150ಕ್ಕೂ ಅಧಿಕ ಮಂದಿಗೆ ಆರೋಗ್ಯ ತಪಾಸಣೆ; 50 ಮಂದಿಗೆ ಉಚಿತ ಕನ್ನಡಕ ವಿತರಣೆ
ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಕಡಬ ತಾಲೂಕು, ಜ್ಞಾನವಿಕಾಸ ಕಾರ್ಯಕ್ರಮದಡಿ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಕೌಕ್ರಾಡಿ ಆಶ್ರಯದಲ್ಲಿ ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಕಣ್ಣು ಪರೀಕ್ಷಾ ಶಿಬಿರವು ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೌಕ್ರಾಡಿ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ಗೌಡ ವಹಿಸಿದ್ದರು. ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಿಶಿರಾ ಕಾರ್ಯಕ್ರಮವನ್ನು ಉದ್ಘಾಟಿಸಿ ಆಸ್ಪತ್ರೆಯಲ್ಲಿ ಲಭ್ಯವಿರುವ ವಿವಿಧ ಆರೋಗ್ಯ ಸೇವೆಗಳು ಹಾಗೂ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಡಬ ತಾಲೂಕು ಯೋಜನಾಧಿಕಾರಿ ಮಾತನಾಡಿ ಜ್ಞಾನವಿಕಾಸ ಕಾರ್ಯಕ್ರಮದ ಮೂಲಕ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಯಾವುದೇ ಕಾಯಿಲೆ ಉಲ್ಬಣಗೊಳ್ಳುವ ಮುನ್ನವೇ ತಪಾಸಣೆ ಮಾಡಿಸಿಕೊಳ್ಳಬೇಕು. ಆರಂಭಿಕ ಹಂತದಲ್ಲೇ ಕಾಯಿಲೆ ಪತ್ತೆಹಚ್ಚುವುದರಿಂದ ಸಂಭವಿಸಬಹುದಾದ ಅನಾಹುತಗಳನ್ನು ತಡೆಗಟ್ಟಲು ಸಾಧ್ಯ ಎಂದು ಮಾರ್ಗದರ್ಶನ ನೀಡಿದರು.
ಮಾದೇರಿ ಒಕ್ಕೂಟದ ಅಧ್ಯಕ್ಷ ಸೆಬಾಸ್ಟಿನ್ ಉಪಸ್ಥಿತರಿದ್ದರು. ವಲಯ ಮೇಲ್ವಿಚಾರಕಿ ಜಯಶ್ರೀ ಪ್ರಾಸ್ತಾವಿಕವಾಗಿ ಮಾತನಾಡಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಚೇತನ ಹಾಗೂ ಸೇವಾ ಪ್ರತಿನಿಧಿ ನಮಿತಾ ಕಾರ್ಯಕ್ರಮ ನಿರೂಪಿಸಿದರು. ಜ್ಞಾನವಿಕಾಸ ಸಂಯೋಜಕಿ ವಸಂತಿ ಸ್ವಾಗತಿಸಿದರು. ಆಶಾ ಕಾರ್ಯಕರ್ತೆ ಸುಮನ ವಂದಿಸಿದರು.
ಶಿಬಿರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಒಕ್ಕೂಟದ ಪದಾಧಿಕಾರಿಗಳು ಹಾಗೂ ಜ್ಞಾನವಿಕಾಸ ಕೇಂದ್ರದ ಸದಸ್ಯರು ಸಹಕರಿಸಿದರು. ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸದಸ್ಯರು ಸೇರಿದಂತೆ ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆದುಕೊಂಡರು.
150ಕ್ಕೂ ಅಧಿಕ ಮಂದಿ ಶಿಬಿರದಲ್ಲಿ ಪಾಲ್ಗೊಂಡು ಬಿಪಿ, ಶುಗರ್ ಹಾಗೂ ರಕ್ತ ಪರೀಕ್ಷೆ ಮಾಡಿಸಿಕೊಂಡರು. ಕಣ್ಣು ಪರೀಕ್ಷೆ ನಡೆಸಿದ ಬಳಿಕ 50 ಮಂದಿಗೆ ಉಚಿತ ಕನ್ನಡಕ ವಿತರಿಸಲಾಯಿತು.
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...

72ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಪಂಜ ವಲಯ ಅರಣ್ಯ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ ನೆಲ್ಯಾಡಿ: “ಆವಾಸ ಸ್ಥಾನಗಳ ಜೋಡಣೆ ಹಾಗೂ ವನ್ಯಜೀವಿಗಳ ಅಭಿವೃದ್ಧಿ” ಎಂಬ ಘೋಷವಾಕ್ಯದೊಂದಿಗೆ ನಡೆಯುತ್ತಿರುವ ...
ಉಪ್ಪಿನಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಉಪ್ಪಿನಂಗಡಿ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ–ಬಾಲಕಿಯರ ಕ್ರೀಡಾಕೂಟ ಹಿರೆಬಂಡಾಡಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದಲ್ಲಿ ಇಂದ್ರಪ್ರಸ್ಥ ...
ಕೊಕ್ಕಡ: ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಶಿಶಿಲ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛತಾ ಹೀ ಸೇವಾ ಸಮಾರೋಪ ಸಮಾರಂಭದೊಂದಿಗೆ ವಿಶೇಷ ಗ್ರಾಮ ಸಭೆ ನಡೆಯಿತು. ಪಂಚಾಯತ್ ಆಡಳಿತಾಧಿಕಾರಿ ಭರತ್ ...
ಕೊಕ್ಕಡ: ಸಂತ ಜೋನ್ ಬ್ಯಾಪ್ಟಿಸ್ಟ್ ದೇವಾಲಯದಲ್ಲಿ ನೂತನ ಯಾಜಕರಾಗಿ ಗುರುದೀಕ್ಷೆ ಸ್ವೀಕರಿಸಿದ ರೆ| ಫಾ| ವಿಲ್ಫ್ರೆಡ್ ಸ್ಟೀವನ್ ರೊಡ್ರಿಗಸ್ ಹಾಗೂ ಡಾಕ್ಟರೇಟ್ ಪದವಿ ಪಡೆದ ಡಾ| ಸೈಮನ್ ...
ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪ ಎಫ್ಐಆರ್ನಲ್ಲಿ ಸೇರಿಸಿಲ್ಲ: ಬಣಕಲ್ ಪೊಲೀಸರ ವಿರುದ್ಧ ಗಾಯಾಳುಗಳ ಆಕ್ರೋಶ ಕೊಕ್ಕಡ: ಮಂತ್ರಾಲಯಕ್ಕೆ ತೆರಳುತ್ತಿದ್ದ ಶಿಶಿಲದ ಸ್ನೇಹಿತರಿದ್ದ ಕಾರಿಗೆ ಎದುರಿನಿಂದ ಬಂದ ...