ಸರಕಾರಿ ಶಾಲೆಗಳ ಉಳಿವಿಗೆ ಸಮುದಾಯದ ಸಹಕಾರ ಅಗತ್ಯ:ಬೆಳ್ಳಿಪ್ಪಾಡಿ ರಾಜೇಂದ್ರ ರೈ
ಕಡಬ: ಕಡಬ ತಾಲೂಕಿನ ಮರ್ದಾಳದ ಪಾಲೆತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬ್ಯಾಂಕ್ ಆಫ್ ಬರೋಡ ಸಂಯೋಜಿತ ಸಂಸ್ಥೆ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಇದರ ಕೊಡುಗೆಯಾಗಿ ನೀಡಲಾದ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಲಾ ಸಭಾಂಗಣದಲ್ಲಿ ಜರಗಿದ ಸಮಾರಂಭದಲ್ಲಿ ಉದ್ಘಾಟಿಸಲಾಯಿತು.
ಉದ್ಘಾಟನೆ ನೆರವೇರಿಸಿ ಮಾತನಾಡಿದ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಕಾರ್ಯದರ್ಶಿ ಬೆಳ್ಳಿಪಾಡಿ ರಾಜೇಂದ್ರ ರೈ ಅವರು ಸರಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಶಿಕ್ಷಣದ ಜೊತೆಗೆ ಬದುಕು ಕಟ್ಟಿಕೊಳ್ಳುವ ಧೈರ್ಯವನ್ನು ಮಕ್ಕಳಿಗೆ ಹೇಳಿಕೊಡಲಾಗುತ್ತದೆ. ಸರಕಾರಿ ಶಾಲೆಗಳಲ್ಲಿ ಕಲಿತ ಮಕ್ಕಳು ಜೀವನದ ಯಾವುದೇ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ಶಕ್ತಿ ಹೊಂದಿರುತ್ತಾರೆ. ಆದುದರಿಂದ ನಾವೆಲ್ಲರೂ ಸರಕಾರಿ ಶಾಲೆಗಳ ಉಳಿವಿಗಾಗಿ ಕೈಜೋಡಿಸಬೇಕು. ಸರಕಾರಿ ಶಾಲೆಗಳ ಉಳಿವಿಗೆ ಸಮುದಾಯದ ಸಹಕಾರ ಕೂಡ ಅತ್ಯಗತ್ಯ ಎಂದರು. ಶಾಲೆಗಳ ಅಭಿವೃದ್ಧಿಯಲ್ಲಿ ಶಿಕ್ಷಕರ ಪ್ರಯತ್ನದ ಜೊತೆಗೆ ಊರವರ ಪಾತ್ರ ಪ್ರಧಾನವಾದುದು. ದಾನಿಗಳ ನೆರವು ಪಡೆದುಕೊಂಡು ಶಾಲೆಗಳ ಅಗತ್ಯವನ್ನು ಪೂರೈಸುವ ಜೊತೆಗೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡಿದರೆ ಸರಕಾರಿ ಶಾಲೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಸೇರ್ಪಡೆಯಾಗುತ್ತಾರೆ ಎಂದು ಅವರು ಅಭಿಪ್ರಾಯಪಟ್ಟರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜ್ಯೋತಿರಾಜ್ ಅವರು ಮಾತನಾಡಿ ವಿಜಯ ಬ್ಯಾಂಕ್ ಮೂಲಕ ಹುಟ್ಟು ಹಾಕಲ್ಪಟ್ಟವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನವು ಪ್ರಸ್ತುತ ಬ್ಯಾಂಕ್ ಆಫ್ ಬರೋಡಾ ಸಂಯೋಜಿತ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.
ಶಾಲಾ ಮುಖ್ಯಶಿಕ್ಷಕಿ ಶ್ಯಾಮಲ ಅವರು ಮಾತನಾಡಿ ಪ್ರತಿಷ್ಠಾನದ ಕಾರ್ಯದರ್ಶಿ ರಾಜೇಂದ್ರ ರೈ ಅವರು ಶಾಲೆಯ ಅಭಿವೃದ್ಧಿಗೆ ಹಲವು ಕೊಡುಗೆಗಳನ್ನು ನೀಡಿದ್ದಾರೆ. ಅವರ ಸಹಕಾರ ಸ್ಮರಣೀಯವಾದುದು ಎಂದು ಕೃತಜ್ಞತೆ ಸಲ್ಲಿಸಿದರು. ಎಸ್ಡಿಎಂಸಿ ಮಾಜಿ ಅಧ್ಯಕ್ಷ ಮಾಲಿನಿ ನಾಗೇಶ್ ಶುಭ ಹಾರೈಸಿದರು. ಎಸ್ಡಿಎಂಸಿ ಉಪಾಧ್ಯಕ್ಷ ಶರೀಫ್ ಮರುವಂತಿಲ ಅಧ್ಯಕ್ಷತೆ ವಹಿಸಿದರು.
ಬ್ಯಾಂಕ್ ಆಫ್ ಬರೋಡ ಮರ್ದಾಳ ಶಾಖೆಯ ಪ್ರಬಂಧಕ ರಾಮಚಂದ್ರ ಪ್ರಸಾದ್, ಅಧಿಕಾರಿ ಮಹೇಶ್, ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ನಾಗರಾಜ್ ಎನ್.ಕೆ. ಅತಿಥಿಯಾಗಿ ಆಗಮಿಸಿದ್ದರು. ಮರ್ದಾಳ ಗ್ರಾ.ಪಂ. ಗ್ರಂಥಾಲಯ ಮೇಲ್ವಿಚಾರಕ ನಾಗೇಶ್ ಗೌಡ ಉಪಸ್ಥಿತರಿದ್ದರು. ಸಮಾರಂಭದ ಅಂಗವಾಗಿ ವಿದ್ಯಾರ್ಥಿಗಳಿಗೆ ನಡೆಸಲಾದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ವಿಜೇತನಾದ ವಿದ್ಯಾರ್ಥಿ ಚಿರಾಗ್ ಅವರಿಗೆ ಪ್ರತಿಷ್ಠಾನದ ವತಿಯಿಂದ ಬಹುಮಾನ ನೀಡಲಾಯಿತು.
ಪ್ರತಿಷ್ಠಾನದ ಕಾರ್ಯದರ್ಶಿ ಬೆಳ್ಳಿಪಾಡಿ ರಾಜೇಂದ್ರ ರೈ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜ್ಯೋತಿರಾಜ್ ಹಾಗೂ ಬ್ಯಾಂಕ್ ಆಫ್ ಬರೋಡ ಮರ್ದಾಳ ಶಾಖೆಯ ಪ್ರಬಂಧಕ ರಾಮಚಂದ್ರ ಪ್ರಸಾದ್ ಅವರನ್ನು ಶಾಲೆಯ ವತಿಯಿಂದ ಸಮ್ಮಾನಿಸಿ ಗೌರವಿಸಲಾಯಿತು.
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...