ಪಠ್ಯದ ಜೊತೆಗೆ ಕೃಷಿಯ ಬಗ್ಗೆ ಕಲಿಕೆಯೂ ಅಗತ್ಯ: ಬೆಳ್ಳಿಪ್ಪಾಡಿ ರಾಜೇಂದ್ರ ರೈ
ಕಡಬ: ಶಿಕ್ಷಣದ ಜೊತೆಗೆ ಮಕ್ಕಳಿಗೆ ಕೃಷಿ ಸಂಸ್ಕೃತಿಯತ್ತ ಒಲವು ಮೂಡಿಸುವ ಕಾರ್ಯಕ್ರಮಗಳು ನಡೆಯಬೇಕು. ಗ್ರಾಮೀಣ ಪ್ರದೇಶದ ಮಕ್ಕಳು ಕೂಡ ಕೃಷಿಯ ಬಗ್ಗೆ ಆಸಕ್ತಿ ವಹಿಸದಿರುವುದು ವಿಷಾದದ ಸಂಗತಿಯಾಗಿದೆ ಎಂದು ಬ್ಯಾಂಕ್ ಆಫ್ ಬರೋಡ ಸಂಯೋಜಿತ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಕಾರ್ಯದರ್ಶಿ ಬೆಳ್ಳಿಪ್ಪಾಡಿ ರಾಜೇಂದ್ರ ರೈ ಅವರು ಕಳವಳ ವ್ಯಕ್ತಪಡಿಸಿದರು.
ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ವಾಳ್ಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬ್ಯಾಂಕ್ ಆಫ್ ಬರೋಡ ಸಂಯೋಜಿತ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ದಂತ ಆರೋಗ್ಯ ಮಾಹಿತಿ ಶಿಬಿರ ಹಾಗೂ ಪ್ರತಿಷ್ಠಾನದ ಆರ್ಥಿಕ ನೆರವಿನಿಂದ ಬೇಲಿ ನಿರ್ಮಿಸಿದ ಶಾಲೆಯ ಕೈತೋಟವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಕೃಷಿಯ ಬಗ್ಗೆ ಒಲವು ಮೂಡಿಸುವ ಉದ್ದೇಶದಿಂದ ಶಾಲೆಗಳಲ್ಲಿ ಶಾಲಾ ಕೈತೋಟ ರಚನೆಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಪ್ರತಿಷ್ಠಾನದ ವತಿಯಿಂದ ಕಡಬ ಪರಿಸರದಲ್ಲಿ ಹೊಲಿಗೆ ತರಬೇತಿ ಶಿಬಿರಗಳು, ಜೇನು ಕೃಷಿ ತರಬೇತಿ, ರಬ್ಬರ್ಟ್ಯಾಪಿಂಗ್ತರಬೇತಿ, ರಬ್ಬರ್ಮರಗಳಿಗೆ ಪ್ಲಾಸ್ಟಿಕ್ ಕವಚ ತೊಡಿಸುವುದು ಮುಂತಾದ ತರಬೇತಿಗಳನ್ನು ನೀಡಲಾಗಿದೆ. ವಿಶೇಷವಾಗಿ ಕೃಷಿ ಸಂಬಂಧಿತ ತರಬೇತಿಗಳನ್ನು ಕೂಡ ನಡೆಸಲಾಗಿದೆ ಎಂದು ಅವರು ವಿವರಿಸಿದರು.
ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜ್ಯೋತಿರಾಜ್ ಅವರು ಮಾತನಾಡಿ ಈ ಹಿಂದೆ ವಿಜಯ ಬ್ಯಾಂಕ್ನ ಮೂಲಕ ಆರಂಭಗೊಂಡ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಇಂದು ಬ್ಯಾಂಕ್ ಆಫ್ ಬರೋಡದ ಅಧೀನದಲ್ಲಿ ಹಲವಾರು ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿದೆ. ಮುಖ್ಯವಾಗಿ ಜನರನ್ನು ಕೌಶಲಯುಕ್ತ ತರಬೇತಿಗಳ ಮೂಲಕ ಸ್ವ ಉದ್ಯೋಗಕ್ಕೆ ಸಿದ್ಧಗೊಳಿಸಿ ಸ್ವತಂತ್ರ ಬದುಕು ಕಟ್ಟಿಕೊಳ್ಳಲು ನೆರವಾಗುವುದು ಹಾಗೂ ತರಬೇತಿಗಳನ್ನು ಹಮ್ಮಿಕೊಳ್ಳುವುದು ಪ್ರತಿಷ್ಠಾನದ ಪ್ರಧಾನ ಕೆಲಸಗಳಲ್ಲಿ ಒಂದಾಗಿದೆ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಶಿವರಾಮ ಗೌಡ ಅವರು ಮಾತನಾಡಿ ಗ್ರಾಮೀಣ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳು ಉಳಿಯಬೇಕಾದರೆ ಸಮುದಾಯ ಸಹಕಾರ ಅತ್ಯಗತ್ಯ. ಶಾಲೆಯ ಚಟುವಟಿಕೆಗೆ ನೆರವು ನೀಡಿದ ಪ್ರತಿಷ್ಠಾನದ ಪ್ರಮುಖರಿಗೆ ನಾವು ಕೃತಜ್ಞರಾಗಿದ್ದೇವೆ ಎಂದರು.
ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ನಾಗರಾಜ್ ಎನ್.ಕೆ. ಹಾಗೂ ಗ್ರಾ.ಪಂ.ಮಾಜಿ ಸದಸ್ಯ ಕಿರಣ್ ಗೋಗಟೆ ಶುಭಹಾರೈಸಿದರು. ಕಡಬದ ಶ್ರೀದುರ್ಗಾ ದಂತ ಚಿಕಿತ್ಸಾಲಯದ ದಂತ ವೈದ್ಯ ಡಾ|ರಾಮ್ಪ್ರಕಾಶ್ ಅವರು ವಿದ್ಯಾರ್ಥಿಗಳಿಗೆ ದಂತ ಆರೋಗ್ಯದ ಕುರಿತು ಮಾಹಿತಿ ನೀಡಿದರು. ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಶೃತಿ ದೋಣಿಗಂಡಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ರಸಪ್ರಶ್ನೆ ನಡೆಸಿ ಬಹುಮಾನ ನೀಡಲಾಯಿತು. ವಿದ್ಯಾರ್ಥಿಗಳಲ್ಲಿ ದಿನಚರಿ ಬರೆಯುವ ಹವ್ಯಾಸ ಬೆಳೆಸುವ ಉದ್ದೇಶದಿಂದ ದಿವಂಗತ ಗಜಾನನ ಗೋಗಟೆ ಅವರ ಸ್ಮರಣಾರ್ಥ ಅವರ ಪತ್ನಿ ರೇಖಾ ಗೋಗಟೆ (ಯುಎಸ್ಎ) ಅವರು ಕೊಡುಗೆಯಾಗಿ ನೀಡಿದ ದಿನಚರಿ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.
ಮುಖ್ಯಶಿಕ್ಷಕಿ ಶೋಭಾವತಿ ಅವರು ಸ್ವಾಗತಿಸಿ, ವಂದಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಾಶೀನಾಥ್ಗೋಗಟೆ ನಿರೂಪಿಸಿದರು.
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...