ಸಮಾಜಸೇವೆಯಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಅವರು ಅಲ್ಪಾಯುಷ್ಯದಲ್ಲೇ ಅಗಲಿರುವುದು ಸಮಾಜಕ್ಕೆ ತುಂಬಲಾರದ ನಷ್ಟ
ನೆಲ್ಯಾಡಿ: ಆ.15ರಂದು ನಿಧನರಾದ ನೆಲ್ಯಾಡಿ ಗ್ರಾಮದ ಕೆಳಗಿನಪರಾರಿ ನಿವಾಸಿ ಹಾಗೂ ವಿವಿಧ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಸಮಾಜಸೇವಕ ಪಿ.ಜಯಾನಂದ ಬಂಟ್ರಿಯಾಲ್ ಅವರಿಗೆ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಸಾರ್ವಜನಿಕ ನುಡಿನಮನ ಕಾರ್ಯಕ್ರಮ ಸೆ.10ರಂದು ಸಂಜೆ ನೆಲ್ಯಾಡಿ ಸಂತಜಾರ್ಜ್ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಆರಂಭದಲ್ಲಿ ಒಂದು ನಿಮಿಷ ಮೌನಾಚರಣೆ ನಡೆಸಿ, ಜಯಾನಂದ ಬಂಟ್ರಿಯಾಲ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಬಳಿಕ ವಿವಿಧ ಕ್ಷೇತ್ರಗಳ ಗಣ್ಯರು ಹಾಗೂ ಅವರ ಒಡನಾಡಿಗಳು ಜಯಾನಂದ ಬಂಟ್ರಿಯಾಲ್ ಅವರ ಸಮಾಜಮುಖಿ ಸೇವೆ, ಸರಳ ವ್ಯಕ್ತಿತ್ವ, ಸಂಘಟನಾ ಚಾತುರ್ಯ ಹಾಗೂ ಜನಪರ ಕಾಳಜಿಯನ್ನು ಸ್ಮರಿಸಿ ನುಡಿನಮನ ಸಲ್ಲಿಸಿದರು.
ನೆಲ್ಯಾಡಿ ಸಂತಜಾರ್ಜ್ ವಿದ್ಯಾಸಂಸ್ಥೆ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್ ಮಾತನಾಡಿ, ದೈಹಿಕ ನ್ಯೂನ್ಯತೆಯಿದ್ದರೂ ಅದನ್ನು ಲೆಕ್ಕಿಸದೆ ತನಗೆ ವಹಿಸಿದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದ್ದರು. ನೆಲ್ಯಾಡಿ ಗಾಂಧಿಮೈದಾನದಲ್ಲಿ ವೇದಿಕೆ ನಿರ್ಮಾಣ ಹಾಗೂ ಗಾಂಧಿ ಪ್ರತಿಮೆ ಸ್ಥಾಪನೆಯ ಹಿಂದೆ ಅವರ ಶ್ರಮವಿದೆ. 84 ವರ್ಷದಲ್ಲಿ ಮಾಡಬೇಕಾದ ಕೆಲಸಗಳನ್ನು 54 ವರ್ಷದಲ್ಲೇ ಮಾಡಿ ಮುಗಿಸಿ ಅಲ್ಪಾಯುಷ್ಯದಲ್ಲೇ ಅಗಲಿದ್ದಾರೆ ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲೆ ಅಪಾರ ಭಕ್ತಿ ಹೊಂದಿದ್ದ ಜಯಾನಂದ ಬಂಟ್ರಿಯಾಲ್ ಅವರು ಗ್ರಾಮಾಭಿವೃದ್ಧಿ ಯೋಜನೆಯ ಪ್ರತಿಯೊಂದು ಕಾರ್ಯಕ್ರಮವನ್ನೂ ಮನೆಯ ಕಾರ್ಯಕ್ರಮದಂತೆ ನಿರ್ವಹಿಸುತ್ತಿದ್ದರು. ಅನಾರೋಗ್ಯವನ್ನೂ ಲೆಕ್ಕಿಸದೆ ನೆಲ್ಯಾಡಿಯಲ್ಲಿ ನಡೆದ ಮದ್ಯವರ್ಜನ ಶಿಬಿರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಅವರು ಬದುಕಿದ ರೀತಿಯಿಂದಲೇ ಪುಣ್ಯಾತ್ಮರೆನಿಸಿಕೊಂಡಿದ್ದಾರೆ ಎಂದರು.
ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆ ಸಂಚಾಲಕ ಡಾ.ವರ್ಗೀಸ್ ಕೈಪನಡ್ಕ ಮಾತನಾಡಿ, ಜಯಾನಂದ ಬಂಟ್ರಿಯಾಲ್ ಅವರು ಆತ್ಮೀಯ ಸ್ನೇಹಿತರಾಗಿದ್ದು, ಸರಳ ವ್ಯಕ್ತಿತ್ವ, ಸಮರ್ಪಣಾ ಭಾವ ಹಾಗೂ ನಿಷ್ಠಾವಂತ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದರು. ತಮ್ಮ ಜೀವನವನ್ನೇ ಸಮಾಜಕ್ಕೆ ಮುಡಿಪಾಗಿಟ್ಟ ಅವರು ಬೆಥನಿ ವಿದ್ಯಾಸಂಸ್ಥೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು ಎಂದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕು ಸ್ಥಾಪಕಾಧ್ಯಕ್ಷ ಮಹೇಶ್ ಸವಣೂರು ಮಾತನಾಡಿ, ಜಯಾನಂದ ಬಂಟ್ರಿಯಾಲ್ ಅವರೊಂದಿಗೆ 12 ವರ್ಷಗಳ ಒಡನಾಟವಿದ್ದು, ಉತ್ತಮ ಸ್ನೇಹಿತರೊಬ್ಬರನ್ನು ಕಳೆದುಕೊಂಡಂತಾಗಿದೆ. ಜನಜಾಗೃತಿ ವೇದಿಕೆಯ ಕಾರ್ಯಕ್ರಮಗಳಲ್ಲಿ ಅವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. 55 ವರ್ಷದಲ್ಲೇ 100 ವರ್ಷದ ಸಾಧನೆ ಮಾಡಿದಂತೆ ಆದರ್ಶವಾಗಿ ಬದುಕಿದ್ದರು. ಅವರ ಅಗಲಿಕೆ ಸಮಾಜಕ್ಕೆ ತುಂಬಲಾರದ ನಷ್ಟ ಎಂದರು.
ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಾಲಕೃಷ್ಣ ಬಾಣಜಾಲು ಮಾತನಾಡಿ, ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವಿಗೂ ಸ್ಪಂದಿಸುವ ಗುಣ ಜಯಾನಂದ ಬಂಟ್ರಿಯಾಲ್ ಅವರಲ್ಲಿತ್ತು. ನೆಲ್ಯಾಡಿಯಲ್ಲಿ ನಡೆದ ಮದ್ಯವರ್ಜನ ಶಿಬಿರಕ್ಕೆ ರಾಜ್ಯದಲ್ಲೇ ಮೊದಲ ಬಾರಿಗೆ ಹೊರೆಕಾಣಿಕೆ ಸಮರ್ಪಣೆ ಆಯೋಜಿಸಿ ಯಶಸ್ವಿಗೊಳಿಸಿದ್ದರು ಎಂದರು.
ನೆಲ್ಯಾಡಿ ಸಂತಜಾರ್ಜ್ ವಿದ್ಯಾಸಂಸ್ಥೆಯ ನಿವೃತ್ತ ಮುಖ್ಯಶಿಕ್ಷಕ ರವೀಂದ್ರ ಟಿ. ಮಾತನಾಡಿ, ನೆಲ್ಯಾಡಿಯಲ್ಲಿ ನಡೆಯುವ ಯಾವುದೇ ಕಾರ್ಯಕ್ರಮವನ್ನೂ ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದರು. ಮೆರವಣಿಗೆಗಳ ಜವಾಬ್ದಾರಿ ವಹಿಸಿಕೊಂಡು ಯಶಸ್ವಿಯಾಗಿ ನಿರ್ವಹಿಸಿದ್ದರಿಂದ ‘ಮೆರವಣಿಗೆ ರಾಜ’ ಎಂದೇ ಗುರುತಿಸಿಕೊಂಡಿದ್ದರು. ಜೇಸಿ ಸಂಘಟನೆ ಮೂಲಕ ಹಲವು ನಾಯಕರನ್ನು ಬೆಳೆಸಿದ್ದಾರೆ ಎಂದರು.
ನೆಲ್ಯಾಡಿ ವರ್ತಕ ಸಂಘದ ಅಧ್ಯಕ್ಷ ಸತೀಶ್ ಕೆ.ಎಸ್. ಮಾತನಾಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ವರ್ತಕರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಿದ್ದರು. ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಸೇವೆ ಸಲ್ಲಿಸಿದ್ದರು. ಅವರ ನೇತೃತ್ವದಲ್ಲಿ ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಮಹಾದ್ವಾರ ಹಾಗೂ ಗಾಂಧಿಮೈದಾನದಲ್ಲಿ ಗಾಂಧಿ ಪ್ರತಿಮೆ ನಿರ್ಮಾಣವಾಗಿರುವುದು ಅವರ ಸೇವೆಯನ್ನು ಸದಾ ನೆನಪಿಸುವಂತದ್ದು ಎಂದರು.
ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಉಷಾ ಅಂಚನ್ ಮಾತನಾಡಿ, ಜಯಾನಂದ ಬಂಟ್ರಿಯಾಲ್ ಅವರು ನೆಲ್ಯಾಡಿ ಗ್ರಾ.ಪಂ. ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ತಾವು ತಾ.ಪಂ. ಸದಸ್ಯೆಯಾಗಿದ್ದು, ಹಲವು ವಿಚಾರಗಳಲ್ಲಿ ಪರಸ್ಪರ ಚರ್ಚಿಸಿ ಕೆಲಸ ಮಾಡುತ್ತಿದ್ದೆವು. ಬಡವರ ನೋವಿಗೆ ಸ್ಪಂದಿಸುವ ಗುಣ ಅವರಲ್ಲಿತ್ತು ಎಂದರು.
ನೆಲ್ಯಾಡಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಇಸ್ಮಾಯಿಲ್ ನೆಲ್ಯಾಡಿ ಮಾತನಾಡಿ, ವಿವಿಧ ಸಂಘಟನೆಗಳ ಮೂಲಕ ಸಮಾಜಕ್ಕಾಗಿ ಸದಾ ದುಡಿಯುತ್ತಿದ್ದ ಜಯಾನಂದ ಬಂಟ್ರಿಯಾಲ್ ಅವರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಿರಲಿಲ್ಲ. ಇಂದು ಅವರು ನಮ್ಮ ನಡುವೆ ಇಲ್ಲದಿದ್ದರೂ ಅವರ ಆದರ್ಶಗಳು ಜೀವಂತವಾಗಿವೆ ಎಂದರು.
ನೆಲ್ಯಾಡಿ ಎಲೈಟ್ ರಬ್ಬರ್ ಇಂಡಸ್ಟ್ರೀಸ್ ಮಾಲಕ ಶಾಜಿ ಯು. ವರ್ಗೀಸ್ ಮಾತನಾಡಿ, ಹುಟ್ಟು-ಸಾವಿನ ನಡುವೆ ನಾವು ಊರಿಗೆ ಏನು ಮಾಡಿದ್ದೇವೆ ಎಂಬುದೇ ಮುಖ್ಯ. ವಿದ್ಯಾರ್ಥಿಯಾಗಿದ್ದಾಗಲೇ ಜಯಾನಂದ ಬಂಟ್ರಿಯಾಲ್ ಅವರಲ್ಲಿ ಉತ್ತಮ ಪ್ರತಿಭೆ ಇತ್ತು. ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಕೆಲಸ ಮಾಡುತ್ತಿದ್ದ ಅವರು ತಮ್ಮ ಜೀವನವನ್ನೇ ಊರಿಗಾಗಿ ಮುಡಿಪಾಗಿಟ್ಟಿದ್ದರು. ಅವರ ಹೆಸರು ಶಾಶ್ವತವಾಗಿ ಉಳಿಯುವ ನಿಟ್ಟಿನಲ್ಲಿ ಯೋಜನೆ ರೂಪಿಸಬೇಕು ಎಂದರು.
ಕಡಬ ಉಪತಹಶೀಲ್ದಾರ್ ಗೋಪಾಲ ಮಾತನಾಡಿ, ಶೈಕ್ಷಣಿಕ, ಧಾರ್ಮಿಕ, ಸಾಮಾಜಿಕ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಜಯಾನಂದ ಬಂಟ್ರಿಯಾಲ್ ತೊಡಗಿಸಿಕೊಂಡಿದ್ದರು. ತಮ್ಮ ಸಾಧನೆಯ ಮೂಲಕ ಆದರ್ಶರಾಗಿದ್ದಾರೆ. ಅಪ್ಪೆಜಕ್ಕೆಲ್ ಕುಟುಂಬದ ಹಿರಿಯಣ್ಣನಂತಿದ್ದ ಅವರ ಅಗಲಿಕೆ ನೋವು ತಂದಿದೆ ಎಂದರು.
ಕಡಬ ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಶಿವಪ್ರಸಾದ್ ಮೈಲೇರಿ, ರೆ.ಫಾ. ಜಿಜನ್, ನೆಲ್ಯಾಡಿ ಗೆಳೆಯರ ಬಳಗದ ಅಧ್ಯಕ್ಷ ರತ್ನಾಕರ ಶೆಟ್ಟಿ ಕೊಲ್ಯೊಟ್ಟು, ನೆಲ್ಯಾಡಿ ವಲಯ ಬಂಟರ ಸಂಘದ ಅಧ್ಯಕ್ಷ ವಿಶ್ವನಾಥ ಶೆಟ್ಟಿ ಶ್ರೀಮಾತಾ, ನೆಲ್ಯಾಡಿ ಆಟೋ ರಿಕ್ಷಾ ಚಾಲಕ-ಮಾಲಕರ ಸಂಘದ ಮಾಜಿ ಅಧ್ಯಕ್ಷ ರವಿಪ್ರಸಾದ್ ಗುತ್ತಿನಮನೆ, ನೆಲ್ಯಾಡಿ ಜೆಸಿಐ ಅಧ್ಯಕ್ಷೆ ಪ್ರವೀಣಿ ಶೆಟ್ಟಿ, ಸೀನಿಯರ್ ಚೇಂಬರ್ ನೆಲ್ಯಾಡಿ ಲೀಜನ್ ಅಧ್ಯಕ್ಷ ಉಲಹನ್ನನ್, ನಿವೃತ್ತ ಶಿಕ್ಷಕ ವೆಂಕಟ್ರಮಣ ಆರ್., ಶೌರ್ಯ ವಿಪತ್ತು ನಿರ್ವಹಣಾ ಘಟಕದ ರಮೇಶ ಬಾಣಜಾಲು ಸೇರಿದಂತೆ ಹಲವರು ಜಯಾನಂದ ಬಂಟ್ರಿಯಾಲ್ ಅವರ ಸೇವೆ ಹಾಗೂ ವ್ಯಕ್ತಿತ್ವವನ್ನು ಸ್ಮರಿಸಿ ನುಡಿನಮನ ಸಲ್ಲಿಸಿದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕು ಅಧ್ಯಕ್ಷ ಇಂದುಶೇಖರ ಶೆಟ್ಟಿ, ಪ್ರಮುಖರಾದ ತುಕ್ರಪ್ಪ ಶೆಟ್ಟಿ ನೂಜೆ, ಕರುಣಾಕರ ಗೋಗಟೆ, ನಾರಾಯಣ ಎನ್. ಬಲ್ಯ, ಎಲಿಯಾಸ್ ಎಂ.ಕೆ., ಸೆಬಾಸ್ಟಿಯನ್ ಪಿ.ಜೆ. ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಉಪನ್ಯಾಸಕ ವಿಶ್ವನಾಥ ಶೆಟ್ಟಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಸಾರ್ವಜನಿಕ ನುಡಿನಮನ ಕಾರ್ಯಕ್ರಮದ ಅಂಗವಾಗಿ ಜಯಾನಂದ ಬಂಟ್ರಿಯಾಲ್ ಅವರ ಭಾವಚಿತ್ರ ಹಾಗೂ ಅವರ ಸೇವೆಯನ್ನು ಸ್ಮರಿಸುವ ನುಡಿನಮನ ಪತ್ರವನ್ನು ಪತ್ನಿ ಸುಚಿತ್ರಾ ಬಂಟ್ರಿಯಾಲ್ ಹಾಗೂ ಪುತ್ರ ವಿನ್ಯಾಸ್ ಬಂಟ್ರಿಯಾಲ್ ಅವರಿಗೆ ಹಸ್ತಾಂತರಿಸಲಾಯಿತು. ನೆಲ್ಯಾಡಿ ವರ್ತಕ ಸಂಘದ ಕಾರ್ಯದರ್ಶಿ ಪ್ರಶಾಂತ್ ನುಡಿನಮನ ಪತ್ರ ವಾಚಿಸಿದರು.
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
72ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಪಂಜ ವಲಯ ಅರಣ್ಯ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ ನೆಲ್ಯಾಡಿ: “ಆವಾಸ ಸ್ಥಾನಗಳ ಜೋಡಣೆ ಹಾಗೂ ವನ್ಯಜೀವಿಗಳ ಅಭಿವೃದ್ಧಿ” ಎಂಬ ಘೋಷವಾಕ್ಯದೊಂದಿಗೆ ನಡೆಯುತ್ತಿರುವ ...
ಉಪ್ಪಿನಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಉಪ್ಪಿನಂಗಡಿ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ–ಬಾಲಕಿಯರ ಕ್ರೀಡಾಕೂಟ ಹಿರೆಬಂಡಾಡಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದಲ್ಲಿ ಇಂದ್ರಪ್ರಸ್ಥ ...
ಕೊಕ್ಕಡ: ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಶಿಶಿಲ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛತಾ ಹೀ ಸೇವಾ ಸಮಾರೋಪ ಸಮಾರಂಭದೊಂದಿಗೆ ವಿಶೇಷ ಗ್ರಾಮ ಸಭೆ ನಡೆಯಿತು. ಪಂಚಾಯತ್ ಆಡಳಿತಾಧಿಕಾರಿ ಭರತ್ ...
ಕೊಕ್ಕಡ: ಸಂತ ಜೋನ್ ಬ್ಯಾಪ್ಟಿಸ್ಟ್ ದೇವಾಲಯದಲ್ಲಿ ನೂತನ ಯಾಜಕರಾಗಿ ಗುರುದೀಕ್ಷೆ ಸ್ವೀಕರಿಸಿದ ರೆ| ಫಾ| ವಿಲ್ಫ್ರೆಡ್ ಸ್ಟೀವನ್ ರೊಡ್ರಿಗಸ್ ಹಾಗೂ ಡಾಕ್ಟರೇಟ್ ಪದವಿ ಪಡೆದ ಡಾ| ಸೈಮನ್ ...
ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪ ಎಫ್ಐಆರ್ನಲ್ಲಿ ಸೇರಿಸಿಲ್ಲ: ಬಣಕಲ್ ಪೊಲೀಸರ ವಿರುದ್ಧ ಗಾಯಾಳುಗಳ ಆಕ್ರೋಶ ಕೊಕ್ಕಡ: ಮಂತ್ರಾಲಯಕ್ಕೆ ತೆರಳುತ್ತಿದ್ದ ಶಿಶಿಲದ ಸ್ನೇಹಿತರಿದ್ದ ಕಾರಿಗೆ ಎದುರಿನಿಂದ ಬಂದ ...
ಅರಸಿನಮಕ್ಕಿ: ಮಹಾತ್ಮಗಾಂಧಿ ಜಯಂತಿಯ ಅಂಗವಾಗಿ ಅರಸಿನಮಕ್ಕಿ ಗ್ರಾಮ ಪಂಚಾಯಿತಿ ವತಿಯಿಂದ ಗಾಂಧಿ ಜಯಂತಿ ಆಚರಣೆ ಹಾಗೂ ‘ಸ್ವಚ್ಛತಾ ಹೀ ಸೇವಾ’ ಅಭಿಯಾನದ ಸಮಾರೋಪ ಸಮಾರಂಭ ನಡೆಯಿತು. ಇದೇ ...
ನೆಲ್ಯಾಡಿ: ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ನೆಲ್ಯಾಡಿ ಮಹಾಶಕ್ತಿ ಕೇಂದ್ರದ ವತಿಯಿಂದ ‘ಸೇವಾ ಸಂಕಲ್ಪ ಅಭಿಯಾನ’ದ ಅಂಗವಾಗಿ ಅ.4ರಂದು ನೆಲ್ಯಾಡಿಯಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ನೆಲ್ಯಾಡಿಯ ...
ನೆಲ್ಯಾಡಿ: ಕಡಬ ತಾಲೂಕಿನ ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಅನಿಲ ಸಮೀಪ ಶುಕ್ರವಾರ ಸಂಜೆ ಚಲಿಸುತ್ತಿದ್ದ ಕಾರಿಗೆ ಕಡವೆಯೊಂದು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸುಬ್ರಹ್ಮಣ್ಯದಿಂದ ...
ನೆಲ್ಯಾಡಿ: ನೆಲ್ಯಾಡಿಯ ಲೈಫ್ ಫಾರ್ಮಾ ಸಂಸ್ಥೆಯಲ್ಲಿ ಔಷಧ ವಿತರಣೆ ಹಾಗೂ ಕಂಪ್ಯೂಟರ್ ಬಿಲ್ಲಿಂಗ್ ಕೆಲಸ ನಿರ್ವಹಿಸಲು ಸಿಬ್ಬಂದಿ ತುರ್ತಾಗಿ ಅಗತ್ಯವಿದ್ದಾರೆ. ಅಭ್ಯರ್ಥಿಗಳು ಎಸ್ಎಸ್ಎಲ್ಸಿ, ಪಿಯುಸಿ ಅಥವಾ ಯಾವುದೇ ...
ಶಿರಾಡಿ: ಕಡಬ ತಾಲೂಕು ಶಿರಾಡಿ ಗ್ರಾಮದ ಎಸ್.ಆರ್.ಎಸ್. ಪೆಟ್ರೋಲ್ ಪಂಪ್ ಸಮೀಪ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಬೊಲೆರೋ ಪಿಕ್ಅಪ್ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ...
ಕೊಕ್ಕಡ: ನಿಡ್ಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ 2026-27ನೇ ಸಾಲಿನ ಕೊಕ್ಕಡ, ನಿಡ್ಲೆ ಹಾಗೂ ಪೆರ್ಲ ಕ್ಲಸ್ಟರ್ಗಳ ವಲಯ ಮಟ್ಟದ 14ರ ವಯೋಮಾನದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಶಿಶಿಲದ ಮಹರ್ಷಿ ...
ಕೊಕ್ಕಡ: ನಾಲ್ಕು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳ ಮೂಲಕ ಪೂರ್ಣ ಪ್ರಮಾಣದ ಪ್ರಯತ್ನ ನಡೆಸಲಾಗುವುದು ಎಂದು ಮಂಗಳೂರು ಲೋಕಸಭಾ ...
ನೆಲ್ಯಾಡಿ: ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ನಾಟೆಕಲ್–ಮಂಗಳೂರು ಹಾಗೂ ಬದ್ರಿಯಾ ಜುಮಾ ಮಸೀದಿ ನೆಲ್ಯಾಡಿಯ ಅಧೀನ ಸಂಸ್ಥೆಯಾದ ನುಸ್ರತುಲ್ ಮಸಾಕೀನ್ ಯಂಗ್ ಮೆನ್ಸ್ ...
ಕಡಬ: ಪೊಲೀಸ್ ಇಲಾಖೆಯ ಸಿವಿಲ್ ಪರೀಕ್ಷೆ ಕಾನ್ಸ್ಟೇಬಲ್ ನೇಮಕಾತಿಯ ದೈಹಿಕ ಪರೀಕ್ಷೆಗೆ ಹಾಜರಾಗಲು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ದುರ್ಬಳಕೆ ಮಾಡಿಕೊಂಡು ನಕಲಿ ಪ್ರವೇಶ ಪತ್ರ ಸೃಷ್ಟಿಸಿ ವಂಚಿಸಲು ...
ನೆಲ್ಯಾಡಿ: ಉದನೆ ಸಮೀಪದ ನೆಲ್ಯಡ್ಕ ನಿವಾಸಿ ಬೆಳ್ತಂಗಡಿ ಧರ್ಮಪ್ರಾಂತ್ಯದ ವಿಕಾರಿ ಜನರಲ್ ಆಗಿ ಸೇವೆ ಸಲ್ಲಿಸುತ್ತಿದ್ದ ವಂ.ಡಾ.ಮಾಣಿ ವೆಳುತ್ತೇಡತ್ತುಪರಂಬಿಲ್(64) ಅವರು ಅಲ್ಪಕಾಲದ ಅನಾರೋಗ್ಯದಿಂದ ಗುರುವಾರದಂದು ನಿಧನರಾದರು. ಧರ್ಮಗುರುಗಳಾಗಿ, ...
ನೆಲ್ಯಾಡಿ: ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದ ಅಟೋರಿಕ್ಷಾ ಚಲಾಯಿಸಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಕಡಬ ತಾಲೂಕು ಶಿರಿಬಾಗಿಲು ಗ್ರಾಮದ ದೇರಣೆ ಎಂಬಲ್ಲಿ ಭಾನುವಾರದಂದು ...
ನೆಲ್ಯಾಡಿ: ಸರ್ ಪ್ರಕ್ರಿಯೆಯ ಸಂದರ್ಭದಲ್ಲಿ ಕೌಕ್ರಾಡಿ ಗ್ರಾ.ಪಂ. ವ್ಯಾಪ್ತಿಯ ಉದ್ಯೋಗ ನಿಮಿತ್ತ ವಿದೇಶ ಹಾಗೂ ಬೆಂಗಳೂರಿನಲ್ಲಿ ತಾತ್ಕಾಲಿಕವಾಗಿ ವಾಸಿಸುತ್ತಿರುವ ಸ್ಥಳೀಯ ನಿವಾಸಿಗಳ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವಂತೆ ...
ಕೊಕ್ಕಡ: ಹಲವು ವರ್ಷಗಳಿಂದ ಗ್ರಾಮಸ್ಥರ ಬೇಡಿಕೆಯಾಗಿರುವ ಶಿಶಿಲ-ಬೈರಾಪುರ ಅಂತರ ಜಿಲ್ಲಾ ಗ್ರಾಮೀಣ ರಸ್ತೆಯನ್ನು ಹಸಿರು ಮಾದರಿ ರಸ್ತೆಯಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮಂಗಳವಾರ ಸ್ಥಳ ಪರಿಶೀಲನೆ ನಡೆಯಿತು. ಪ್ರಧಾನಮಂತ್ರಿ ...
ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪತ್ರಡ್ಕದಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ...
ನೆಲ್ಯಾಡಿ: ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಸಮಾಜ ಸೇವಕ ಹಾಗೂ ಯಕ್ಷಗಾನ ಸಂಘಟಕ, ನೆಲ್ಯಾಡಿ ಕೆಳಗಿನಪರಾರಿ ನಿವಾಸಿ ದಿ.ಜಯಾನಂದ ಬಂಟ್ರಿಯಾಲ್ ಅವರಿಗೆ ಯಕ್ಷಗಾನ ತಾಳಮದ್ದಳೆಯ ಮೂಲಕ ನುಡಿನಮನ ...
ಕಳೆಂಜ: ಗ್ರಾಮದ ಶಾಲೆತ್ತಡ್ಕ ಎಂಬಲ್ಲಿ ಕೇಂದ್ರ ಸರಕಾರದ ಅನುದಾನದಡಿಯಲ್ಲಿ ಸುಮಾರು ರೂ. 65 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಆಯುಷ್ಮಾನ್ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕಟ್ಟಡದ ಶಿಲಾನ್ಯಾಸ ...
ಶಿಶಿಲ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ದ.ಕ. ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಬೆಳ್ತಂಗಡಿ ವತಿಯಿಂದ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ, ಶಿಶಿಲದಲ್ಲಿ ...
ಉಜಿರೆ: ಮೌಲ್ಯ ನಾಯಕ್ ಅವರು ದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯವು ಆಯೋಜಿಸಿದ್ದ ಭಾರತೀಯ ಜ್ಞಾನ ಪರಂಪರೆ (ಇಂಡಿಯನ್ ನಾಲೆಡ್ಜ್ ಸಿಸ್ಟಮ್ ) ಸಂಸ್ಕೃತ ಒಲಂಪಿಯಾಡ್ನಲ್ಲಿ ಸ್ವರ್ಣ ಪದಕ ...
ಕೊಕ್ಕಡ: ನಾಡಿನ ಪ್ರಸಿದ್ಧ ಬಯಲು ಗಣಪತಿ ಕ್ಷೇತ್ರವಾಗಿರುವ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ...