ತಾಲೂಕು ಮಟ್ಟದ ಪಂದ್ಯಾಟದಲ್ಲಿ ಬಾಲಕ–ಬಾಲಕಿಯರ ತಂಡಕ್ಕೆ ಪ್ರಥಮ ಸ್ಥಾನ; ಪ್ರಾಥಮಿಕ ಶಾಲೆಯ ಬಾಲಕಿಯರಿಗೆ ದ್ವಿತೀಯ ಸ್ಥಾನ








ನೆಲ್ಯಾಡಿ: ಶಾಲಾ ಶಿಕ್ಷಣ ಇಲಾಖೆ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಕಾಂಚನ ವೆಂಕಟಸುಬ್ರಹ್ಮಣ್ಯಂ ಸ್ಮಾರಕ ಪ್ರೌಢಶಾಲೆ, ಕಾಂಚನದಲ್ಲಿ ನಡೆದ ತಾಲೂಕು ಮಟ್ಟದ ಹ್ಯಾಂಡ್ಬಾಲ್ ಪಂದ್ಯಾಟದಲ್ಲಿ ಕಾಂಚನ ಪ್ರೌಢಶಾಲೆಯ 17ರ ವಯೋಮಾನದ ಬಾಲಕರ ಹಾಗೂ ಬಾಲಕಿಯರ ತಂಡಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿವೆ.
ಇದೇ ಪಂದ್ಯಾಟದಲ್ಲಿ ಕಾಂಚನ ಪ್ರಾಥಮಿಕ ಶಾಲೆಯ 14ರ ವಯೋಮಾನದ ಬಾಲಕಿಯರ ತಂಡ ದ್ವಿತೀಯ ಸ್ಥಾನ ಗಳಿಸಿದ್ದು, ತಂಡದ ಏಳು ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಪ್ರೌಢಶಾಲೆಯ ಮುಖ್ಯಶಿಕ್ಷಕ ರಾಧಾಕೃಷ್ಣ ಎಸ್. ಹಾಗೂ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಲಕ್ಷ್ಮಣ ಗೌಡ ಅವರ ಮಾರ್ಗದರ್ಶನ, ದೈಹಿಕ ಶಿಕ್ಷಣ ಶಿಕ್ಷಕ ಸುಭಾಶ್ಚಂದ್ರ ಕೆ. ಅವರ ತರಬೇತಿ ಹಾಗೂ ನಿರಂತರ ಪ್ರೋತ್ಸಾಹ ಪ್ರಮುಖ ಕಾರಣವಾಗಿದೆ.
ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಶಿಕ್ಷಕ–ಶಿಕ್ಷಕೇತರ ವೃಂದ ಹಾಗೂ ಶಿಕ್ಷಕ–ರಕ್ಷಕ ಸಂಘದ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.









































































































