




ಕೊಕ್ಕಡ: ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಗಾಗಿ ನಡೆಯುತ್ತಿರುವ ಹೋರಾಟವನ್ನು ಮುಂದುವರಿಸುವ ನಿಟ್ಟಿನಲ್ಲಿ ಶಿಶಿಲ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಶಿಶಿಲ–ಬೈರಾಪುರ ರಸ್ತೆ ಹೋರಾಟ ಸಮಿತಿಯ ಸಭೆ ಗುರುವಾರ ನಡೆಯಿತು.
ಸಭೆಯಲ್ಲಿ ಶಿಶಿಲ–ಬೈರಾಪುರ ಸಂಪರ್ಕ ರಸ್ತೆ ಕಾಮಗಾರಿ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಹೋರಾಟದ ಕಾರ್ಯಕ್ರಮಗಳ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು. ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಈಗಾಗಲೇ ಕೈಗೊಂಡಿರುವ ಕ್ರಮಗಳು, ಸಂಬಂಧಪಟ್ಟ ಇಲಾಖೆಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ನಡೆಸಿದ ಮಾತುಕತೆಗಳ ಕುರಿತು ಪರಿಶೀಲನೆ ನಡೆಸಿ, ಮುಂದಿನ ಹಂತದಲ್ಲಿ ಕೈಗೊಳ್ಳಬೇಕಾದ ಕಾರ್ಯಯೋಜನೆಗಳ ಬಗ್ಗೆ ಸದಸ್ಯರು ಅಭಿಪ್ರಾಯ ಹಂಚಿಕೊಂಡರು.
ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿ ಈ ಭಾಗದ ಜನರ ಬಹುಕಾಲದ ಬೇಡಿಕೆಯಾಗಿದ್ದು, ಸಂಪರ್ಕ ವ್ಯವಸ್ಥೆ ಸುಧಾರಣೆಯ ಜೊತೆಗೆ ಸ್ಥಳೀಯರ ಸಂಚಾರ, ಕೃಷಿ ಹಾಗೂ ವಿವಿಧ ಅಗತ್ಯಗಳಿಗೆ ಅನುಕೂಲವಾಗಲಿದೆ. ಈ ಹಿನ್ನೆಲೆಯಲ್ಲಿ ಬೇಡಿಕೆ ಈಡೇರುವವರೆಗೆ ಸಂಘಟಿತವಾಗಿ ಹೋರಾಟ ಮುಂದುವರಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ಶಿಶಿಲ–ಬೈರಾಪುರ ರಸ್ತೆ ಹೋರಾಟ ಸಮಿತಿಯ ಸಂಚಾಲಕರಾದ ಸುಂದರ ಕೆ., ಸಂದೀಪ್ ಎ.ಎಸ್., ಕೆ. ನರಸಿಂಹ ಗೌಡ, ರಾಮಚಂದ್ರ ಕೆ., ಕರುಣಾಕರ ಎ., ಸುದೀನ್ ಡಿ., ರಾಧಾಕೃಷ್ಣ, ಪದ್ಮನಾಭ ಕೆ., ಕೊರಗಪ್ಪ ಗೌಡ, ವಿಶ್ವನಾಥ ಪೂಜಾರಿ, ಪದ್ಮಪ್ಪ ಪೂಜಾರಿ ಸೇರಿದಂತೆ ಸಮಿತಿಯ ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.









































































































