ನೆಲ್ಯಾಡಿ: ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ವಲಯಕ್ಕೆ ಸಂಬಂಧಿಸಿದ 7ನೇ ಕರಡು ಅಧಿಸೂಚನೆಯನ್ನು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸಂಪೂರ್ಣವಾಗಿ ಕೈಬಿಡಬೇಕು ಎಂದು ಆಗ್ರಹಿಸಿ ಕೌಕ್ರಾಡಿ ಹಾಗೂ ಇಚ್ಲಂಪಾಡಿ ಗ್ರಾಮಸ್ಥರು ಸೆ.8ರಂದು ಕೌಕ್ರಾಡಿ ಗ್ರಾಮ ಪಂಚಾಯಿತಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.
ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ ಅವರ ನೇತೃತ್ವದಲ್ಲಿ ಕೌಕ್ರಾಡಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ದೇವಿಕಾ ಅವರ ಮೂಲಕ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯಕ್ಕೆ ಮನವಿ ಸಲ್ಲಿಸಲಾಯಿತು. ಗ್ರಾಮಸ್ಥರು ಕಸ್ತೂರಿ ರಂಗನ್ ವರದಿ ಹಾಗೂ ಪರಿಸರ ಸೂಕ್ಷ್ಮ ವಲಯ ಘೋಷಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು.
ಈ ಹಿಂದೆ ಕಸ್ತೂರಿ ರಂಗನ್ ವರದಿ ಹಾಗೂ ಪರಿಸರ ಸೂಕ್ಷ್ಮ ವಲಯ ಘೋಷಣೆಯನ್ನು ವಿರೋಧಿಸಿ ನಡೆದ ವಿಶೇಷ ಗ್ರಾಮಸಭೆಗಳಲ್ಲಿ ಗ್ರಾಮಸ್ಥರು ಒಕ್ಕೊರಲಿನಿಂದ ವಿರೋಧ ವ್ಯಕ್ತಪಡಿಸಿ ನಿರ್ಣಯ ಕೈಗೊಂಡಿದ್ದರೂ, ಇದೀಗ ಮತ್ತೆ 7ನೇ ಬಾರಿಗೆ ಕರಡು ಅಧಿಸೂಚನೆ ಹೊರಡಿಸಿರುವುದು ಖಂಡನೀಯ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಪರಿಸರ ಸೂಕ್ಷ್ಮ ವಲಯ ಘೋಷಣೆ ಜಾರಿಯಾದಲ್ಲಿ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುವುದರ ಜತೆಗೆ ಮಲೆನಾಡಿನ ರೈತರ ಆರ್ಥಿಕ ವ್ಯವಸ್ಥೆಯ ಮೇಲೂ ಪ್ರತಿಕೂಲ ಪರಿಣಾಮ ಬೀರಲಿದೆ. ರೈತರ ಹಕ್ಕುಪತ್ರ, ಕೃಷಿ ಭೂಮಿ, ಸಾರ್ವಜನಿಕ ಆಸ್ತಿಗಳು ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೂ ಅಡ್ಡಿಯಾಗುವ ಸಾಧ್ಯತೆಯಿದ್ದು, ಇದರಿಂದ ಜನಸಾಮಾನ್ಯರು ತೀವ್ರ ಸಂಕಷ್ಟಕ್ಕೆ ಸಿಲುಕುವ ಆತಂಕವಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಪಶ್ಚಿಮ ಘಟ್ಟ ಹಾಗೂ ಜನವಸತಿ ಪ್ರದೇಶಗಳ ಗಡಿಯನ್ನು ಸ್ಪಷ್ಟವಾಗಿ ಗುರುತಿಸಬೇಕು. ಕೃಷಿ ಮತ್ತು ಅರಣ್ಯ ಭೂಮಿಗಳ ನಡುವಿನ ಪ್ರದೇಶಗಳಲ್ಲಿ ಆನೆ ಕಂದಕ ನಿರ್ಮಿಸಬೇಕು. ಕೃಷಿ ಭೂಮಿ ಹಾಗೂ ಜನವಸತಿ ಪ್ರದೇಶಗಳಿಗೆ ಅರಣ್ಯ ಸಂರಕ್ಷಣಾ ಕಾಯ್ದೆ ಅನ್ವಯಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಜಂಟಿ ಸರ್ವೆ ನಡೆಸಿ ಅರ್ಹ ರೈತರ ಭೂಮಿಗೆ ಹಕ್ಕುಪತ್ರ ನೀಡಬೇಕು. ರೈತರ ಸುರಕ್ಷತೆಗಾಗಿ ಕೋವಿ ಪರವಾನಿಗೆ ನೀಡಬೇಕು ಎಂಬ ಪ್ರಮುಖ ಬೇಡಿಕೆಗಳನ್ನು ಮನವಿಯಲ್ಲಿ ಮುಂದಿಡಲಾಗಿದೆ.
ಬೇಡಿಕೆಗಳ ಬಗ್ಗೆ ಸರಕಾರ ತಕ್ಷಣ ಸೂಕ್ತ ಕ್ರಮ ಕೈಗೊಂಡು ರೈತರ ಹಾಗೂ ಗ್ರಾಮಸ್ಥರ ಆತಂಕವನ್ನು ನಿವಾರಿಸಬೇಕು. ಇಲ್ಲವಾದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಹಾಗೂ ಬಾಧಿತ ಗ್ರಾಮಸ್ಥರನ್ನು ಒಳಗೊಂಡು ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಗ್ರಾಮಸ್ಥರಾದ ರಾಧಾಕೃಷ್ಣ ಕೆರ್ನಡ್ಕ, ನಾಗೇಶ್ ನಳಿಯಾರ್, ವರ್ಗೀಸ್ ಅಬ್ರಹಾಂ, ಕುಶಾಲಪ್ಪ ಗೌಡ ಅನಿಲ, ಸಿದ್ದೀಕ್ ನೆಲ್ಯಾಡಿ, ಇಸ್ಮಾಯಿಲ್ ನೆಲ್ಯಾಡಿ, ಬಿಜುಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹೆದ್ದಾರಿ ತಡೆಗೆ ಮುಂದಾದ ಪ್ರತಿಭಟನಾಕಾರರು; ಪೊಲೀಸರೊಂದಿಗೆ ವಾಗ್ವಾದ — ಒಂದು ತಿಂಗಳಲ್ಲಿ ಸುರಕ್ಷತಾ ಪರಿಶೀಲನೆ ನಡೆಸಿ ಕ್ರಮದ ಭರವಸೆ ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನೆಲ್ಯಾಡಿ ...
ಕೊಕ್ಕಡ: ಕರಾವಳಿ ಕೊಂಕಣಿ ಕ್ರೈಸ್ತ ಸಮುದಾಯದ ಪ್ರಮುಖ ಧಾರ್ಮಿಕ ಹಬ್ಬಗಳಲ್ಲಿ ಒಂದಾದ ಮೊಂತಿ ಫೆಸ್ತ್ (ತೆನೆ ಹಬ್ಬ)ವನ್ನು ಸೆ. 8ರಂದು ಕೊಕ್ಕಡ ಸಂತ ಜೋನರ ದೇವಾಲಯದಲ್ಲಿ ಸಾಂಪ್ರದಾಯಿಕ ...
ನೆಲ್ಯಾಡಿ: ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ವಲಯಕ್ಕೆ ಸಂಬಂಧಿಸಿದ 7ನೇ ಕರಡು ಅಧಿಸೂಚನೆಯನ್ನು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸಂಪೂರ್ಣವಾಗಿ ಕೈಬಿಡಬೇಕು ಎಂದು ಆಗ್ರಹಿಸಿ ಕೌಕ್ರಾಡಿ ಹಾಗೂ ...
ನೆಲ್ಯಾಡಿ: ಪುತ್ತೂರು ಶಿಶು ಅಭಿವೃದ್ಧಿ ಯೋಜನೆಯ ನೆಲ್ಯಾಡಿ ವಲಯದ ಬೀಡುಬೈಲು ಅಂಗನವಾಡಿ ಕೇಂದ್ರದಲ್ಲಿ ಸುಮಾರು 36 ವರ್ಷಗಳ ಕಾಲ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ಶಾಲಿನಿ ಹಾಗೂ ...
ನೆಲ್ಯಾಡಿ: ಮಲೆನಾಡು ಜನಹಿತ ರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಇದರ ಆಶ್ರಯದಲ್ಲಿ ಕಸ್ತೂರಿ ರಂಗನ್ ವರದಿ ಜಾರಿ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ ಮಂಗಳವಾರದಂದು ಗೋಳಿತ್ತೋಟ್ಟು ಗ್ರಾಮ ಪಂಚಾಯತ್ ...
ನೆಲ್ಯಾಡಿ: ಪ್ರಾಥಮಿಕ ಆರೋಗ್ಯ ಕೇಂದ್ರ ನೆಲ್ಯಾಡಿಯಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ ಇಬ್ಬರು ಆರೋಗ್ಯ ಇಲಾಖೆಯ ಸಿಬ್ಬಂದಿ ಮುಂಬಡ್ತಿ ಹೊಂದಿ ಬೇರೆಡೆಗೆ ವರ್ಗಾವಣೆಗೊಂಡಿದ್ದಾರೆ. ಪ್ರಾಥಮಿಕ ಆರೋಗ್ಯ ...
51ಕ್ಕೂ ಅಧಿಕ ಸಂಘ-ಸಂಸ್ಥೆಗಳ ಬೆಂಬಲ; ಜಿಲ್ಲಾಧಿಕಾರಿ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೆ ಪ್ರತಿಭಟನೆ ಮುಂದುವರಿಸುವ ಎಚ್ಚರಿಕೆ ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಅಡ್ಡಹೊಳೆ–ಬಿ.ಸಿ.ರೋಡ್ ನಡುವಿನ ...
ಉಪ್ಪಿನಂಗಡಿ: ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಯವರ ಕಚೇರಿಯಲ್ಲಿ ಕಳೆದ ಒಂಬತ್ತು ವರ್ಷಗಳಿಂದ ದ್ವಿತೀಯ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಉಷಾಕಿರಣ. ಬಿ. ಅವರು ಮಂಗಳೂರು ವೃತ್ತ ಅರಣ್ಯ ಕಚೇರಿಗೆ ...
ನೆಲ್ಯಾಡಿ: ಜೆಸಿಐ ನೆಲ್ಯಾಡಿ ಘಟಕದ ವತಿಯಿಂದ ಜೆಸಿ ಸಪ್ತಾಹದ ಉದ್ಘಾಟನೆ ಹಾಗೂ ನೆಲ್ಯಾಡಿಯ ಆಟೋ ಚಾಲಕರಿಗೆ ಸ್ಟೀಲ್ ಬಾಟಲ್ ವಿತರಿಸುವ ಕಾರ್ಯಕ್ರಮ ಭಾನುವಾರದಂದು ನೆಲ್ಯಾಡಿಯ ಗೌರಿಜಾಲ್ ಆರ್ಕೇಡ್ನಲ್ಲಿ ...
ನೆಲ್ಯಾಡಿ: ಶೌರ್ಯ ವಿಪತ್ತು ನಿರ್ವಹಣಾ ತಂಡ ಉಪ್ಪಿನಂಗಡಿ ಬಜತ್ತೂರು ಘಟಕದ ವತಿಯಿಂದ ಬಜತ್ತೂರು ಗ್ರಾಮದ ಮಣ್ಣಿಮೇರು ಎಂಬಲ್ಲಿ ಏಕಾಂಗಿಯಾಗಿ ವಾಸ್ತವ್ಯವಿದ್ದ ಬಡ ಮಹಿಳೆ ಜಾನಕಿ ಎಂಬವರಿಗೆ ನಿರ್ಮಿಸಲಾದ ...
ತಾಲೂಕು ಮಟ್ಟದ ಪಂದ್ಯಾಟದಲ್ಲಿ ಬಾಲಕ–ಬಾಲಕಿಯರ ತಂಡಕ್ಕೆ ಪ್ರಥಮ ಸ್ಥಾನ; ಪ್ರಾಥಮಿಕ ಶಾಲೆಯ ಬಾಲಕಿಯರಿಗೆ ದ್ವಿತೀಯ ಸ್ಥಾನ ನೆಲ್ಯಾಡಿ: ಶಾಲಾ ಶಿಕ್ಷಣ ಇಲಾಖೆ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ...
‘ಸಂಕಲ್ಪ @ 75’ ಕಾರ್ಯಕ್ರಮಕ್ಕೆ ಚಾಲನೆ; ಪೂರ್ವ ವಿದ್ಯಾರ್ಥಿಗಳ ಸಮಾಗಮ, ನಿವೃತ್ತ ಶಿಕ್ಷಕರಿಗೆ ಗುರುವಂದನೆ ನೆಲ್ಯಾಡಿ: ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ನ 75ನೇ ವರ್ಷದ ಸಂಭ್ರಮಾಚರಣೆ ಹಾಗೂ ...
ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಗುರುವಂದನಾ ಕಾರ್ಯಕ್ರಮ ನೆಲ್ಯಾಡಿ: ಗುರುಗಳನ್ನು ದೇವರ ಸ್ಥಾನದಲ್ಲಿ ಇಟ್ಟು ಗೌರವಿಸಿ ಆರಾಧಿಸಬೇಕು. ಕತ್ತಲೆಯಿಂದ ಬೆಳಕಿನ ಕಡೆಗೆ ಕೊಂಡೊಯ್ಯುವವರೇ ...
23 ವರ್ಷಗಳ ಶೈಕ್ಷಣಿಕ ಸೇವೆ, ಬಡ ವಿದ್ಯಾರ್ಥಿಗಳಿಗೆ ನೆರವು, ಶಾಲಾ ಅಭಿವೃದ್ಧಿಯಲ್ಲಿ ಮಹತ್ವದ ಕೊಡುಗೆ ನೆಲ್ಯಾಡಿ: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ನೆಲ್ಯಾಡಿಯ ಸಂತ ಜಾರ್ಜ್ ...
ಕೃತ್ಯಕ್ಕೆ ಬಳಸುತ್ತಿದ್ದ ವಾಹನ ಹಾಗೂ ಪರಿಕರಗಳು ಪೊಲೀಸರ ವಶಕ್ಕೆ ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಲಂಪಾಡಿ ಕ್ರಾಸ್ ಸಮೀಪ ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳಿಂದ ಡೀಸೆಲ್ ಕಳವು ...
ನೆಲ್ಯಾಡಿ: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘವು 24ನೇ ವರ್ಷವನ್ನು ಯಶಸ್ವಿಯಾಗಿ ಪೂರೈಸಿ 25ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಹಿನ್ನೆಲೆಯಲ್ಲಿ ನೆಲ್ಯಾಡಿ ಶಾಖೆಯಲ್ಲಿ ಬುಧವಾರ ಸ್ಥಾಪನ ದಿನಾಚರಣೆಯನ್ನು ...
ಕೊಕ್ಕಡ: ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಶ್ರೀ ಶಿಶಿಲೇಶ್ವರ ದೇವರ ಸನ್ನಿಧಾನದಲ್ಲಿ ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ ಶ್ರೀ ಶಿಶಿಲೇಶ್ವರ ದೇವರಿಗೆ ವಿಶೇಷ ...
ಮಂಗಳೂರು: ಶಾಲಾ ಮಕ್ಕಳನ್ನು ಸುರಕ್ಷಿತವಾಗಿ ಕರೆದೊಯ್ಯುವ ನಿಟ್ಟಿನಲ್ಲಿ ಕಾನೂನು ನಿಯಮಗಳು ಹಾಗೂ ಸಂಚಾರ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಶಾಲಾ ಬಸ್ ಚಾಲಕರು, ನಿರ್ವಾಹಕರು, ಮಾಲೀಕರು ಹಾಗೂ ...
ಕೊಕ್ಕಡ: ಆನೆಗಳ ಹಾವಳಿಯಿಂದ ಸಾರ್ವಜನಿಕರು, ಕೃಷಿಕರು ಹಾಗೂ ಅವರ ಕೃಷಿ ಮತ್ತು ಆಸ್ತಿಪಾಸ್ತಿಗಳಿಗೆ ಹಾನಿಯಾಗದಂತೆ, ಆನೆ ಹಾವಳಿ ನಿಯಂತ್ರಣಕ್ಕೆ ಬಂದು ಜನರು ನೆಮ್ಮದಿಯಿಂದ ಬದುಕುವಂತಾಗಲಿ ಎಂದು ಪ್ರಾರ್ಥಿಸಿ ...
ಧರ್ಮಸ್ಥಳ ಭಜನಾ ಕಮ್ಮಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರಾರ್ಥಿಗಳು ಭಾಗವಹಿಸಲು ಕರೆ ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಬಿ.ಸಿ. ಟ್ರಸ್ಟ್, ಕಡಬ ತಾಲೂಕು ಭಜನಾ ...
ನೆಲ್ಯಾಡಿ: ನೆಲ್ಯಾಡಿ, ಶಿರಾಡಿ ಹಾಗೂ ಮರ್ದಾಳ ಗ್ರಾಮ ಪಂಚಾಯಿತಿಗಳಿಗೆ ಮಂಗಳವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವಿವಿಧ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಗ್ರಾಮ ಪಂಚಾಯಿತಿಗಳ ಕಚೇರಿಗಳಿಗೆ ಭೇಟಿ ...
ನೆಲ್ಯಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಅಶ್ವಿನಿ ಆಸ್ಪತ್ರೆ ನೆಲ್ಯಾಡಿ, ಶ್ರೀನಿವಾಸ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಮುಕ್ಕ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ನೆಲ್ಯಾಡಿ ...
ನೆಲ್ಯಾಡಿ: ಪ್ರತಿಯೊಬ್ಬರ ಜೀವನದಲ್ಲಿಯೂ ಹೊಸ ಕನಸುಗಳು, ಹೊಸ ಭರವಸೆಗಳು ಹಾಗೂ ಹೊಸ ಆಲೋಚನೆಗಳು ಇರುತ್ತವೆ. ಸಂಸ್ಥೆಗೆ ನೂತನವಾಗಿ ಆಗಮಿಸಿರುವ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಹೊಸ ಕನಸು, ಹೊಸ ಯೋಜನೆ, ...
ನೆಲ್ಯಾಡಿ: ಶ್ರೀ ರಾಮ ವಿದ್ಯಾಲಯ, ನೆಲ್ಯಾಡಿಯಲ್ಲಿ ನಡೆದ ಅಂಡರ್–14 ಉಪ್ಪಿನಂಗಡಿ ವಲಯ ಮಟ್ಟದ ಖೋ-ಖೋ ಸ್ಪರ್ಧೆಯಲ್ಲಿ ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್, ನೆಲ್ಯಾಡಿಯ ಬಾಲಕ ಹಾಗೂ ...
ನೆಲ್ಯಾಡಿ: ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್, ನೆಲ್ಯಾಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಕಡಬ ತಾಲೂಕು ವ್ಯಾಪ್ತಿಯ ನೆಲ್ಯಾಡಿ ಶೌರ್ಯ ...
₹45 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ರಂಗಮಂಟಪಕ್ಕೆ ನಳಿನ್ ಕುಮಾರ್ ಕಟೀಲ್ ಚಾಲನೆ ನೆಲ್ಯಾಡಿ: ಶ್ರೀ ಶಬರೀಶ ಬಯಲು ರಂಗಮಂಟಪಕ್ಕೆ ಶಿಲಾನ್ಯಾಸ ನೆಲ್ಯಾಡಿ: ನೆಲ್ಯಾಡಿ–ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ...
ಗಾಂಧಿ ಮೈದಾನದ ಬಳಿ ಯು-ಟರ್ನ್ ಕಲ್ಪಿಸುವಂತೆ ಆಗ್ರಹ; ನೂರಕ್ಕೂ ಅಧಿಕ ಮಂದಿ ಸಭೆಯಲ್ಲಿ ಮಹತ್ವದ ನಿರ್ಧಾರ ಸೆ.9ರಂದು ನೆಲ್ಯಾಡಿಯಲ್ಲಿ ಯು-ಟರ್ನ್ಗಾಗಿ ಬೃಹತ್ ಪ್ರತಿಭಟನೆ ನೂರಕ್ಕೂ ಅಧಿಕ ಮಂದಿ ...
ಕೊಕ್ಕಡ: ಇಲ್ಲಿನ ಪ್ರಸಿದ್ಧ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ನೂತನ ಗರ್ಭಗುಡಿಗಳ ಶಿಲಾನ್ಯಾಸ ಕಾರ್ಯಕ್ರಮವು ಗುರುವಾರ ಧಾರ್ಮಿಕ ವಿಧಿವಿಧಾನಗಳೊಂದಿಗೆ ...
ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆಸಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಆರೋಪದ ಹಿನ್ನೆಲೆಯಲ್ಲಿ, ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರಿಗೆ ಟಾಟಾ ಸುಮೊದಿಂದ ಡಿಕ್ಕಿ ಹೊಡೆದ ಪ್ರಕರಣಕ್ಕೆ ...
ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿ ಎಂಬಲ್ಲಿ ಕಾರೊಂದು ಹೆದ್ದಾರಿ ಮಧ್ಯದಲ್ಲಿ ತಾತ್ಕಾಲಿಕವಾಗಿ ಅಳವಡಿಸಲಾಗಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಭಾನುವಾರ ...
ಇಚ್ಲಂಪಾಡಿ: ಕ್ರಿಶ್ಚಿಯನ್ ಬ್ರದರ್ಸ್ ಟ್ರಸ್ಟ್ ಇದರ ವತಿಯಿಂದ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಸಹಯೋಗದಲ್ಲಿ ಭಾನುವಾರದಂದು ಇಚ್ಲಂಪಾಡಿಯ ಸಂತ ಜಾರ್ಜ್ ಅರ್ಥೋಡೊಕ್ಸ್ ಸಿರಿಯನ್ ಚರ್ಚ್ ಸಭಾಂಗಣದಲ್ಲಿ ...
ಪುತ್ತೂರು: ಆನಡ್ಕ ಕಡೆಯಿಂದ ಪಡೀಲ್ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಪಿಕ್ಅಪ್ ವಾಹನವನ್ನು ಪುತ್ತೂರು ನಗರ ಠಾಣಾ ಪೊಲೀಸರು ಜಿಡೆಕಲ್ಲು ಬಳಿ ತಡೆದು, ಮೂರು ಜಾನುವಾರುಗಳನ್ನು ...
ಇಚ್ಲಂಪಾಡಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ನೇರ್ಲ–ಇಚ್ಲಂಪಾಡಿಯ ಶಾಲಾ ಆವರಣದ ಭದ್ರತೆ ಹಾಗೂ ಮೂಲಸೌಕರ್ಯವನ್ನು ಗಮನದಲ್ಲಿಟ್ಟುಕೊಂಡು ಹಳೆ ವಿದ್ಯಾರ್ಥಿನಿ ಕುಮಾರಿ ಆದಿರಾ ಉದಯಕುಮಾರ್ ...
ನೆಲ್ಯಾಡಿ: ನೆಲ್ಯಾಡಿ ಹಾಗೂ ಸುತ್ತಮುತ್ತ ಬೈಕ್ ಕಳ್ಳತನ ಪ್ರಕರಣಗಳು ಮತ್ತೆ ಮುಂದುವರಿದಿರುವ ಶಂಕೆ ವ್ಯಕ್ತವಾಗಿದ್ದು, ಹೊಸಮಜಲು ಸಮೀಪದ ಗ್ಯಾರೇಜ್ನಲ್ಲಿ ಲಾಕ್ ಮಾಡಿ ನಿಲ್ಲಿಸಿದ್ದ ಪಲ್ಸರ್ ...
ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಮಳೆಗಾಲದಲ್ಲಿ ಆಗಮಿಸುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಬ್ಯಾಂಕ್ ಆಫ್ ಬರೋಡಾ ವತಿಯಿಂದ ₹5 ಲಕ್ಷ ವೆಚ್ಚದಲ್ಲಿ ನಿರ್ಮಿಸಿಕೊಡಲಾದ ರೂಫಿಂಗ್ ...
ಅರಸಿನಮಕ್ಕಿ: ಚೈತನ್ಯ ಮಿತ್ರ ಕಲಾವೃಂದ, ಅರಸಿನಮಕ್ಕಿ ಇದರ ಆಶ್ರಯದಲ್ಲಿ 23ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣಜನ್ಮಾಷ್ಟಮಿ ಉತ್ಸವವು ಸೆ.5ರಂದು ನಡೆಯಲಿದೆ. ಉತ್ಸವದ ಅಂಗವಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ...
ಗುಂಡ್ಯ: ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮಣಿಭಾಂಡ ಬಳಿ ಸ್ಕೂಟಿಯಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಏಕಾಏಕಿ ಮರವೊಂದು ಸ್ಕೂಟಿ ಮೇಲೆ ಉರುಳಿಬಿದ್ದ ಪರಿಣಾಮ ಸಹಪ್ರಯಾಣಿಕ ಗಂಭೀರವಾಗಿ ಗಾಯಗೊಂಡ ...
ನೆಲ್ಯಾಡಿ: ಕ್ರಿಶ್ಚಿಯನ್ ಬ್ರದರ್ಸ್ ಟ್ರಸ್ಟ್, ಇಚಿಲಂಪಾಡಿ ಇದರ ವತಿಯಿಂದ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಸಹಯೋಗದಲ್ಲಿ ಆ.23ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಇಚಿಲಂಪಾಡಿಯ ಸಂತ ...
ಕೊಕ್ಕಡ: ಗ್ರಾಮ ಪಂಚಾಯಿತಿನ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಆ.20ರಂದು ಕೊಕ್ಕಡ ಅಂಬೇಡ್ಕರ್ ಭವನದಲ್ಲಿ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಪಿಡಬ್ಲ್ಯುಡಿ ಇಲಾಖೆಯ ಸೂರಜ್ ...
ಕೊಕ್ಕಡ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ರೆಖ್ಯಾ ಗ್ರಾಮದ ಸರ್ವೆ ನಂಬರ್ 69/1ರ ವ್ಯಾಪ್ತಿಯಲ್ಲಿರುವ ಅರಣ್ಯ ಹಾಗೂ ಕಂದಾಯ ಭೂಮಿಯ ಸಕ್ರಮೀಕರಣ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ, ಹಲವು ವರ್ಷಗಳಿಂದ ...
ನೆಲ್ಯಾಡಿ: ನೆಲ್ಯಾಡಿ ವಲಯ ಬಂಟರ ಸಂಘದ ಮಹಾಸಭೆಯು ನೆಲ್ಯಾಡಿ ಹಾಲು ಉತ್ಪಾದಕರ ಸಂಘದ ಕ್ಷೀರ ಸಂಗಮ ಸಭಾಂಗಣದಲ್ಲಿ ನಡೆಯಿತು. ಪ್ರತಾಪ್ ಚಂದ್ರ ರೈ ಕುದ್ಮಾರುಗುತ್ತು ಅವರ ಅಧ್ಯಕ್ಷತೆಯಲ್ಲಿ ...
ನೆಲ್ಯಾಡಿ: ನೆಲ್ಯಾಡಿ ಪೇಟೆ ಅಂಗನವಾಡಿ ಕೇಂದ್ರದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಬಾಲ ವಿಕಾಸ ಸಮಿತಿಯ ಅಧ್ಯಕ್ಷರ ನೇತೃತ್ವದಲ್ಲಿ ನೆಲ್ಯಾಡಿ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ...
ಕೊಕ್ಕಡ: ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗ ಸನ್ನಿಧಿಯಲ್ಲಿ ನಾಗರಪಂಚಮಿ ಆಚರಣೆಯು ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ನಡೆಯಿತು. ನಾಗರಪಂಚಮಿ ಹಿನ್ನೆಲೆಯಲ್ಲಿ ಸೀಮೆಯ ವಿವಿಧೆಡೆಯಿಂದ ಆಗಮಿಸಿದ ಭಕ್ತರು ಬೆಳಗ್ಗಿನಿಂದಲೇ ...
ನೆಲ್ಯಾಡಿ: ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ನೆರವೇರಿದವು. ನಾಗರಪಂಚಮಿ ಅಂಗವಾಗಿ ನಾಗದೇವರಿಗೆ ವಿಶೇಷ ತಂಬಿಲ, ಕ್ಷೀರಾಭಿಷೇಕ, ಸೀಯಾಳಾಭಿಷೇಕ ಸೇರಿದಂತೆ ...
ನೆಲ್ಯಾಡಿ: ಕೌಕ್ರಾಡಿ ಗ್ರಾಮದ ದೊಂತಿಲ ಕ್ಷೇತ್ರದಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು. ದೊಂತಿಲ ಶ್ರೀ ಮಹಾವಿಷ್ಣು ಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕರಾದ ...
ಗೋಳಿತೊಟ್ಟು: ಸರಕಾರಿ ಶಾಲೆಯಲ್ಲಿ ಆಟಿ ತಿಂಗಳ ವಿಶೇಷತೆ, ತುಳುನಾಡಿನ ಸಾಂಪ್ರದಾಯಿಕ ಆಚರಣೆ ಹಾಗೂ ಗ್ರಾಮೀಣ ಬದುಕಿನ ಸೊಗಡನ್ನು ಪರಿಚಯಿಸುವ ‘ಆಟಿದೊಂಜಿ ದಿನ’ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮಕ್ಕೆ ...
ನೆಲ್ಯಾಡಿ: ಯುವಜನರಲ್ಲಿ ವ್ಯಕ್ತಿತ್ವ ವಿಕಸನದ ಜೊತೆಗೆ ನಾಯಕತ್ವ ಗುಣಗಳನ್ನು ಬೆಳೆಸುವ ಹಾಗೂ ಸಮಾಜಮುಖಿ ಸೇವಾ ಚಟುವಟಿಕೆಗಳ ಮೂಲಕ ಜನರೊಂದಿಗೆ ಬೆರೆಯುವ ಉದ್ದೇಶದಿಂದ ನೆಲ್ಯಾಡಿ ಜೇಸಿಐ ವತಿಯಿಂದ ಆಯೋಜಿಸಲಾದ ...
ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಘಟಕದ ಆಗಸ್ಟ್ ತಿಂಗಳ ಸಾಮಾನ್ಯ ಸಭೆಯು ಕೊಕ್ಕಡದ ಎಜುನೆಸ್ಟ್ ಅಕಾಡೆಮಿ ಕೇಂದ್ರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ರಿತೇಶ್ ಎಂ.ಸ್ಟ್ರೆಲ್ಲಾ ...
ನೆಲ್ಯಾಡಿ: ಮರಾಟಿ ಸಮಾಜ ಸೇವಾ ಸಂಘ ನೆಲ್ಯಾಡಿ–ಕೌಕ್ರಾಡಿ ಇದರ ಆಶ್ರಯದಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮವು ಸಂಭ್ರಮದಿಂದ ಯಶಸ್ವಿಯಾಗಿ ನಡೆಯಿತು. ಕೋಡಿಮನೆ ರಾಮಣ್ಣ ನಾಯ್ಕ ಅವರು ದೀಪ ಬೆಳಗಿಸಿ ...
ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಕಡಬ ತಾಲೂಕು, ನೆಲ್ಯಾಡಿ ವಲಯದ ಕೌಕ್ರಾಡಿ ಕಾರ್ಯಕ್ಷೇತ್ರದ ವತಿಯಿಂದ ದೊಂತಿಲ ಶ್ರೀ ಮಹಾವಿಷ್ಣು ಸುಬ್ರಹ್ಮಣ್ಯ ...
ಧಾರ್ಮಿಕ ಹಾಗೂ ಸಾಂಸ್ಕೃತಿಕ 📅 ಆಗಸ್ಟ್ 16, 2026 ರಾಮಾಯಣ ಪಾರಾಯಣ ಸಮಾಪ್ತಿ ದಿನಾಚರಣೆ: ನೆಲ್ಯಾಡಿ ಕೆ.ಎನ್.ಎಸ್.ಎಸ್. ಕಚೇರಿಯಲ್ಲಿ ಭಕ್ತಿಭಾವದ ಸಂಭ್ರಮ ಶ್ರೀ ಚಂದ್ರಶೇಖರನ್ ನಾಯರ್ ಅವರ ...
ಪುತ್ತೂರು: 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಂತಿನಗರದಲ್ಲಿರುವ ಘನ ತ್ಯಾಜ್ಯ ನಿರ್ವಹಣಾ ಘಟಕದ ತ್ಯಾಜ್ಯ ವಿಲೇವಾರಿ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ ನಡೆಸಲು ಸ್ಥಳೀಯರು ನಿರ್ಧರಿಸಿದ್ದಾರೆ. ಶಾಂತಿನಗರ ...
ಗೊಳಿತ್ತೋಟ್ಟು: ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೊಣಾಲು ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶಾಲಾ ಪರಿಸರವನ್ನು ಸ್ವಚ್ಛ ಹಾಗೂ ಸುಂದರವಾಗಿಡುವ ಉದ್ದೇಶದಿಂದ ನಡೆದ ...
ಅರಸಿನಮಕ್ಕಿ : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ ಮಾಲಕರ ಸಂಘದ ವತಿಯಿಂದ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಅರಸಿನಮಕ್ಕಿ ...
ಕೊಕ್ಕಡ : ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ದರ್ಭೇತಡ್ಕದಲ್ಲಿರುವ ಪರಶುರಾಮ ದೇವಾಲಯದ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಪರಶುರಾಮ ವನದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ದೇವಾಲಯದ ಅರ್ಚಕರಾದ ಅಶೋಕ ...
ನೆಲ್ಯಾಡಿ: ಅಲ್ ಬದ್ರಿಯಾ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ದೇಶಭಕ್ತಿ ಹಾಗೂ ಸಂಭ್ರಮದ ವಾತಾವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಬದ್ರಿಯಾ ಜುಮಾ ಮಸೀದಿ ಖತೀಬರಾದ ಖಲಂದರ್ ...
ಶಿಶಿಲ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ದೇಶಭಕ್ತಿಯ ವಾತಾವರಣದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ಧ್ವಜಾರೋಹಣದ ಬಳಿಕ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಹಳೆ ವಿದ್ಯಾರ್ಥಿಗಳ ...
ನೆಲ್ಯಾಡಿ: ಅಶ್ವಿನಿ ಆಸ್ಪತ್ರೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸಂತ ಚಾರ್ಜ್ ಪದವಿಪೂರ್ವ ಕಾಲೇಜಿನ ಆಂಗ್ಲ ಮಾಧ್ಯಮ ವಿಭಾಗದ ನಿವೃತ್ತ ಮುಖ್ಯಶಿಕ್ಷಕ ...
ನೆಲ್ಯಾಡಿ: ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್ಡಿಟಿಯು) ನೆಲ್ಯಾಡಿ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಎಸ್ಡಿಟಿಯು ನೆಲ್ಯಾಡಿ ಅಧ್ಯಕ್ಷ ನೌಶಾದ್ ದೊಂತಿಲ ಧ್ವಜಾರೋಹಣ ನೆರವೇರಿಸಿದರು.ಗಲ್ಫ್ ನೆಲ್ಯಾಡಿ ...
ನೆಲ್ಯಾಡಿ: ನೆಲ್ಯಾಡಿ–ಕೌಕ್ರಡಿ ಎಸ್ಡಿಪಿಐ ಗ್ರಾಮ ಸಮಿತಿ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್ಡಿಪಿಐ ಗ್ರಾಮ ಸಮಿತಿ ಅಧ್ಯಕ್ಷರಾದ ಸಮದ್ ನೆಲ್ಯಾಡಿ ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ...
ಕೊಕ್ಕಡದಲ್ಲಿ ಕೃಷಿಕರ ಸಮಾಲೋಚನಾ ಸಭೆ; ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆಗೆ ಮನವಿ ಕೊಕ್ಕಡ: ಆನೆ ಹಾವಳಿ ಹಾಗೂ ಕಸ್ತೂರಿ ರಂಗನ್ ವರದಿ ಜಾರಿಯಿಂದ ಕೃಷಿಕರಿಗೆ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು ...
ನೆಲ್ಯಾಡಿ–ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದಿಂದ ಅದ್ದೂರಿ ಸ್ವಾತಂತ್ರ್ಯೋತ್ಸವ | ಹಿರಿಯರಿಗೆ ಸನ್ಮಾನ ನೆಲ್ಯಾಡಿ: ನೆಲ್ಯಾಡಿ–ಕೌಕ್ರಾಡಿ ವರ್ತಕ ಹಾಗೂ ಕೈಗಾರಿಕಾ ಸಂಘದ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ...
ನೆಲ್ಯಾಡಿ ಸಂತ ಚಾರ್ಜ್ ವಿದ್ಯಾಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ, ಪ್ರತಿಭಾ ಪ್ರದರ್ಶನ, ಠಾಗೋರ್ ಅವರ ಪುಣ್ಯಸ್ಮರಣೆ ನೆಲ್ಯಾಡಿ: ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವುದು ವಿಶೇಷವಾದ ಜವಾಬ್ದಾರಿಯಾಗಿದೆ. ಈ ...
ನೆಲ್ಯಾಡಿ: ಮಹಾತ್ಮಗಾಂಧಿ ನೆಲ್ಯಾಡಿ ಗ್ರಾಮ ಪಂಚಾಯಿತಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಭಾರತಿ ಅವರು ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ...
ಕೊಕ್ಕಡ : ಅರಸಿನಮಕ್ಕಿ ಗ್ರಾಮ ಪಂಚಾಯಿತಿ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಹಾಗೂ ದೇಶಭಕ್ತಿ ಭಾವನೆಯೊಂದಿಗೆ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು ...
ನೆಲ್ಯಾಡಿ: ನೆಲ್ಯಾಡಿ ಗ್ರಾಮದ ಕೊಲ್ಯೊಟ್ಟು ನಿವಾಸಿ, ಮಾಜಿ ನೆಲ್ಯಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಸಮಾಜ ಸೇವಕ ಜಯಾನಂದ ಬಂಟ್ರಿಯಾಲ್ (54) ಅವರು ಅಲ್ಪಕಾಲದ ಅನಾರೋಗ್ಯದಿಂದ ಶನಿವಾರ ...
ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆಯೋಜನೆ | ಉಚಿತ ತಪಾಸಣೆ, ಆರೋಗ್ಯ ಸಲಹೆ; ಆಯುರ್ವೇದ ಔಷಧಿಗಳಿಗೆ ಶೇ.10 ರಿಯಾಯಿತಿ ನೆಲ್ಯಾಡಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಯ ...
ನೆಲ್ಯಾಡಿ : ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಕುಕ್ಕೆ ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ನೆಲ್ಯಾಡಿ ತಾಲೂಕು ಪಂಚಾಯಿತಿ ಕ್ಷೇತ್ರ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ...