ನೇಸರ ಮಾ.28: ಬೆಳ್ತಂಗಡಿ : ಮೆದುಳಿನ ರಕ್ತಸ್ರಾವದಿಂದ ಮಾ.27 ರಂದು ಮೃತ ಪಟ್ಟ ಬಜಕ್ರೆಸಾಲು ನಿವಾಸಿ, ಕೊಕ್ಕಡದ ಗ್ರಾಮಕರಣೀಕ ರೂಪೇಶ್ ಮನೆಗೆ ಮಾ.28 ರಂದು ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು.
ನಂತರ ಮನೆಯವರಿಗೆ ಸಾಂತ್ವನ ಹೇಳಿ ಸರ್ಕಾರದಿಂದ ಸಿಗುವ ಎಲ್ಲಾ ರೀತಿಯ ಸವಲತ್ತುಗಳನ್ನು ನೀಡುವಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.ಈ ಸಂದರ್ಭ ಪುತ್ತೂರು ಎಸಿ ಗಿರೀಶ್ ನಂದನ್ ಹಾಗೂ ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್, ಬೆಳ್ತಂಗಡಿ ತಹಶೀಲ್ದಾರ್ ಮಹೇಶ್ ಜೆ. ಬಂಟ್ವಾಳ ತಹಶೀಲ್ದಾರ್ ರಶ್ಮಿ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್ ಸೇರಿದಂತೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು, ಕರ್ನಾಟಕ ರಾಜ್ಯ ನೌಕರರ ಸಂಘದ ತಾಲೂಕು ಅಧ್ಯಕ್ಷ ಜಯರಾಜ್ ಜೈನ್ ಮತ್ತು ಪದಾಧಿಕಾರಿಗಳು, ವಿವಿಧ ಇಲಾಖಾ ಅಧಿಕಾರಿಗಳು, ಜನಪ್ರತಿನಿಧಿಗಳು, ಸ್ಥಳೀಯ ಗ್ರಾಮಸ್ಥರು, ಬಂಧು ಮಿತ್ರರು, ಅಂತಿಮ ನಮನ ಸಲ್ಲಿಸಿದರು.
—ಜಾಹೀರಾತು—