ನೇಸರ ಮಾ.28: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ನೇತ್ರಾವತಿ ಸ್ನಾನ ಘಟ್ಟದ ಬಳಿಯಿಂದ ಶ್ರೀ ಕ್ಷೇತ್ರಕ್ಕೆ ಯಾತ್ರಾರ್ಥಿಯಾಗಿ ಬಂದ ಕುಂದಾಪುರ ಮೂಲದ ಶ್ರೀಧರ ನಾಯರಿ ಎಂಬವರು ಸ್ನಾನ ಮಾಡುವ ಸಮಯದಲ್ಲಿ ತನ್ನ ಬ್ಯಾಗಿನಲ್ಲಿ ಇರಿಸಿದ್ದ ಚಿನ್ನಾಭರಣ ಹಾಗೂ ನಗದು ಕಳ್ಳತನವಾದ ಬಗ್ಗೆ ದೂರು ನೀಡಿದ ಅನ್ವಯ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಇದರ ಪತ್ತೆಯ ಬಗ್ಗೆ ಧರ್ಮಸ್ಥಳ ಪೊಲೀಸ್ ಉಪನಿರೀಕ್ಷಕರ ತಂಡವು ಆರೋಪಿ ಮಹಾರಾಷ್ಟ್ರದ ಮಿತುನ್ ಚೌವಾಣ್ (31)ವರ್ಷ ಬಂಧಿಸಲಾಗಿದ್ದು ಅಂದಾಜು 2.4 ಲಕ್ಷ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯು ವಿವಿಧ ಪ್ರಸಿದ್ಧ ಯಾತ್ರ ಸ್ಥಳಗಳಿಂದ ಕಳ್ಳತನ ಮಾಡುತ್ತಿದ್ದ. ಈತನ ಮೇಲೆ ಮೇಲೆ ಮಹಾರಾಷ್ಟ್ರ ರಾಜ್ಯದ ಪೂಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿರುವುದು ಕಂಡು ಬಂದಿದ್ದು, ಸದ್ರಿ ಆರೋಪಿಯನ್ನು ತಂಡ ಪತ್ತೆ ಮಾಡಿದೆ.ಈ ತಂಡದಲ್ಲಿ ಪೊಲೀಸ್ ಅಧೀಕ್ಷಕರಾದ ಋಷಿಕೇಶ್ ಸೋನಾವಣೆ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕುಮಾರ್ ಚಂದ್ರ ರವರ ಮಾರ್ಗದರ್ಶನದಲ್ಲಿ ಪೊಲೀಸ್ ಉಪಧೀಕ್ಷಕರು ಬಂಟ್ವಾಳ ಉಪವಿಭಾಗ ಪ್ರಕಾಶ್ ಸಿಂಗ್ ತೋರಭ್ ಮತ್ತು ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರು ಶಿವಕುಮಾರ್ ರವರ ನೇತೃತ್ವದಲ್ಲಿ ಪಿ.ಎಸ್.ಐ ಕೃಷ್ಣಕಾಂತ್ ಪಾಟೀಲ್ ರವರ ವಿಶೇಷ ತಂಡದ ಸಿಬ್ಬಂದಿಗಳಾದ ಹೆಚ್ ಸಿ ಪ್ರಶಾಂತ್, ಹೆಚ್ ಸಿ ರಾಹುಲ್, ಪಿ ಸಿ ಸತೀಶ ನಾಯ್ಕ ಜಿ, ಹೆಚ್ ಸಿ ವಿಜು, ಎಚ್ ಸಿ ರವೀಂದ್ರ, ಎಚ್ ಸಿ ಕೃಷ್ಣಪ್ಪ ಮತ್ತು ಜಿಲ್ಲಾ ಗಣಕಯಂತ್ರದ ವಿಭಾಗದ ಸಂಪತ್ ಮತ್ತು ದಿವಾಕರ ರವರು ಭಾಗವಹಿಸಿದ್ದರು.