ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್–ಅಶ್ವಿನಿ ಆಸ್ಪತ್ರೆ ಸಹಯೋಗದಲ್ಲಿ ತಜ್ಞ ವೈದ್ಯರಿಂದ ತಪಾಸಣೆ ಹಾಗೂ ಸಲಹೆ




ನೆಲ್ಯಾಡಿ: ಮಂಗಳೂರಿನ ಪ್ರತಿಷ್ಠಿತ ಬಂಜೆತನ ನಿವಾರಣಾ ಸಂಸ್ಥೆಯಾದ ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ವತಿಯಿಂದ ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಯಲ್ಲಿ ಸೆ.27ರಂದು ಆದಿತ್ಯವಾರ ಉಚಿತ ಬಂಜೆತನ ಚಿಕಿತ್ಸಾ ಶಿಬಿರ ಆಯೋಜಿಸಲಾಗಿದೆ.
ಮದುವೆಯಾಗಿ ಒಂದು ವರ್ಷ ಕಳೆದರೂ ಮಕ್ಕಳಾಗದ ದಂಪತಿಗಳಿಗೆ ಬಂಜೆತನಕ್ಕೆ ಸಂಬಂಧಿಸಿದಂತೆ ತಪಾಸಣೆ ನಡೆಸಿ, ತಜ್ಞ ವೈದ್ಯರಿಂದ ಸೂಕ್ತ ಸಲಹೆ ಹಾಗೂ ಚಿಕಿತ್ಸಾ ಮಾರ್ಗದರ್ಶನ ನೀಡಲಾಗುವುದು. ಬಂಜೆತನದ ಸಮಸ್ಯೆ ಎದುರಿಸುತ್ತಿರುವ ದಂಪತಿಗಳು ಈ ಉಚಿತ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಆಯೋಜಕರು ತಿಳಿಸಿದ್ದಾರೆ.
ಈ ಕುರಿತು ತಮ್ಮ ಪರಿಚಯಸ್ಥರು, ಸ್ನೇಹಿತರು ಅಥವಾ ಸಂಬಂಧಿಕರಲ್ಲಿ ಮದುವೆಯಾಗಿ ಒಂದು ವರ್ಷ ಕಳೆದರೂ ಮಕ್ಕಳಾಗದ ದಂಪತಿಗಳಿದ್ದಲ್ಲಿ, ಶಿಬಿರದ ಮಾಹಿತಿಯನ್ನು ಅವರಿಗೆ ತಲುಪಿಸಿ, ತಪಾಸಣೆ ಹಾಗೂ ತಜ್ಞ ವೈದ್ಯರ ಸಲಹೆ ಪಡೆಯಲು ಪ್ರೋತ್ಸಾಹಿಸುವಂತೆ ಮನವಿ ಮಾಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ 9900289198 ಸಂಖ್ಯೆಯನ್ನು ಸಂಪರ್ಕಿಸಬಹುದು.









































































































