ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪ ಎಫ್ಐಆರ್ನಲ್ಲಿ ಸೇರಿಸಿಲ್ಲ: ಬಣಕಲ್ ಪೊಲೀಸರ ವಿರುದ್ಧ ಗಾಯಾಳುಗಳ ಆಕ್ರೋಶ
ಕೊಕ್ಕಡ: ಮಂತ್ರಾಲಯಕ್ಕೆ ತೆರಳುತ್ತಿದ್ದ ಶಿಶಿಲದ ಸ್ನೇಹಿತರಿದ್ದ ಕಾರಿಗೆ ಎದುರಿನಿಂದ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಶಿಶಿಲ ಗ್ರಾಮದ ಮಂತಾಜೆ ನಿವಾಸಿ ದೀಪೇಶ್(27) ಚಿಕಿತ್ಸೆ ಫಲಕಾರಿಯಾಗದೆ ಭಾನುವಾರದಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಈ ನಡುವೆ ಅಪಘಾತಕ್ಕೆ ಕಾರಣ ಎನ್ನಲಾದ ಕಾರಿನ ಚಾಲಕ ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ ವಿಚಾರವನ್ನು ಪೊಲೀಸರಿಗೆ ತಿಳಿಸಿದ್ದರೂ, ಅದನ್ನು ಎಫ್ಐಆರ್ನಲ್ಲಿ ದಾಖಲಿಸದೆ ಪ್ರಕರಣವನ್ನು ಬೇರೆ ದಿಕ್ಕಿಗೆ ಕೊಂಡೊಯ್ಯುವ ಪ್ರಯತ್ನ ನಡೆದಿದೆ ಎಂದು ಗಾಯಾಳುಗಳು ಬಣಕಲ್ ಪೊಲೀಸರ ವಿರುದ್ಧ ಆರೋಪಿಸಿದ್ದಾರೆ.
ಬಣಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರು ಹಾಗೂ ಎಫ್ಐಆರ್ ಪ್ರಕಾರ, ಸೆ.29ರಂದು ನಸುಕಿನ ಜಾವ ಸುಮಾರು 1.30ಕ್ಕೆ ಶಿಶಿಲದ ರಘು(32), ಶಿಶಿಲ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸುಧೀನ್, ಸತೀಶ, ದೀಪೇಶ್, ದೀಪಕ್ ಅಲಿಯಾಸ್ ತಿರುಮಲೇಶ್ವರ ಹಾಗೂ ಶೋಭಿತ್ ಅಲಿಯಾಸ್ ನಾಗರಾಜ್ ಅವರು ಮಂತ್ರಾಲಯಕ್ಕೆ ತೆರಳಲು ಶಿಶಿಲದಿಂದ ಸ್ನೇಹಿತ ವಸಂತಕುಮಾರ್ ಅವರ ಮಾಲೀಕತ್ವದ ಇನೋವಾ ಕಾರನ್ನು ರಘು ಚಲಾಯಿಸುತ್ತಿದ್ದರು. ಉಜಿರೆ–ಚಾರ್ಮಾಡಿ ಮಾರ್ಗವಾಗಿ ಬಣಕಲ್ ದಾಟಿ ಮೂಡಿಗೆರೆ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ, ನಸುಕಿನ ಜಾವ ಸುಮಾರು 3.40ಕ್ಕೆ ಸಬ್ಬೇನಹಳ್ಳಿ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಎದುರಿನಿಂದ ಬಂದ ಫೋರ್ಡ್ ಎಂಡೆವರ್ ಕಾರಾಗಿದ್ದು ಅದರ ಚಾಲಕ ಆಲ್ದೂರು ನಿವಾಸಿ ಸುಂದರೇಶ್ ಅವರ ಪುತ್ರ ಅಮೋಘ್ ಡಿ.ಎಸ್. ಅವರು ಚಲಾಯಿಸುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಇನೋವಾ ಕಾರಿನಲ್ಲಿದ್ದ ಆರು ಮಂದಿಗೂ ಗಾಯಗಳಾಗಿದ್ದು. ಈ ಪೈಕಿ ಹಿಂಬದಿ ಆಸನದಲ್ಲಿದ್ದ ದೀಪೇಶ್ ಅವರ ಕುತ್ತಿಗೆಗೆ ಹಾಗೂ ಸುಧೀನ್ ಅವರ ಎಡಭುಜಕ್ಕೆ ಗಂಭೀರ ಪೆಟ್ಟಾಗಿರುವುದು ಕಂಡುಬಂದಿತ್ತು. ರಘು, ಸತೀಶ, ನಾಗರಾಜ್ ಹಾಗೂ ದೀಪಕ್ ಅವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದವು.
ಅಪಘಾತದ ಬಳಿಕ ದೀಪಕ್ ಅವರು ಆಂಬುಲೆನ್ಸ್ ಮೂಲಕ ದೀಪೇಶ್ ಹಾಗೂ ಸುಧೀನ್ ಅವರನ್ನು ಬಣಕಲ್ನ ಕೃಷ್ಣ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ವೈದ್ಯರ ಸಲಹೆಯಂತೆ ಇಬ್ಬರನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಉಜಿರೆಯ ಎಸ್ಡಿಎಂ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಸುಧೀನ್ ಅವರನ್ನು ಎಸ್ಡಿಎಂ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಿಸಲಾಗಿದ್ದು, ದೀಪೇಶ್ ಅವರಿಗೆ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದ ಹಿನ್ನೆಲೆಯಲ್ಲಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ದೀಪೇಶ್ ಮೃತಪಟ್ಟಿದ್ದಾರೆ.
ಮೃತರು ತಾಯಿ, ಇಬ್ಬರ ಸಹೋದರರನ್ನು ಅಗಲಿದ್ದಾರೆ.
ಗಾಯಾಳುಗಳ ಚಿಕಿತ್ಸೆಯ ಕಾರಣದಿಂದ ಆಸ್ಪತ್ರೆಯಲ್ಲಿದ್ದ ಹಿನ್ನೆಲೆಯಲ್ಲಿ ದೂರು ನೀಡಲು ವಿಳಂಬವಾಯಿತು ಎಂದು ರಘು ದೂರಿನಲ್ಲಿ ತಿಳಿಸಿದ್ದಾರೆ. ಅವರ ಲಿಖಿತ ದೂರಿನ ಮೇರೆಗೆ ಅ.1ರಂದು ಸಂಜೆ 5ಕ್ಕೆ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಒದಗಿಸಲಾದ ಎಫ್ಐಆರ್ ಪ್ರತಿಯಲ್ಲಿ ಚಾಲಕ ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಕುರಿತು ಯಾವುದೇ ಉಲ್ಲೇಖವಿಲ್ಲ ಎಂದು ಗಾಯಾಳುಗಳು ತಿಳಿಸಿದ್ದಾರೆ.
ಅಪಘಾತಕ್ಕೆ ಕಾರಣ ಎನ್ನಲಾದ ಕಾರಿನ ಚಾಲಕ ಅತಿಹೆಚ್ಚಿನ ರೀತಿಯಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ ಬಗ್ಗೆ ಬಣಕಲ್ ಠಾಣೆಯ ಸಬ್ಇನ್ಸ್ಪೆಕ್ಟರ್ ದಿಲೀಪ್ ಅವರಿಗೆ ತಿಳಿಸಲಾಗಿತ್ತು. ಚಾಲಕನನ್ನು ವೈದ್ಯಕೀಯ ಪರೀಕ್ಷೆಗೂ ಒಳಪಡಿಸಲಾಗಿತ್ತು. ಆದರೂ ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪವನ್ನು ಎಫ್ಐಆರ್ನಲ್ಲಿ ದಾಖಲಿಸಿಲ್ಲ ಎಂದು ಗಾಯಾಳುಗಳು ಆರೋಪಿಸಿದ್ದಾರೆ. ಈ ಕುರಿತು ಪ್ರಶ್ನಿಸಿದಾಗ ಸಬ್ಇನ್ಸ್ಪೆಕ್ಟರ್ ದಿಲೀಪ್ ಅವರು ತಮ್ಮೊಂದಿಗೆ ದುರ್ವರ್ತನೆ ತೋರಿದ್ದಾರೆ ಎಂದು ಗಾಯಾಳುಗಳು ಆರೋಪಿಸಿದ್ದಾರೆ.
ಈ ವಿಚಾರವಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಸಿ.ಟಿ.ರವಿ ಹಾಗೂ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಅವರ ಗಮನಕ್ಕೂ ತರಲಾಗಿತ್ತು ಅವರು ಮದ್ಯಪಾನ ಮಾಡಿ ವಾಹನ ಚಲಾಯಿಸಿರುವ ಆರೋಪವಿದ್ದರೂ ಅದನ್ನು ಎಫ್ಐಆರ್ನಲ್ಲಿ ಏಕೆ ಸೇರಿಸಿಲ್ಲ ಎಂದು ಪೊಲೀಸ್ ಅಧಿಕಾರಿಯನ್ನು ಪ್ರಶ್ನಿಸಲಾಗಿತ್ತು. ಬಳಿಕ ಸಂಬಂಧಿತ ವಿಚಾರವನ್ನು ಸೇರಿಸುವುದಾಗಿ ತಿಳಿಸಿದ್ದರೂ ಎಫ್ಐಆರ್ನಲ್ಲಿ ಅದು ದಾಖಲಾಗಿಲ್ಲ. ಹೀಗಾಗಿ ಪ್ರಕರಣವನ್ನು ದಾರಿ ತಪ್ಪಿಸುವ ಪ್ರಯತ್ನ ನಡೆದಿದೆ ಎಂದು ಗಾಯಾಳುಗಳು ಆರೋಪಿಸಿದ್ದಾರೆ.
ಈ ನಡುವೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಅವರಿಗೆ ದೂರವಾಣಿ ಮೂಲಕ ವಿಷಯ ತಿಳಿಸಿದ್ದರೂ ಸಮರ್ಪಕ ಸ್ಪಂದನೆ ದೊರೆಯಲಿಲ್ಲ ಎಂದು ಗಾಯಾಳುಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮನ್ನು ಅವರ ಪಕ್ಷದವರಲ್ಲ ಎಂಬ ರೀತಿಯಲ್ಲಿ ಪರಿಗಣಿಸಿ ವರ್ತಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ನಿಷ್ಪಕ್ಷಪಾತವಾಗಿ ನಡೆಸಬೇಕು ಹಾಗೂ ಅಪಘಾತಕ್ಕೆ ಕಾರಣವಾದ ಅಂಶಗಳನ್ನೆಲ್ಲ ತನಿಖೆಯಲ್ಲಿ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮೃತಪಟ್ಟ ಯುವಕನ ಕುಟುಂಬದವರು.
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
72ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಪಂಜ ವಲಯ ಅರಣ್ಯ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ ನೆಲ್ಯಾಡಿ: “ಆವಾಸ ಸ್ಥಾನಗಳ ಜೋಡಣೆ ಹಾಗೂ ವನ್ಯಜೀವಿಗಳ ಅಭಿವೃದ್ಧಿ” ಎಂಬ ಘೋಷವಾಕ್ಯದೊಂದಿಗೆ ನಡೆಯುತ್ತಿರುವ ...
ಉಪ್ಪಿನಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಉಪ್ಪಿನಂಗಡಿ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ–ಬಾಲಕಿಯರ ಕ್ರೀಡಾಕೂಟ ಹಿರೆಬಂಡಾಡಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದಲ್ಲಿ ಇಂದ್ರಪ್ರಸ್ಥ ...
ಕೊಕ್ಕಡ: ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಶಿಶಿಲ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛತಾ ಹೀ ಸೇವಾ ಸಮಾರೋಪ ಸಮಾರಂಭದೊಂದಿಗೆ ವಿಶೇಷ ಗ್ರಾಮ ಸಭೆ ನಡೆಯಿತು. ಪಂಚಾಯತ್ ಆಡಳಿತಾಧಿಕಾರಿ ಭರತ್ ...
ಕೊಕ್ಕಡ: ಸಂತ ಜೋನ್ ಬ್ಯಾಪ್ಟಿಸ್ಟ್ ದೇವಾಲಯದಲ್ಲಿ ನೂತನ ಯಾಜಕರಾಗಿ ಗುರುದೀಕ್ಷೆ ಸ್ವೀಕರಿಸಿದ ರೆ| ಫಾ| ವಿಲ್ಫ್ರೆಡ್ ಸ್ಟೀವನ್ ರೊಡ್ರಿಗಸ್ ಹಾಗೂ ಡಾಕ್ಟರೇಟ್ ಪದವಿ ಪಡೆದ ಡಾ| ಸೈಮನ್ ...
ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪ ಎಫ್ಐಆರ್ನಲ್ಲಿ ಸೇರಿಸಿಲ್ಲ: ಬಣಕಲ್ ಪೊಲೀಸರ ವಿರುದ್ಧ ಗಾಯಾಳುಗಳ ಆಕ್ರೋಶ ಕೊಕ್ಕಡ: ಮಂತ್ರಾಲಯಕ್ಕೆ ತೆರಳುತ್ತಿದ್ದ ಶಿಶಿಲದ ಸ್ನೇಹಿತರಿದ್ದ ಕಾರಿಗೆ ಎದುರಿನಿಂದ ಬಂದ ...
ಅರಸಿನಮಕ್ಕಿ: ಮಹಾತ್ಮಗಾಂಧಿ ಜಯಂತಿಯ ಅಂಗವಾಗಿ ಅರಸಿನಮಕ್ಕಿ ಗ್ರಾಮ ಪಂಚಾಯಿತಿ ವತಿಯಿಂದ ಗಾಂಧಿ ಜಯಂತಿ ಆಚರಣೆ ಹಾಗೂ ‘ಸ್ವಚ್ಛತಾ ಹೀ ಸೇವಾ’ ಅಭಿಯಾನದ ಸಮಾರೋಪ ಸಮಾರಂಭ ನಡೆಯಿತು. ಇದೇ ...
ನೆಲ್ಯಾಡಿ: ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ನೆಲ್ಯಾಡಿ ಮಹಾಶಕ್ತಿ ಕೇಂದ್ರದ ವತಿಯಿಂದ ‘ಸೇವಾ ಸಂಕಲ್ಪ ಅಭಿಯಾನ’ದ ಅಂಗವಾಗಿ ಅ.4ರಂದು ನೆಲ್ಯಾಡಿಯಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ನೆಲ್ಯಾಡಿಯ ...
ನೆಲ್ಯಾಡಿ: ಕಡಬ ತಾಲೂಕಿನ ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಅನಿಲ ಸಮೀಪ ಶುಕ್ರವಾರ ಸಂಜೆ ಚಲಿಸುತ್ತಿದ್ದ ಕಾರಿಗೆ ಕಡವೆಯೊಂದು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸುಬ್ರಹ್ಮಣ್ಯದಿಂದ ...
ನೆಲ್ಯಾಡಿ: ನೆಲ್ಯಾಡಿಯ ಲೈಫ್ ಫಾರ್ಮಾ ಸಂಸ್ಥೆಯಲ್ಲಿ ಔಷಧ ವಿತರಣೆ ಹಾಗೂ ಕಂಪ್ಯೂಟರ್ ಬಿಲ್ಲಿಂಗ್ ಕೆಲಸ ನಿರ್ವಹಿಸಲು ಸಿಬ್ಬಂದಿ ತುರ್ತಾಗಿ ಅಗತ್ಯವಿದ್ದಾರೆ. ಅಭ್ಯರ್ಥಿಗಳು ಎಸ್ಎಸ್ಎಲ್ಸಿ, ಪಿಯುಸಿ ಅಥವಾ ಯಾವುದೇ ...
ಶಿರಾಡಿ: ಕಡಬ ತಾಲೂಕು ಶಿರಾಡಿ ಗ್ರಾಮದ ಎಸ್.ಆರ್.ಎಸ್. ಪೆಟ್ರೋಲ್ ಪಂಪ್ ಸಮೀಪ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಬೊಲೆರೋ ಪಿಕ್ಅಪ್ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ...
ಕೊಕ್ಕಡ: ನಿಡ್ಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ 2026-27ನೇ ಸಾಲಿನ ಕೊಕ್ಕಡ, ನಿಡ್ಲೆ ಹಾಗೂ ಪೆರ್ಲ ಕ್ಲಸ್ಟರ್ಗಳ ವಲಯ ಮಟ್ಟದ 14ರ ವಯೋಮಾನದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಶಿಶಿಲದ ಮಹರ್ಷಿ ...
ಕೊಕ್ಕಡ: ನಾಲ್ಕು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳ ಮೂಲಕ ಪೂರ್ಣ ಪ್ರಮಾಣದ ಪ್ರಯತ್ನ ನಡೆಸಲಾಗುವುದು ಎಂದು ಮಂಗಳೂರು ಲೋಕಸಭಾ ...
ನೆಲ್ಯಾಡಿ: ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ನಾಟೆಕಲ್–ಮಂಗಳೂರು ಹಾಗೂ ಬದ್ರಿಯಾ ಜುಮಾ ಮಸೀದಿ ನೆಲ್ಯಾಡಿಯ ಅಧೀನ ಸಂಸ್ಥೆಯಾದ ನುಸ್ರತುಲ್ ಮಸಾಕೀನ್ ಯಂಗ್ ಮೆನ್ಸ್ ...
ಕಡಬ: ಪೊಲೀಸ್ ಇಲಾಖೆಯ ಸಿವಿಲ್ ಪರೀಕ್ಷೆ ಕಾನ್ಸ್ಟೇಬಲ್ ನೇಮಕಾತಿಯ ದೈಹಿಕ ಪರೀಕ್ಷೆಗೆ ಹಾಜರಾಗಲು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ದುರ್ಬಳಕೆ ಮಾಡಿಕೊಂಡು ನಕಲಿ ಪ್ರವೇಶ ಪತ್ರ ಸೃಷ್ಟಿಸಿ ವಂಚಿಸಲು ...
ನೆಲ್ಯಾಡಿ: ಉದನೆ ಸಮೀಪದ ನೆಲ್ಯಡ್ಕ ನಿವಾಸಿ ಬೆಳ್ತಂಗಡಿ ಧರ್ಮಪ್ರಾಂತ್ಯದ ವಿಕಾರಿ ಜನರಲ್ ಆಗಿ ಸೇವೆ ಸಲ್ಲಿಸುತ್ತಿದ್ದ ವಂ.ಡಾ.ಮಾಣಿ ವೆಳುತ್ತೇಡತ್ತುಪರಂಬಿಲ್(64) ಅವರು ಅಲ್ಪಕಾಲದ ಅನಾರೋಗ್ಯದಿಂದ ಗುರುವಾರದಂದು ನಿಧನರಾದರು. ಧರ್ಮಗುರುಗಳಾಗಿ, ...
ನೆಲ್ಯಾಡಿ: ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದ ಅಟೋರಿಕ್ಷಾ ಚಲಾಯಿಸಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಕಡಬ ತಾಲೂಕು ಶಿರಿಬಾಗಿಲು ಗ್ರಾಮದ ದೇರಣೆ ಎಂಬಲ್ಲಿ ಭಾನುವಾರದಂದು ...
ನೆಲ್ಯಾಡಿ: ಸರ್ ಪ್ರಕ್ರಿಯೆಯ ಸಂದರ್ಭದಲ್ಲಿ ಕೌಕ್ರಾಡಿ ಗ್ರಾ.ಪಂ. ವ್ಯಾಪ್ತಿಯ ಉದ್ಯೋಗ ನಿಮಿತ್ತ ವಿದೇಶ ಹಾಗೂ ಬೆಂಗಳೂರಿನಲ್ಲಿ ತಾತ್ಕಾಲಿಕವಾಗಿ ವಾಸಿಸುತ್ತಿರುವ ಸ್ಥಳೀಯ ನಿವಾಸಿಗಳ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವಂತೆ ...
ಕೊಕ್ಕಡ: ಹಲವು ವರ್ಷಗಳಿಂದ ಗ್ರಾಮಸ್ಥರ ಬೇಡಿಕೆಯಾಗಿರುವ ಶಿಶಿಲ-ಬೈರಾಪುರ ಅಂತರ ಜಿಲ್ಲಾ ಗ್ರಾಮೀಣ ರಸ್ತೆಯನ್ನು ಹಸಿರು ಮಾದರಿ ರಸ್ತೆಯಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮಂಗಳವಾರ ಸ್ಥಳ ಪರಿಶೀಲನೆ ನಡೆಯಿತು. ಪ್ರಧಾನಮಂತ್ರಿ ...
ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪತ್ರಡ್ಕದಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ...
ನೆಲ್ಯಾಡಿ: ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಸಮಾಜ ಸೇವಕ ಹಾಗೂ ಯಕ್ಷಗಾನ ಸಂಘಟಕ, ನೆಲ್ಯಾಡಿ ಕೆಳಗಿನಪರಾರಿ ನಿವಾಸಿ ದಿ.ಜಯಾನಂದ ಬಂಟ್ರಿಯಾಲ್ ಅವರಿಗೆ ಯಕ್ಷಗಾನ ತಾಳಮದ್ದಳೆಯ ಮೂಲಕ ನುಡಿನಮನ ...
ಕಳೆಂಜ: ಗ್ರಾಮದ ಶಾಲೆತ್ತಡ್ಕ ಎಂಬಲ್ಲಿ ಕೇಂದ್ರ ಸರಕಾರದ ಅನುದಾನದಡಿಯಲ್ಲಿ ಸುಮಾರು ರೂ. 65 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಆಯುಷ್ಮಾನ್ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕಟ್ಟಡದ ಶಿಲಾನ್ಯಾಸ ...
ಶಿಶಿಲ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ದ.ಕ. ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಬೆಳ್ತಂಗಡಿ ವತಿಯಿಂದ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ, ಶಿಶಿಲದಲ್ಲಿ ...
ಉಜಿರೆ: ಮೌಲ್ಯ ನಾಯಕ್ ಅವರು ದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯವು ಆಯೋಜಿಸಿದ್ದ ಭಾರತೀಯ ಜ್ಞಾನ ಪರಂಪರೆ (ಇಂಡಿಯನ್ ನಾಲೆಡ್ಜ್ ಸಿಸ್ಟಮ್ ) ಸಂಸ್ಕೃತ ಒಲಂಪಿಯಾಡ್ನಲ್ಲಿ ಸ್ವರ್ಣ ಪದಕ ...
ಕೊಕ್ಕಡ: ನಾಡಿನ ಪ್ರಸಿದ್ಧ ಬಯಲು ಗಣಪತಿ ಕ್ಷೇತ್ರವಾಗಿರುವ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ...
ಕಡಬ: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ ಬಯೋ ಮೆಡಿಕಲ್ ಎಂಜಿನಿಯರಿಂಗ್ ಅಂತಿಮ ಪರೀಕ್ಷೆಯಲ್ಲಿ ಬೆಂಗಳೂರಿನ ಡಾ| ಎಸಿಎಸ್ ಇಂಜಿನಿಯರಿಂಗ್ ಕಾಲೇಜಿನ (2022-26 ಬ್ಯಾಚ್) ವಿದ್ಯಾರ್ಥಿ ಕಡಬದ ...
ನೇಲ್ಯಡ್ಕ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳ್ತಂಗಡಿ ಹಾಗೂ ರೆಖ್ಯಾ-ನೇಲ್ಯಡ್ಕ ಅಂಗನವಾಡಿ ಕೇಂದ್ರದ ವತಿಯಿಂದ ಸುಮಾರು 36 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಅಂಗನವಾಡಿ ...
ರಾಮಕುಂಜ: ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕು. ರಕ್ಷಾ ಡಿ. ಅವರು 30 ನಿಮಿಷದಲ್ಲಿ ಕೈಗಳನ್ನು ಸೊಂಟದಲ್ಲಿ ಜೊತೆಯಾಗಿ ಹಿಡಿದು ಮುಂದಕ್ಕೆ ಹಾಗೂ ...
ಉಜಿರೆ: ಶಿಕ್ಷಣ ಮತ್ತು ಆರೋಗ್ಯ ಎಲ್ಲರಿಗೂ ಸಿಗುವುದೇ ಸರಕಾರದ ಆಶಯ. ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಕಾಣುತ್ತಿದೆ. ನಾಡಿನ ಬೆಳಕಾಗುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಎಲ್ಲ ಶಿಕ್ಷಕರಿಗೆ ...
ನೂಜಿಬಾಳ್ತಿಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಕಡಬ ವಲಯದ ನೂಜಿಬಾಳ್ತಿಲ ನವಚೇತನ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಸಮಾರಂಭವು ನೂಜಿಬಾಳ್ತಿಲ ಗ್ರಾಮ ...
ಬಜತ್ತೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೈಕ್ವೊಂದು ಟ್ಯಾಂಕರ್ಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸೆ.25ರ ರಾತ್ರಿ ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ...
ಸೆ.29ರಂದು ಶಿಶಿಲ ವಾಲ್ಮೀಕಿ ಆಶ್ರಮ ಶಾಲೆ ಕಟ್ಟಡ ಉದ್ಘಾಟನೆ ವಿದ್ಯುತ್ ಕೈಕೊಟ್ಟರೆ ವಿದ್ಯಾರ್ಥಿಗಳಿಗೆ ಮಂದ ಬೆಳಕಿನಲ್ಲೇ ಪಾಠ ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಆದಿವಾಸಿ ಹಾಗೂ ಪರಿಶಿಷ್ಟ ಪಂಗಡ ...
ಬಂಟ್ವಾಳ: ತಲವಾರು ಹಾಗೂ ಕಬ್ಬಿಣದ ರಾಡ್ನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ತೀವ್ರವಾಗಿ ಗಾಯಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ತೆಂಕಬೆಳ್ಳೂರು ...
ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ ಚತುಷ್ಪಥಗೊಂಡ ಬಳಿಕ ನೆಲ್ಯಾಡಿ ಬಸ್ ನಿಲ್ದಾಣಕ್ಕೆ ಎಕ್ಸ್ಪ್ರೆಸ್ ಬಸ್ಗಳು ಪ್ರವೇಶಿಸದೆ ಓವರ್ಬ್ರಿಡ್ಜ್ ಮೂಲಕ ನೇರವಾಗಿ ಸಂಚರಿಸುತ್ತಿರುವುದರಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಎಕ್ಸ್ಪ್ರೆಸ್ ಹಾಗೂ ಸರ್ವಿಸ್ ...
ಬಂಟ್ವಾಳ: ತಾಲೂಕಿನ ತುಂಬೆ ಗ್ರಾಮದ ಕೆಳಗಿನ ತುಂಬೆ ಎಂಬಲ್ಲಿ ನದಿ ಕಿನಾರೆಯಿಂದ ಅಕ್ರಮವಾಗಿ ಮರಳು ತೆಗೆದು ಟಿಪ್ಪರ್ ಲಾರಿಗಳಿಗೆ ತುಂಬಿಸುತ್ತಿದ್ದ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಸೆ.25ರಂದು ...
ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ-75ರಲ್ಲಿ ನೆಲ್ಯಾಡಿಯ ಸೇಂಟ್ ಜಾರ್ಜ್ ಹಾಗೂ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಗಳ ನಡುವೆ ಯು-ಟರ್ನ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ನಡೆದ ಹೋರಾಟದ ಹಿನ್ನೆಲೆಯಲ್ಲಿ ಭಾರತೀಯ ರಾಷ್ಟ್ರೀಯ ...
ಕೊಕ್ಕಡ: ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಗಾಗಿ ನಡೆಯುತ್ತಿರುವ ಹೋರಾಟವನ್ನು ಮುಂದುವರಿಸುವ ನಿಟ್ಟಿನಲ್ಲಿ ಶಿಶಿಲ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಶಿಶಿಲ–ಬೈರಾಪುರ ರಸ್ತೆ ಹೋರಾಟ ಸಮಿತಿಯ ಸಭೆ ಗುರುವಾರ ನಡೆಯಿತು. ಸಭೆಯಲ್ಲಿ ...
ನೆಲ್ಯಾಡಿ: ವಳಯಿಲ್ ನಿವಾಸಿ, ದಿ. ವಿ.ಟಿ. ಜೋಸೆಫ್ ಅವರ ಪತ್ನಿ ಚಿನ್ನಮ್ಮ (56) ಅವರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ. 24ರಂದು ನಿಧನರಾದರು. ಮೃತರು ...
ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್–ಅಶ್ವಿನಿ ಆಸ್ಪತ್ರೆ ಸಹಯೋಗದಲ್ಲಿ ತಜ್ಞ ವೈದ್ಯರಿಂದ ತಪಾಸಣೆ ಹಾಗೂ ಸಲಹೆ ನೆಲ್ಯಾಡಿ: ಮಂಗಳೂರಿನ ಪ್ರತಿಷ್ಠಿತ ಬಂಜೆತನ ನಿವಾರಣಾ ಸಂಸ್ಥೆಯಾದ ಬಿರ್ಲಾ ಫರ್ಟಿಲಿಟಿ ಮತ್ತು ...
ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಜಿಲ್ಲಾ ಹಾಗೂ ತಾಲೂಕು ಮಹಿಳಾ ಒಕ್ಕೂಟಗಳ ಸದಸ್ಯರಿಗೆ ಲಿಂಗ ಸಮಾನತಾ ಕುರಿತು ಸಾಮರ್ಥ್ಯ ವರ್ಧನಾ ತರಬೇತಿ ಕಾರ್ಯಕ್ರಮ ಬೆಳ್ತಂಗಡಿಯ ಸಾನ್ತೋಮ್ ...
ವಿಕಾಸ ಸೌಧದಲ್ಲಿ ಕರ್ನಾಟಕ ರಾಜ್ಯದ ಮಾಜಿ ಸೈನಿಕರ ಸಂಘದ ಪ್ರತಿನಿಧಿಗಳೊಂದಿಗೆ ಗೃಹ ಸಚಿವ ಪ್ರಿಯಾಂಕ ಖರ್ಗೆ ಸಭೆ; ಭೂಮಿ, ಮೀಸಲಾತಿ, ಉದ್ಯೋಗ, ನಿವೇಶನ ಸೇರಿದಂತೆ ವಿವಿಧ ಬೇಡಿಕೆಗಳ ...
ಶಿಶಿಲ: ಗ್ರಾಮದ ಗುಂಡಿಕ್ಕಾಡು ನಿವಾಸಿ ತನಿಯಪ್ಪ ಗೌಡ ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೆ.23ರಂದು ಬೆಳಕಿಗೆ ಬಂದಿದೆ. ಕೆಲ ದಿನಗಳ ಹಿಂದಷ್ಟೇ ಅವರ ...
ನೆಲ್ಯಾಡಿ: ಗ್ರಾಮದ ತೋಟದಮನೆ ನಿವಾಸಿ, ನಿವೃತ್ತ ಉಪತಹಶೀಲ್ದಾರ್ ಹಾಗೂ ನೆಲ್ಯಾಡಿ ವಲಯ ಬಂಟರ ಸಂಘದ ಸ್ಥಾಪಕ ಕಾರ್ಯದರ್ಶಿ ಗುಡ್ಡಪ್ಪ ಶೆಟ್ಟಿ(68) ಅವರು ಸೆ. 23ರಂದು ಮುಂಜಾನೆ ಸ್ವಗೃಹದಲ್ಲಿ ...
ನೆಲ್ಯಾಡಿ: ಕಸ್ತೂರಿ ರಂಗನ್ ವರದಿ ಕುರಿತಂತೆ ಗ್ರಾಮಸ್ಥರ ಸಲಹೆ, ಸೂಚನೆ, ಅಭಿಪ್ರಾಯ ಸಂಗ್ರಹಕ್ಕೆ ಸಂಬಂಧಿಸಿ ಗೋಳಿತ್ತೊಟ್ಟು ಗ್ರಾ.ಪಂ.ನ ವಿಶೇಷ ಗ್ರಾಮಸಭೆ ಸೆ.22ರಂದು ಬೆಳಗ್ಗೆ ಗ್ರಾ.ಪಂ.ಸಭಾಭವನದಲ್ಲಿ ನಡೆಯಿತು. ಸಭೆಯಲ್ಲಿ ...
ಸರಕಾರಿ ಶಾಲೆಗಳ ಉಳಿವಿಗೆ ಸಮುದಾಯದ ಸಹಕಾರ ಅಗತ್ಯ:ಬೆಳ್ಳಿಪ್ಪಾಡಿ ರಾಜೇಂದ್ರ ರೈ ಕಡಬ: ಕಡಬ ತಾಲೂಕಿನ ಮರ್ದಾಳದ ಪಾಲೆತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬ್ಯಾಂಕ್ ಆಫ್ ಬರೋಡ ...
ನೆಲ್ಯಾಡಿ: ನಿವೃತ್ತ ಅರಣ್ಯ ರಕ್ಷಕ ಶೀನಪ್ಪ ಗೌಡ(64ವ.)ರವರು ಅಲ್ಪಕಾಲದ ಅನಾರೋಗ್ಯದಿಂದ ಸೆ.22ರಂದು ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾದರು. ಮೂಲತ: ಕಡಬ ತಾಲೂಕಿನ ಗೋಳಿತ್ತೊಟ್ಟು ಗ್ರಾಮದ ಕುದ್ಕೋಳಿ ...
ಪಠ್ಯದ ಜೊತೆಗೆ ಕೃಷಿಯ ಬಗ್ಗೆ ಕಲಿಕೆಯೂ ಅಗತ್ಯ: ಬೆಳ್ಳಿಪ್ಪಾಡಿ ರಾಜೇಂದ್ರ ರೈ ಕಡಬ: ಶಿಕ್ಷಣದ ಜೊತೆಗೆ ಮಕ್ಕಳಿಗೆ ಕೃಷಿ ಸಂಸ್ಕೃತಿಯತ್ತ ಒಲವು ಮೂಡಿಸುವ ಕಾರ್ಯಕ್ರಮಗಳು ನಡೆಯಬೇಕು. ಗ್ರಾಮೀಣ ...
ರಸ್ತೆಯ ತಿರುವಿನಲ್ಲಿ ನಿಯಂತ್ರಣ ತಪ್ಪಿ ಅಪಘಾತ; ಮಂಗಳೂರು ಆಸ್ಪತ್ರೆಗೆ ದಾಖಲು ನೆಲ್ಯಾಡಿ: ಕಡಬ ತಾಲೂಕಿನ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಬೈಕ್ವೊಂದು ನಿಯಂತ್ರಣ ...