ಹಿಂದಿನ ಸಭೆಯ ನಿರ್ಣಯಗಳ ಅನುಷ್ಠಾನಗೊಳ್ಳದಕ್ಕೆ ಅಸಮಾಧಾನ; ಅ.6ರ ಗ್ರಾಮಸಭೆಗೂ ಅಧಿಕಾರಿಗಳು ಬಾರದಿದ್ದರೆ ಪ್ರತಿಭಟನೆ ಎಚ್ಚರಿಕೆ
ಕಡಬ ತಾಲೂಕಿನ ಕೌಕ್ರಾಡಿ ಗ್ರಾಮ ಪಂಚಾಯಿತಿಯಲ್ಲಿ ಶನಿವಾರ ನಿಗದಿಯಾಗಿದ್ದ ಗ್ರಾಮಸಭೆಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಗೈರಾಗಿದ್ದನ್ನು ಖಂಡಿಸಿ ಗ್ರಾಮಸ್ಥರು ಗ್ರಾಮಸಭೆಯನ್ನು ಮುಂದೂಡಿಕೆ ಘಟನೆ ನಡೆದಿದೆ.
ಶನಿವಾರ ಬೆಳಗ್ಗೆ 11 ಗಂಟೆಗೆ ನಿಗದಿಯಾಗಿದ್ದ ಗ್ರಾಮಸಭೆಯು ನೋಡಲ್ ಅಧಿಕಾರಿ ಹಾಗೂ ಗ್ರಾಮ ಪಂಚಾಯಿತಿಯ ಆಡಳಿತಾಧಿಕಾರಿಯಾಗಿರುವ ಪುತ್ತೂರು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿ ಸುರೇಶ್ ಅವರ ಅಧ್ಯಕ್ಷತೆಯಲ್ಲಿ ಆರಂಭವಾಯಿತು. ಸಭೆ ಆರಂಭವಾಗುತ್ತಿದ್ದಂತೆ ಗ್ರಾಮಸ್ಥರು, ಗ್ರಾಮಸಭೆಗೆ ಎಲ್ಲ ಇಲಾಖೆಗಳ ಸಂಬಂಧಪಟ್ಟ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು ಎಂದು ಒತ್ತಾಯಿಸಿದರು. ಹಿಂದಿನ ಗ್ರಾಮಸಭೆಗಳಲ್ಲಿ ಕೈಗೊಂಡು ಕಳುಹಿಸಲಾಗಿರುವ ಹಲವು ನಿರ್ಣಯಗಳು ಇನ್ನೂ ಅನುಷ್ಠಾನಗೊಂಡಿಲ್ಲ. ಅವುಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಗ್ರಾಮಸಭೆಗೆ ಆಗಮಿಸಿ ಕಾರಣ ಹಾಗೂ ಕೈಗೊಂಡಿರುವ ಕ್ರಮಗಳ ಬಗ್ಗೆ ಸ್ಪಷ್ಟ ಮಾಹಿತಿ ನೀಡಬೇಕು. ಗ್ರಾಮಸಭೆ ಕೇವಲ ಕಾಟಾಚಾರದ ಕಾರ್ಯಕ್ರಮವಾಗದೆ, ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಲ್ಪಿಸುವ ವೇದಿಕೆಯಾಗಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.
ಅರಣ್ಯ ಇಲಾಖೆಯ ಪಂಜ ವಲಯ ಅರಣ್ಯಾಧಿಕಾರಿ, ಕೆಎಸ್ಆರ್ಟಿಸಿ, ಆಹಾರ ಮತ್ತು ನಾಗರಿಕ ಸರಬರಾಜು, ಸರ್ವೆ, ಲೋಕೋಪಯೋಗಿ ಇಲಾಖೆ ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿಗಳು ಗ್ರಾಮಸಭೆಗಳಿಗೆ ನಿಯಮಿತವಾಗಿ ಹಾಜರಾಗುತ್ತಿಲ್ಲ. ಗ್ರಾಮದಲ್ಲಿ ವಿವಿಧ ಇಲಾಖೆಗೆ ಸಂಬಂಧಿಸಿದ ಹಲವು ಸಮಸ್ಯೆಗಳಿದ್ದು, ಅವುಗಳ ಪರಿಹಾರಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳು ಗ್ರಾಮಸಭೆಗೆ ಕಡ್ಡಾಯವಾಗಿ ಹಾಜರಾಗಬೇಕು ಅವರು ಬರೆದಿದ್ದಲ್ಲಿ ಗ್ರಾಮ ಸಭೆಯನ್ನು ಮುಂದೂಡಿ ಎಂದು ಜಾನ್ಸನ್ ಕಾಪಿನವಾಗಿಲು, ರಫೀಕ್, ಸಿದ್ದೀಕ್, ಜಾನ್ಸನ್ ಇಚಿಲಂಪಾಡಿ, ಕೆ.ಇ. ಅಬೂಬಕ್ಕರ್, ಇಸ್ಮಾಯಿಲ್, ಬಿಜು ಸೇರಿದಂತೆ ಗ್ರಾಮಸ್ಥರು ಒತ್ತಾಯಿಸಿದರು.
ಈ ವೇಳೆ ಕೌಕ್ರಾಡಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಎಂ.ಕೆ.ಇಬ್ರಾಹಿಂ, ಹನೀಫ್, ಮಾಜಿ ಸದಸ್ಯ ವರ್ಗೀಸ್ ಅಬ್ರಾಹಿಂ ಸೇರಿದಂತೆ ಗ್ರಾಮಸ್ಥರು ಮುಂದಿನ ಗ್ರಾಮಸಭೆಯ ದಿನಾಂಕವನ್ನು ಇಂದೇ ತಿಳಿಸಬೇಕು ಎಂದು ಆಗ್ರಹಿಸಿದರು. ಇಲಾಖಾವಾರು ಅಧಿಕಾರಿಗಳು ಹಾಜರಾಗದೆ ಗ್ರಾಮಸಭೆ ನಡೆಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೋಹನ್ ಕುಮಾರ್ ಜಿ ಮಾತನಾಡಿ, ಸೆ.24ರೊಳಗೆ ಕಸ್ತೂರಿರಂಗನ್ ವರದಿ ಕುರಿತು ಮಾಹಿತಿ ನೀಡುವ ಹಿನ್ನೆಲೆಯಲ್ಲಿ ಸೆ.24ರಂದು ವಿಶೇಷ ಗ್ರಾಮಸಭೆ ನಡೆಸಲಾಗುವುದು. ಅಲ್ಲದೆ, ಅ.6ರಂದು ಗ್ರಾಮಸಭೆ ನಡೆಸುವ ಕುರಿತು ಸಭೆಯಲ್ಲಿ ಮಾಹಿತಿ ನೀಡಿದರು.
ಅ.6ರಂದು ನಡೆಯಲಿರುವ ಗ್ರಾಮಸಭೆಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು. ಇಲ್ಲವಾದಲ್ಲಿ ಗ್ರಾಮಸಭೆಯನ್ನು ಮತ್ತೊಮ್ಮೆ ಬಹಿಷ್ಕರಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಆರೋಗ್ಯ, ಅರಣ್ಯ, ಕಂದಾಯ, ಮೆಸ್ಕಾಂ, ಕೃಷಿ, ಶಿಕ್ಷಣ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಉದಯಕುಮಾರ್, ಉಪಾಧ್ಯಕ್ಷೆ ಭವಾನಿ, ಗ್ಯಾರೆಂಟಿ ಯೋಜನೆ ಕಡಬ ತಾಲೂಕು ಅನುಷ್ಠಾನ ಸಮಿತಿ ಸದಸ್ಯ ಸತೀಶ್ ಪಳಿಕೆ ಸೇರಿದಂತೆ ಗ್ರಾಮಸ್ಥರು ಹಾಗೂ ಪಂಚಾಯಿತಿ ಕಾರ್ಯದರ್ಶಿ ದೇವಿಕಾ ಎಂ. ಉಪಸ್ಥಿತರಿದ್ದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೋಹನ್ ಕುಮಾರ್ ಜಿ ಸ್ವಾಗತಿಸಿ ವಂದಿಸಿದರು.
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...

72ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಪಂಜ ವಲಯ ಅರಣ್ಯ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ ನೆಲ್ಯಾಡಿ: “ಆವಾಸ ಸ್ಥಾನಗಳ ಜೋಡಣೆ ಹಾಗೂ ವನ್ಯಜೀವಿಗಳ ಅಭಿವೃದ್ಧಿ” ಎಂಬ ಘೋಷವಾಕ್ಯದೊಂದಿಗೆ ನಡೆಯುತ್ತಿರುವ ...
ಉಪ್ಪಿನಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಉಪ್ಪಿನಂಗಡಿ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ–ಬಾಲಕಿಯರ ಕ್ರೀಡಾಕೂಟ ಹಿರೆಬಂಡಾಡಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದಲ್ಲಿ ಇಂದ್ರಪ್ರಸ್ಥ ...
ಕೊಕ್ಕಡ: ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಶಿಶಿಲ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛತಾ ಹೀ ಸೇವಾ ಸಮಾರೋಪ ಸಮಾರಂಭದೊಂದಿಗೆ ವಿಶೇಷ ಗ್ರಾಮ ಸಭೆ ನಡೆಯಿತು. ಪಂಚಾಯತ್ ಆಡಳಿತಾಧಿಕಾರಿ ಭರತ್ ...
ಕೊಕ್ಕಡ: ಸಂತ ಜೋನ್ ಬ್ಯಾಪ್ಟಿಸ್ಟ್ ದೇವಾಲಯದಲ್ಲಿ ನೂತನ ಯಾಜಕರಾಗಿ ಗುರುದೀಕ್ಷೆ ಸ್ವೀಕರಿಸಿದ ರೆ| ಫಾ| ವಿಲ್ಫ್ರೆಡ್ ಸ್ಟೀವನ್ ರೊಡ್ರಿಗಸ್ ಹಾಗೂ ಡಾಕ್ಟರೇಟ್ ಪದವಿ ಪಡೆದ ಡಾ| ಸೈಮನ್ ...
ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪ ಎಫ್ಐಆರ್ನಲ್ಲಿ ಸೇರಿಸಿಲ್ಲ: ಬಣಕಲ್ ಪೊಲೀಸರ ವಿರುದ್ಧ ಗಾಯಾಳುಗಳ ಆಕ್ರೋಶ ಕೊಕ್ಕಡ: ಮಂತ್ರಾಲಯಕ್ಕೆ ತೆರಳುತ್ತಿದ್ದ ಶಿಶಿಲದ ಸ್ನೇಹಿತರಿದ್ದ ಕಾರಿಗೆ ಎದುರಿನಿಂದ ಬಂದ ...