು ಗುರುತಿಸಲಾಗಿದೆ.ಯಾದವ ಗೌಡ ಅವರು ತೋಟದಲ್ಲಿ ಇತರೆ ಕಾರ್ಮಿಕರೊಂದಿಗೆ ಕೆಲಸ ನಿರ್ವಹಿಸುತ್ತಿದ್ದ ವೇಳೆ ಬಲವಾದ ಗಾಳಿ ಬೀಸಿದ್ದು, ಅಡಿಕೆಮರ ಮುರಿದು ಅವರ ಮೇಲೆ ಬಿದ್ದ ಪರಿಣಾಮ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದೇ ತೋಟದಲ್ಲಿ ಕೆಲಸ ಮಾಡುತ್ತಿದ್ದ ಇತರೆ ಮೂವರು ಕಾರ್ಮಿಕರು ಅಪಾಯದಿಂದ ಪಾರಾಗಿದ್ದಾರೆ.

ಘಟನೆಯ ಬಳಿಕ ಮೃತದೇಹವನ್ನು ಕಡಬ ಸಮುದಾಯ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ತಹಶೀಲ್ದಾರ್ ಗಣೇಶ್ ಸವಣೂರ, ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

 

Leave a Reply

error: Content is protected !!