ನೇಸರ ಮಾ.30: ಕಡಬ ಠಾಣೆಯಲ್ಲಿ ಎಸ್.ಐ ಆಗಿದ್ದ ರುಕ್ಮ ನಾಯ್ಕ್ ಬೆಳ್ಳಾರೆ ಠಾಣೆಗೆ ವರ್ಗಾವಣೆಯಾಗಿದ್ದು, ಬೆಳ್ಳಾರೆ ಠಾಣೆ ಎಸ್.ಐ ಆಂಜನೇಯ ರೆಡ್ಡಿ ಕಡಬ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.
ಈ ಕುರಿತು ಪಶ್ಚಿಮ ವಲಯ ಐಜಿಪಿ ಕಛೇರಿ ಆದೇಶ ಹೊರಡಿಸಿದೆ. ಕಳೆದೆರಡು ವರ್ಷಗಳಿಂದ ಕಡಬ ಠಾಣಾ ಸಬ್ ಇನ್ಸ್‌ಪೆಕ್ಟರ್ ಆಗಿ ರುಕ್ಮ ನಾಯ್ಕ್ ಅನೇಕ ಜನಪರ ಕಾರ್ಯಗಳನ್ನು ಮಾಡುವುದರೊಂದಿಗೆ, ಜನಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.