72ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಪಂಜ ವಲಯ ಅರಣ್ಯ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ
ನೆಲ್ಯಾಡಿ: “ಆವಾಸ ಸ್ಥಾನಗಳ ಜೋಡಣೆ ಹಾಗೂ ವನ್ಯಜೀವಿಗಳ ಅಭಿವೃದ್ಧಿ” ಎಂಬ ಘೋಷವಾಕ್ಯದೊಂದಿಗೆ ನಡೆಯುತ್ತಿರುವ 72ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಕರ್ನಾಟಕ ಅರಣ್ಯ ಇಲಾಖೆ, ಮಂಗಳೂರು ವಿಭಾಗದ ಪಂಜ ವಲಯದ ವತಿಯಿಂದ ಸೋಮವಾರ ನೆಲ್ಯಾಡಿಯಲ್ಲಿ ಬೈಕ್ ಜಾಥಾ ಹಾಗೂ ಜಾಗೃತಿ ಕಾರ್ಯಕ್ರಮ ನಡೆಯಿತು.
ಪಂಜ ವಲಯ ಅರಣ್ಯಾಧಿಕಾರಿ ಸಂಧ್ಯಾ ಅವರ ನೇತೃತ್ವದಲ್ಲಿ ಉಪ ವಲಯ ಅರಣ್ಯಾಧಿಕಾರಿಗಳು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಬೈಕ್ ಜಾಥಾದಲ್ಲಿ ಪಾಲ್ಗೊಂಡು ನೆಲ್ಯಾಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ಮೂಲಕ ಅರಣ್ಯ, ವನ್ಯಜೀವಿ ಹಾಗೂ ಪರಿಸರ ಸಂರಕ್ಷಣೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
“ಅರಣ್ಯ–ವನ್ಯಜೀವಿ–ನಮ್ಮೆಲ್ಲರ ಹೊಣೆ” ಎಂಬ ಸಂದೇಶದೊಂದಿಗೆ ಅರಣ್ಯ ಸಂಪತ್ತಿನ ರಕ್ಷಣೆ, ವನ್ಯಜೀವಿಗಳ ಸಂರಕ್ಷಣೆ ಹಾಗೂ ಪರಿಸರ ಸ್ವಚ್ಛತೆಯ ಮಹತ್ವವನ್ನು ಸಾರಲಾಯಿತು. ವಿಶ್ವ ಪಾರಂಪರಿಕ ತಾಣವಾಗಿರುವ ಪಶ್ಚಿಮ ಘಟ್ಟಗಳ ಒಡಲಿನಲ್ಲಿ ನೆಲೆಗೊಂಡಿರುವ ಪಂಜ ವಲಯವು ಕಡಬ ಹಾಗೂ ಸುಳ್ಯ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಸುಮಾರು 32 ಸಾವಿರ ಎಕರೆ ಅರಣ್ಯ ಪ್ರದೇಶವನ್ನು ಹೊಂದಿದ್ದು, ನಿತ್ಯಹರಿದ್ವರ್ಣ ಹಾಗೂ ಆದ್ರ್ರ ಎಲೆ ಉದುರುವ ಅರಣ್ಯಗಳು, ವೈವಿಧ್ಯಮಯ ಸಸ್ಯ–ಪ್ರಾಣಿ ಸಂಪತ್ತು, ಹುಲ್ಲುಗಾವಲುಗಳು ಹಾಗೂ ಜಲಪಾತಗಳಿಂದ ಸಮೃದ್ಧವಾಗಿದೆ. ಪಂಜ ವಲಯದ ವ್ಯಾಪ್ತಿಯ ಬಂಟಮಲೆ, ಬಳ್ಳ ಸೇರಿದಂತೆ ವಿವಿಧ ರಕ್ಷಿತಾರಣ್ಯಗಳು ಅಪರೂಪದ ಸಸ್ಯ ಮತ್ತು ಪ್ರಾಣಿ ಸಂಕುಲಗಳಿಗೆ ಆಶ್ರಯ ನೀಡುತ್ತಿದ್ದು, ಈ ಅಮೂಲ್ಯ ನೈಸರ್ಗಿಕ ಸಂಪತ್ತಿನ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಜಾಗೃತಿ ಮೂಡಿಸಲಾಯಿತು. ಪಶ್ಚಿಮ ಘಟ್ಟಗಳಲ್ಲಿ ಹುಟ್ಟಿ ಹರಿಯುವ ಕುಮಾರಧಾರ ನದಿ ಈ ಭಾಗದ ಪ್ರಮುಖ ಜೀವನಾಡಿಯಾಗಿದ್ದು, ಲಕ್ಷಾಂತರ ಜನರ ಕುಡಿಯುವ ನೀರು ಹಾಗೂ ಕೃಷಿ ಚಟುವಟಿಕೆಗಳಿಗೆ ಆಧಾರವಾಗಿದೆ. ನದಿಯ ಜಲಾನಯನ ಪ್ರದೇಶವು ವಿಶಿಷ್ಟ ನದಿ ತೀರದ ಜೀವವೈವಿಧ್ಯವನ್ನು ಹೊಂದಿರುವುದರಿಂದ ನದಿ, ಅರಣ್ಯ ಹಾಗೂ ಜಲಮೂಲಗಳ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯವನ್ನು ಸಾರ್ವಜನಿಕರಿಗೆ ತಿಳಿಸಲಾಯಿತು.
ಅರಣ್ಯ ಪ್ರದೇಶಗಳ ರಸ್ತೆ ಬದಿಗಳಲ್ಲಿ ಕಸ, ಪ್ಲಾಸ್ಟಿಕ್ ಹಾಗೂ ಇತರ ತ್ಯಾಜ್ಯಗಳನ್ನು ಎಸೆಯದಂತೆ ಮನವಿ ಮಾಡಲಾಗಿದ್ದು, ಅರಣ್ಯದಲ್ಲಿ ಬಿಸಾಡುವ ಪ್ಲಾಸ್ಟಿಕ್ ವನ್ಯಪ್ರಾಣಿಗಳ ಜೀವಕ್ಕೆ ಅಪಾಯ ಉಂಟುಮಾಡುವ ಸಾಧ್ಯತೆಯಿದೆ. ಆದ್ದರಿಂದ ಅರಣ್ಯವನ್ನು ಕಸಮುಕ್ತವಾಗಿಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ವನ್ಯಜೀವಿಗಳನ್ನು ಬೇಟೆಯಾಡುವುದು ಕಾನೂನುಬದ್ಧವಾಗಿ ಅಪರಾಧವಾಗಿದ್ದು, ವನ್ಯಜೀವಿಗಳ ನಾಶದಿಂದ ಪರಿಸರ ಸಮತೋಲನ ಹಾಗೂ ಆಹಾರ ಸರಪಳಿಗೆ ಧಕ್ಕೆಯಾಗುತ್ತದೆ. ಹೀಗಾಗಿ ವನ್ಯಜೀವಿಗಳನ್ನು ಬೇಟೆಯಾಡದೆ ಅವುಗಳೊಂದಿಗೆ ಸಹಬಾಳ್ವೆ ನಡೆಸುವ ಮೂಲಕ ಮಾನವ–ವನ್ಯಜೀವಿ ಸಂಘರ್ಷವನ್ನು ಕಡಿಮೆ ಮಾಡಲು ಎಲ್ಲರೂ ಸಹಕರಿಸಬೇಕು. ಅರಣ್ಯ ಪ್ರದೇಶಗಳಲ್ಲಿ ವಾಹನ ಸಂಚಾರ ನಡೆಸುವಾಗ ನಿಗದಿತ ವೇಗದ ಮಿತಿಯನ್ನು ಪಾಲಿಸಿ ನಿಧಾನವಾಗಿ ಹಾಗೂ ಜಾಗರೂಕತೆಯಿಂದ ವಾಹನ ಚಲಾಯಿಸುವಂತೆ ಸವಾರರಿಗೆ ಸೂಚಿಸಲಾಯಿತು. ವನ್ಯಪ್ರಾಣಿಗಳು ರಸ್ತೆ ದಾಟುವ ಸಂದರ್ಭದಲ್ಲಿ ವೇಗವಾಗಿ ವಾಹನ ಚಲಾಯಿಸುವುದರಿಂದ ಅಪಘಾತ ಸಂಭವಿಸುವ ಸಾಧ್ಯತೆಯಿದ್ದು, ವಾಹನ ಸವಾರರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಮನವಿ ಮಾಡಲಾಯಿತು. ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ ಕೇವಲ ಅರಣ್ಯ ಇಲಾಖೆಯ ಜವಾಬ್ದಾರಿಯಲ್ಲ, ಪ್ರತಿಯೊಬ್ಬ ನಾಗರಿಕನ ಮೂಲಭೂತ ಕರ್ತವ್ಯವೂ ಆಗಿದ್ದು, ಅರಣ್ಯ ಸಂಪತ್ತಿನ ರಕ್ಷಣೆ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು ಅರಣ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂಬ ಸಂದೇಶವನ್ನು ಬೈಕ್ ಜಾಥಾದ ಮೂಲಕ ಸಾರಲಾಯಿತು.
ನೆಲ್ಯಾಡಿ: ಕಡಬ ತಾಲೂಕಿನ ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಅನಿಲ ಸಮೀಪ ಶುಕ್ರವಾರ ಸಂಜೆ ಚಲಿಸುತ್ತಿದ್ದ ಕಾರಿಗೆ ಕಡವೆಯೊಂದು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸುಬ್ರಹ್ಮಣ್ಯದಿಂದ ...
ನೆಲ್ಯಾಡಿ: ನೆಲ್ಯಾಡಿಯ ಲೈಫ್ ಫಾರ್ಮಾ ಸಂಸ್ಥೆಯಲ್ಲಿ ಔಷಧ ವಿತರಣೆ ಹಾಗೂ ಕಂಪ್ಯೂಟರ್ ಬಿಲ್ಲಿಂಗ್ ಕೆಲಸ ನಿರ್ವಹಿಸಲು ಸಿಬ್ಬಂದಿ ತುರ್ತಾಗಿ ಅಗತ್ಯವಿದ್ದಾರೆ. ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ, ಪಿಯುಸಿ ಅಥವಾ ಯಾವುದೇ ...
ಶಿರಾಡಿ: ಕಡಬ ತಾಲೂಕು ಶಿರಾಡಿ ಗ್ರಾಮದ ಎಸ್.ಆರ್.ಎಸ್. ಪೆಟ್ರೋಲ್ ಪಂಪ್ ಸಮೀಪ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಬೊಲೆರೋ ಪಿಕ್‌ಅಪ್ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ...
ಕೊಕ್ಕಡ: ನಿಡ್ಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ 2026-27ನೇ ಸಾಲಿನ ಕೊಕ್ಕಡ, ನಿಡ್ಲೆ ಹಾಗೂ ಪೆರ್ಲ ಕ್ಲಸ್ಟರ್‌ಗಳ ವಲಯ ಮಟ್ಟದ 14ರ ವಯೋಮಾನದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಶಿಶಿಲದ ಮಹರ್ಷಿ ...
ಕೊಕ್ಕಡ: ನಾಲ್ಕು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳ ಮೂಲಕ ಪೂರ್ಣ ಪ್ರಮಾಣದ ಪ್ರಯತ್ನ ನಡೆಸಲಾಗುವುದು ಎಂದು ಮಂಗಳೂರು ಲೋಕಸಭಾ ...
ನೆಲ್ಯಾಡಿ: ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ನಾಟೆಕಲ್–ಮಂಗಳೂರು ಹಾಗೂ ಬದ್ರಿಯಾ ಜುಮಾ ಮಸೀದಿ ನೆಲ್ಯಾಡಿಯ ಅಧೀನ ಸಂಸ್ಥೆಯಾದ ನುಸ್ರತುಲ್ ಮಸಾಕೀನ್ ಯಂಗ್ ಮೆನ್ಸ್ ...
ಕಡಬ: ಪೊಲೀಸ್ ಇಲಾಖೆಯ ಸಿವಿಲ್ ಪರೀಕ್ಷೆ ಕಾನ್ಸ್ಟೇಬಲ್ ನೇಮಕಾತಿಯ ದೈಹಿಕ ಪರೀಕ್ಷೆಗೆ ಹಾಜರಾಗಲು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ದುರ್ಬಳಕೆ ಮಾಡಿಕೊಂಡು ನಕಲಿ ಪ್ರವೇಶ ಪತ್ರ ಸೃಷ್ಟಿಸಿ ವಂಚಿಸಲು ...
ನೆಲ್ಯಾಡಿ: ಉದನೆ ಸಮೀಪದ ನೆಲ್ಯಡ್ಕ ನಿವಾಸಿ ಬೆಳ್ತಂಗಡಿ ಧರ್ಮಪ್ರಾಂತ್ಯದ ವಿಕಾರಿ ಜನರಲ್ ಆಗಿ ಸೇವೆ ಸಲ್ಲಿಸುತ್ತಿದ್ದ ವಂ.ಡಾ.ಮಾಣಿ ವೆಳುತ್ತೇಡತ್ತುಪರಂಬಿಲ್(64) ಅವರು ಅಲ್ಪಕಾಲದ ಅನಾರೋಗ್ಯದಿಂದ ಗುರುವಾರದಂದು ನಿಧನರಾದರು. ಧರ್ಮಗುರುಗಳಾಗಿ, ...
ನೆಲ್ಯಾಡಿ: ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದ ಅಟೋರಿಕ್ಷಾ ಚಲಾಯಿಸಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಕಡಬ ತಾಲೂಕು ಶಿರಿಬಾಗಿಲು ಗ್ರಾಮದ ದೇರಣೆ ಎಂಬಲ್ಲಿ ಭಾನುವಾರದಂದು ...
ನೆಲ್ಯಾಡಿ: ಸರ್ ಪ್ರಕ್ರಿಯೆಯ ಸಂದರ್ಭದಲ್ಲಿ ಕೌಕ್ರಾಡಿ ಗ್ರಾ.ಪಂ. ವ್ಯಾಪ್ತಿಯ ಉದ್ಯೋಗ ನಿಮಿತ್ತ ವಿದೇಶ ಹಾಗೂ ಬೆಂಗಳೂರಿನಲ್ಲಿ ತಾತ್ಕಾಲಿಕವಾಗಿ ವಾಸಿಸುತ್ತಿರುವ ಸ್ಥಳೀಯ ನಿವಾಸಿಗಳ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವಂತೆ ...
ಕೊಕ್ಕಡ: ಹಲವು ವರ್ಷಗಳಿಂದ ಗ್ರಾಮಸ್ಥರ ಬೇಡಿಕೆಯಾಗಿರುವ ಶಿಶಿಲ-ಬೈರಾಪುರ ಅಂತರ ಜಿಲ್ಲಾ ಗ್ರಾಮೀಣ ರಸ್ತೆಯನ್ನು ಹಸಿರು ಮಾದರಿ ರಸ್ತೆಯಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮಂಗಳವಾರ ಸ್ಥಳ ಪರಿಶೀಲನೆ ನಡೆಯಿತು. ಪ್ರಧಾನಮಂತ್ರಿ ...
ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪತ್ರಡ್ಕದಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ...
ನೆಲ್ಯಾಡಿ: ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಸಮಾಜ ಸೇವಕ ಹಾಗೂ ಯಕ್ಷಗಾನ ಸಂಘಟಕ, ನೆಲ್ಯಾಡಿ ಕೆಳಗಿನಪರಾರಿ ನಿವಾಸಿ ದಿ.ಜಯಾನಂದ ಬಂಟ್ರಿಯಾಲ್ ಅವರಿಗೆ ಯಕ್ಷಗಾನ ತಾಳಮದ್ದಳೆಯ ಮೂಲಕ ನುಡಿನಮನ ...
ಕಳೆಂಜ: ಗ್ರಾಮದ ಶಾಲೆತ್ತಡ್ಕ ಎಂಬಲ್ಲಿ ಕೇಂದ್ರ ಸರಕಾರದ ಅನುದಾನದಡಿಯಲ್ಲಿ ಸುಮಾರು ರೂ. 65 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಆಯುಷ್ಮಾನ್ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕಟ್ಟಡದ ಶಿಲಾನ್ಯಾಸ ...
ಶಿಶಿಲ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ದ.ಕ. ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಬೆಳ್ತಂಗಡಿ ವತಿಯಿಂದ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ, ಶಿಶಿಲದಲ್ಲಿ ...
ಉಜಿರೆ: ಮೌಲ್ಯ ನಾಯಕ್ ಅವರು ದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯವು ಆಯೋಜಿಸಿದ್ದ ಭಾರತೀಯ ಜ್ಞಾನ ಪರಂಪರೆ (ಇಂಡಿಯನ್ ನಾಲೆಡ್ಜ್ ಸಿಸ್ಟಮ್ ) ಸಂಸ್ಕೃತ ಒಲಂಪಿಯಾಡ್‌ನಲ್ಲಿ ಸ್ವರ್ಣ ಪದಕ ...
ಕೊಕ್ಕಡ: ನಾಡಿನ ಪ್ರಸಿದ್ಧ ಬಯಲು ಗಣಪತಿ ಕ್ಷೇತ್ರವಾಗಿರುವ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ...
ಕಡಬ: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ ಬಯೋ ಮೆಡಿಕಲ್ ಎಂಜಿನಿಯರಿಂಗ್ ಅಂತಿಮ ಪರೀಕ್ಷೆಯಲ್ಲಿ ಬೆಂಗಳೂರಿನ ಡಾ| ಎಸಿಎಸ್ ಇಂಜಿನಿಯರಿಂಗ್ ಕಾಲೇಜಿನ (2022-26 ಬ್ಯಾಚ್) ವಿದ್ಯಾರ್ಥಿ ಕಡಬದ ...
ನೇಲ್ಯಡ್ಕ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳ್ತಂಗಡಿ ಹಾಗೂ ರೆಖ್ಯಾ-ನೇಲ್ಯಡ್ಕ ಅಂಗನವಾಡಿ ಕೇಂದ್ರದ ವತಿಯಿಂದ ಸುಮಾರು 36 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಅಂಗನವಾಡಿ ...
ರಾಮಕುಂಜ: ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕು. ರಕ್ಷಾ ಡಿ. ಅವರು 30 ನಿಮಿಷದಲ್ಲಿ ಕೈಗಳನ್ನು ಸೊಂಟದಲ್ಲಿ ಜೊತೆಯಾಗಿ ಹಿಡಿದು ಮುಂದಕ್ಕೆ ಹಾಗೂ ...
ಉಜಿರೆ: ಶಿಕ್ಷಣ ಮತ್ತು ಆರೋಗ್ಯ ಎಲ್ಲರಿಗೂ ಸಿಗುವುದೇ ಸರಕಾರದ ಆಶಯ. ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಕಾಣುತ್ತಿದೆ. ನಾಡಿನ ಬೆಳಕಾಗುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಎಲ್ಲ ಶಿಕ್ಷಕರಿಗೆ ...
ನೂಜಿಬಾಳ್ತಿಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಕಡಬ ವಲಯದ ನೂಜಿಬಾಳ್ತಿಲ ನವಚೇತನ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಸಮಾರಂಭವು ನೂಜಿಬಾಳ್ತಿಲ ಗ್ರಾಮ ...
ಬಜತ್ತೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೈಕ್‌ವೊಂದು ಟ್ಯಾಂಕರ್‌ಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸೆ.25ರ ರಾತ್ರಿ ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ...
ಸೆ.29ರಂದು ಶಿಶಿಲ ವಾಲ್ಮೀಕಿ ಆಶ್ರಮ ಶಾಲೆ ಕಟ್ಟಡ ಉದ್ಘಾಟನೆ ವಿದ್ಯುತ್ ಕೈಕೊಟ್ಟರೆ ವಿದ್ಯಾರ್ಥಿಗಳಿಗೆ ಮಂದ ಬೆಳಕಿನಲ್ಲೇ ಪಾಠ ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಆದಿವಾಸಿ ಹಾಗೂ ಪರಿಶಿಷ್ಟ ಪಂಗಡ ...
ಬಂಟ್ವಾಳ: ತಲವಾರು ಹಾಗೂ ಕಬ್ಬಿಣದ ರಾಡ್‌ನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ತೀವ್ರವಾಗಿ ಗಾಯಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ತೆಂಕಬೆಳ್ಳೂರು ...
ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ ಚತುಷ್ಪಥಗೊಂಡ ಬಳಿಕ ನೆಲ್ಯಾಡಿ ಬಸ್ ನಿಲ್ದಾಣಕ್ಕೆ ಎಕ್ಸ್‌ಪ್ರೆಸ್ ಬಸ್‌ಗಳು ಪ್ರವೇಶಿಸದೆ ಓವರ್‌ಬ್ರಿಡ್ಜ್ ಮೂಲಕ ನೇರವಾಗಿ ಸಂಚರಿಸುತ್ತಿರುವುದರಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಎಕ್ಸ್‌ಪ್ರೆಸ್ ಹಾಗೂ ಸರ್ವಿಸ್ ...
ಬಂಟ್ವಾಳ: ತಾಲೂಕಿನ ತುಂಬೆ ಗ್ರಾಮದ ಕೆಳಗಿನ ತುಂಬೆ ಎಂಬಲ್ಲಿ ನದಿ ಕಿನಾರೆಯಿಂದ ಅಕ್ರಮವಾಗಿ ಮರಳು ತೆಗೆದು ಟಿಪ್ಪರ್ ಲಾರಿಗಳಿಗೆ ತುಂಬಿಸುತ್ತಿದ್ದ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಸೆ.25ರಂದು ...
ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ-75ರಲ್ಲಿ ನೆಲ್ಯಾಡಿಯ ಸೇಂಟ್ ಜಾರ್ಜ್ ಹಾಗೂ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಗಳ ನಡುವೆ ಯು-ಟರ್ನ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ನಡೆದ ಹೋರಾಟದ ಹಿನ್ನೆಲೆಯಲ್ಲಿ ಭಾರತೀಯ ರಾಷ್ಟ್ರೀಯ ...
ಕೊಕ್ಕಡ: ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಗಾಗಿ ನಡೆಯುತ್ತಿರುವ ಹೋರಾಟವನ್ನು ಮುಂದುವರಿಸುವ ನಿಟ್ಟಿನಲ್ಲಿ ಶಿಶಿಲ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಶಿಶಿಲ–ಬೈರಾಪುರ ರಸ್ತೆ ಹೋರಾಟ ಸಮಿತಿಯ ಸಭೆ ಗುರುವಾರ ನಡೆಯಿತು. ಸಭೆಯಲ್ಲಿ ...
ನೆಲ್ಯಾಡಿ: ವಳಯಿಲ್ ನಿವಾಸಿ, ದಿ. ವಿ.ಟಿ. ಜೋಸೆಫ್ ಅವರ ಪತ್ನಿ ಚಿನ್ನಮ್ಮ (56) ಅವರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ. 24ರಂದು ನಿಧನರಾದರು. ಮೃತರು ...
ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್–ಅಶ್ವಿನಿ ಆಸ್ಪತ್ರೆ ಸಹಯೋಗದಲ್ಲಿ ತಜ್ಞ ವೈದ್ಯರಿಂದ ತಪಾಸಣೆ ಹಾಗೂ ಸಲಹೆ ನೆಲ್ಯಾಡಿ: ಮಂಗಳೂರಿನ ಪ್ರತಿಷ್ಠಿತ ಬಂಜೆತನ ನಿವಾರಣಾ ಸಂಸ್ಥೆಯಾದ ಬಿರ್ಲಾ ಫರ್ಟಿಲಿಟಿ ಮತ್ತು ...
ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಜಿಲ್ಲಾ ಹಾಗೂ ತಾಲೂಕು ಮಹಿಳಾ ಒಕ್ಕೂಟಗಳ ಸದಸ್ಯರಿಗೆ ಲಿಂಗ ಸಮಾನತಾ ಕುರಿತು ಸಾಮರ್ಥ್ಯ ವರ್ಧನಾ ತರಬೇತಿ ಕಾರ್ಯಕ್ರಮ ಬೆಳ್ತಂಗಡಿಯ ಸಾನ್ತೋಮ್ ...
ವಿಕಾಸ ಸೌಧದಲ್ಲಿ ಕರ್ನಾಟಕ ರಾಜ್ಯದ ಮಾಜಿ ಸೈನಿಕರ ಸಂಘದ ಪ್ರತಿನಿಧಿಗಳೊಂದಿಗೆ ಗೃಹ ಸಚಿವ ಪ್ರಿಯಾಂಕ ಖರ್ಗೆ ಸಭೆ; ಭೂಮಿ, ಮೀಸಲಾತಿ, ಉದ್ಯೋಗ, ನಿವೇಶನ ಸೇರಿದಂತೆ ವಿವಿಧ ಬೇಡಿಕೆಗಳ ...
ಶಿಶಿಲ: ಗ್ರಾಮದ ಗುಂಡಿಕ್ಕಾಡು ನಿವಾಸಿ ತನಿಯಪ್ಪ ಗೌಡ ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೆ.23ರಂದು ಬೆಳಕಿಗೆ ಬಂದಿದೆ. ಕೆಲ ದಿನಗಳ ಹಿಂದಷ್ಟೇ ಅವರ ...
ನೆಲ್ಯಾಡಿ: ಗ್ರಾಮದ ತೋಟದಮನೆ ನಿವಾಸಿ, ನಿವೃತ್ತ ಉಪತಹಶೀಲ್ದಾರ್ ಹಾಗೂ ನೆಲ್ಯಾಡಿ ವಲಯ ಬಂಟರ ಸಂಘದ ಸ್ಥಾಪಕ ಕಾರ್ಯದರ್ಶಿ ಗುಡ್ಡಪ್ಪ ಶೆಟ್ಟಿ(68) ಅವರು ಸೆ. 23ರಂದು ಮುಂಜಾನೆ ಸ್ವಗೃಹದಲ್ಲಿ ...
ನೆಲ್ಯಾಡಿ: ಕಸ್ತೂರಿ ರಂಗನ್ ವರದಿ ಕುರಿತಂತೆ ಗ್ರಾಮಸ್ಥರ ಸಲಹೆ, ಸೂಚನೆ, ಅಭಿಪ್ರಾಯ ಸಂಗ್ರಹಕ್ಕೆ ಸಂಬಂಧಿಸಿ ಗೋಳಿತ್ತೊಟ್ಟು ಗ್ರಾ.ಪಂ.ನ ವಿಶೇಷ ಗ್ರಾಮಸಭೆ ಸೆ.22ರಂದು ಬೆಳಗ್ಗೆ ಗ್ರಾ.ಪಂ.ಸಭಾಭವನದಲ್ಲಿ ನಡೆಯಿತು. ಸಭೆಯಲ್ಲಿ ...
ಸರಕಾರಿ ಶಾಲೆಗಳ ಉಳಿವಿಗೆ ಸಮುದಾಯದ ಸಹಕಾರ ಅಗತ್ಯ:ಬೆಳ್ಳಿಪ್ಪಾಡಿ ರಾಜೇಂದ್ರ ರೈ ಕಡಬ: ಕಡಬ ತಾಲೂಕಿನ ಮರ್ದಾಳದ ಪಾಲೆತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬ್ಯಾಂಕ್ ಆಫ್ ಬರೋಡ ...
ನೆಲ್ಯಾಡಿ: ನಿವೃತ್ತ ಅರಣ್ಯ ರಕ್ಷಕ ಶೀನಪ್ಪ ಗೌಡ(64ವ.)ರವರು ಅಲ್ಪಕಾಲದ ಅನಾರೋಗ್ಯದಿಂದ ಸೆ.22ರಂದು ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾದರು. ಮೂಲತ: ಕಡಬ ತಾಲೂಕಿನ ಗೋಳಿತ್ತೊಟ್ಟು ಗ್ರಾಮದ ಕುದ್ಕೋಳಿ ...
ಪಠ್ಯದ ಜೊತೆಗೆ ಕೃಷಿಯ ಬಗ್ಗೆ ಕಲಿಕೆಯೂ ಅಗತ್ಯ: ಬೆಳ್ಳಿಪ್ಪಾಡಿ ರಾಜೇಂದ್ರ ರೈ ಕಡಬ: ಶಿಕ್ಷಣದ ಜೊತೆಗೆ ಮಕ್ಕಳಿಗೆ ಕೃಷಿ ಸಂಸ್ಕೃತಿಯತ್ತ ಒಲವು ಮೂಡಿಸುವ ಕಾರ್ಯಕ್ರಮಗಳು ನಡೆಯಬೇಕು. ಗ್ರಾಮೀಣ ...
ರಸ್ತೆಯ ತಿರುವಿನಲ್ಲಿ ನಿಯಂತ್ರಣ ತಪ್ಪಿ ಅಪಘಾತ; ಮಂಗಳೂರು ಆಸ್ಪತ್ರೆಗೆ ದಾಖಲು ನೆಲ್ಯಾಡಿ: ಕಡಬ ತಾಲೂಕಿನ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಬೈಕ್‌ವೊಂದು ನಿಯಂತ್ರಣ ...
ನೆಲ್ಯಾಡಿ: ಪ್ರವಾದಿ ಮಹಮ್ಮದ್ ಅವರ 1501ನೇ ಜನ್ಮದಿನದ ಅಂಗವಾಗಿ ನೆಲ್ಯಾಡಿಯ ಅಲ್ ಬದ್ರಿಯಾ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ‘ಬ್ರೇಜ್ ಆಫ್ ಮದೀನಾ ಮಿಲಾದ್ ಫೆಸ್ಟ್ 2026’ ಕಾರ್ಯಕ್ರಮವು ...
ಚಾಲಕನ ದುಡುಕು ಹಾಗೂ ನಿರ್ಲಕ್ಷ್ಯದ ಚಾಲನೆ ಆರೋಪ; ಪ್ರಕರಣ ದಾಖಲು ನೆಲ್ಯಾಡಿ: ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ ಬೆಥನಿ ಕಾಲೇಜು ಬಳಿ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಲಾರಿಯೊಂದು ಮತ್ತೊಂದು ...
ಹಿಂದಿನ ಸಭೆಯ ನಿರ್ಣಯಗಳ ಅನುಷ್ಠಾನಗೊಳ್ಳದಕ್ಕೆ ಅಸಮಾಧಾನ; ಅ.6ರ ಗ್ರಾಮಸಭೆಗೂ ಅಧಿಕಾರಿಗಳು ಬಾರದಿದ್ದರೆ ಪ್ರತಿಭಟನೆ ಎಚ್ಚರಿಕೆ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮ ಪಂಚಾಯಿತಿಯಲ್ಲಿ ಶನಿವಾರ ನಿಗದಿಯಾಗಿದ್ದ ಗ್ರಾಮಸಭೆಗೆ ವಿವಿಧ ...
ನೆಲ್ಯಾಡಿ: ಜೇಸಿಐ ಸಪ್ತಾಹದ ಅಂಗವಾಗಿ ನೆಲ್ಯಾಡಿ ಜೇಸಿಐ ವತಿಯಿಂದ ನೆಲ್ಯಾಡಿ ಸಮೀಪದ ಕೊಪ್ಪದಲ್ಲಿರುವ ಪ್ರಶಾಂತ್ ನಿಲಯ ಆಶ್ರಮಕ್ಕೆ ಭೇಟಿ ನೀಡಿ, ಆಶ್ರಮವಾಸಿಗಳೊಂದಿಗೆ ಬೆರೆತು ವಿವಿಧ ಮನೋರಂಜನಾ ಕಾರ್ಯಕ್ರಮಗಳನ್ನು ...
ನೆಲ್ಯಾಡಿ: ಕಡಬ ಹಾಗೂ ಪುತ್ತೂರು ತಾಲೂಕಿನಲ್ಲಿ ಕ್ರೀಡಾ ಹಾಗೂ ಸಾಮಾಜಿಕ ಚಟುವಟಿಕೆಗಳ ಮೂಲಕ ಗಮನ ಸೆಳೆಯುತ್ತಿರುವ ಪ್ರಗತಿ ಸ್ಪೋರ್ಟ್ಸ್ ಕ್ಲಬ್‌ನ ವಾರ್ಷಿಕ ಮಹಾಸಭೆ ಹೊಸಮಜಲುನ ಬಿರ್ವ ಹಾಲ್ ...
ಕಡಬ: ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ತುಳು ಭಾಷೆಗೆ ರಾಜ್ಯದ ಎರಡನೆ ಅಧಿಕೃತ ಭಾಷೆ ಸ್ಥಾನಮಾನದ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ...
ಶಿಶಿಲ: ಗ್ರಾಮದ ಗುಂಡಿಕ್ಕಾಡು ನಿವಾಸಿ ಚಿನ್ನಮ್ಮ(ಚಿತ್ರಾವತಿ) ಅವರ ಮೃತದೇಹ ಮನೆಯ ಪಕ್ಕದ ಜಮೀನಿನಲ್ಲಿರುವ ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ. ಮೃತದೇಹ ಕೆರೆಯಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ಧರ್ಮಸ್ಥಳ ...
ನೆಲ್ಯಾಡಿ: ದೇಶದ ಪ್ರಧಾನಿ ನರೇಂದ್ರ ಮೋದಿ ಅವರ 76ನೇ ವರ್ಷದ ಜನ್ಮದಿನದ ಅಂಗವಾಗಿ ನೆಲ್ಯಾಡಿ–ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ದೇವರ ಮುಂಭಾಗದಲ್ಲಿ ದೀಪ ಹಣತೆಗಳನ್ನು ...
ನೆಲ್ಯಾಡಿ: ಮಂಗಳೂರು ಶಾಲಾ ಶಿಕ್ಷಣ ಇಲಾಖೆ ಹಾಗೂ ಕುಲಶೇಖರದ ಸೆಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ನೆಟ್‌ಬಾಲ್ ಪಂದ್ಯಾಟದಲ್ಲಿ ಕಾಂಚನ ಪ್ರೌಢಶಾಲೆಯ ...
ಕೊಕ್ಕಡ: ಸಚಿವ ಸಂಪುಟ ಸಭೆಗಾಗಿ ಮಂಗಳೂರಿಗೆ ಆಗಮಿಸಿದ್ದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಗುರುವಾರ ಶಿಶಿಲ–ಬೈರಾಪುರ ಗ್ರಾಮೀಣ ರಸ್ತೆ ಹೋರಾಟ ಸಮಿತಿಯ ಪದಾಧಿಕಾರಿಗಳು ಭೇಟಿಯಾಗಿ, ಶಿಶಿಲ–ಬೈರಾಪುರ ಸಂಪರ್ಕ ರಸ್ತೆ ...
ಪುಸ್ತಕ ಓದುವ ಹವ್ಯಾಸದಿಂದ ಏಕಾಗ್ರತೆ ವೃದ್ಧಿ: ಬೆಳ್ಳಿಪ್ಪಾಡಿ ರಾಜೇಂದ್ರ ರೈ ಕಡಬ: ತಾಲೂಕಿನ ಬಿಳಿನೆಲೆ, ಐತ್ತೂರು ಹಾಗೂ ಕಡ್ಯ ಕೊಣಾಜೆ ಗ್ರಾ.ಪಂ.ಗಳ ಗ್ರಂಥಾಲಯಗಳಿಗೆ ಬ್ಯಾಂಕ್ ಆಫ್ ಬರೋಡ ...
ಕೊಕ್ಕಡ: ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಪೆಲತ್ತಿಂಜ ನಿವಾಸಿ, ಹಲವು ವರ್ಷಗಳ ಹಿಂದೆ ಹಿಂದುಪರ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ ದಿವಂಗತ ಪಚ್ಚು ಕೊಕ್ಕಡ ಅವರ ತಾಯಿ ಹೊನ್ನಮ್ಮ ಅವರು ...
ನೆಲ್ಯಾಡಿ: ಜೆಸಿಐ ನೆಲ್ಯಾಡಿ ಘಟಕದ ವತಿಯಿಂದ ಜೆಸಿಐ ಸಪ್ತಾಹದ ಅಂಗವಾಗಿ ಜೆಸಿ ಬಂಧುಗಳಿಗಾಗಿ ವಿವಿಧ ಮನೋರಂಜನಾ ಆಟೋಟ ಸ್ಪರ್ಧೆಗಳು, ಮಾತಿನೊಂದಿಗೆ ರುಚಿ ಹಾಗೂ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು ...
ಕಡಬ: ಮಂಗಳೂರಿನಲ್ಲಿ ಶುಕ್ರವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯು ಕರಾವಳಿ ಭಾಗದ ಅಭಿವೃದ್ಧಿಗೆ ಹೊಸ ದಿಕ್ಕು ತೋರಿಸಲಿದೆ ಎಂದು ಕಡಬ ...
ಸಿಂಹಮಾಸದ ವಿಶೇಷ ಪೂಜೆಯ ಪ್ರಯುಕ್ತ ನೃತ್ಯೋತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ವಿಟ್ಲ: ಶ್ರೀ ಭಗವತಿ ದೇವಸ್ಥಾನದಲ್ಲಿ ನಡೆಯಲಿರುವ ಸಿಂಹಮಾಸದ ವಿಶೇಷ ಪೂಜೆಯ ಪ್ರಯುಕ್ತ ‘ವೈಷ್ಣವೀ ರಜತ ನೃತ್ಯಾಂತರ್ಯಾನದ ...
ಭಕ್ತಿ, ಸಂಸ್ಕೃತಿ ಹಾಗೂ ಸಾಮಾಜಿಕ ಒಗ್ಗಟ್ಟಿನೊಂದಿಗೆ ಸಂಭ್ರಮಾಚರಣೆ; ನಾಸಿಕ್ ಬ್ಯಾಂಡ್‌ನೊಂದಿಗೆ ಅದ್ದೂರಿ ಮೆರವಣಿಗೆ ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶಿಶಿಲ ಹಾಗೂ ಸಾರ್ವಜನಿಕ ಗಣೇಶೋತ್ಸವ ...
ನೆಲ್ಯಾಡಿ: ಗಾಂಧಿ ಮೈದಾನದಲ್ಲಿ ಸೆಂಟ್ ಅಲ್ಫೋನ್ಸಾ ಎಸ್.ಎಂ.ವೈ.ಎಂ. ನೇತೃತ್ವದಲ್ಲಿ ಆಯೋಜಿಸಿದ್ದ ‘ಅಲ್ಫಾ ಪ್ರಿಮಿಯರ್ ಲೀಗ್’ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬಿಳಿನೆಲೆ ಬ್ಲಾಸ್ಟರ್ಸ್ ತಂಡ ರೋಚಕ ಜಯ ಸಾಧಿಸಿ ಚಾಂಪಿಯನ್ ...
ವಿಶ್ವೇಶ್ವರಯ್ಯ ಅವರ ಸಾಧನೆ ವಿದ್ಯಾರ್ಥಿಗಳಿಗೆ ಸದಾ ಸ್ಫೂರ್ತಿ: ವರ್ಗೀಸ್ ಕೈಪಿನಡ್ಕ ಕೊಕ್ಕಡ: ದಕ್ಷಿಣ ಕನ್ನಡ ಜಿಲ್ಲೆಯ ಪರಿಸರ ಸೂಕ್ಷ್ಮ ವಲಯ 7ನೇ ಕರಡು ಅಧಿಸೂಚನೆಯನ್ನು ವಿರೋಧಿಸಿ, ಸೆ.18ರಂದು ...
ಕೊಕ್ಕಡ: ದಕ್ಷಿಣ ಕನ್ನಡ ಜಿಲ್ಲೆಯ ಪರಿಸರ ಸೂಕ್ಷ್ಮ ವಲಯ 7ನೇ ಕರಡು ಅಧಿಸೂಚನೆಯನ್ನು ವಿರೋಧಿಸಿ, ಸೆ.18ರಂದು ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ವಿಚಾರವನ್ನು ...
ನೆಲ್ಯಾಡಿ: ವಿಶ್ವವಿದ್ಯಾಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ 2026-27ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಸಂಯೋಜಕ ಡಾ.ಸುರೇಶ್ ಅಧ್ಯಕ್ಷತೆ ...
ನೆಲ್ಯಾಡಿ: ಸಂತ ಜಾರ್ಜ್ ಪದವಿಪೂರ್ವ ಕಾಲೇಜಿನ ಸಮೀಪ ನಿವಾಸಿಯಾಗಿದ್ದ, ರಬ್ಬರ್ ವ್ಯಾಪಾರಿ ದಿವಂಗತ ಅಚ್ಚ ಕುಂಞ ಅವರ ಧರ್ಮಪತ್ನಿ ಮರಿಯಮ್ಮ ಕೆ.ಸಿ. (67) ಅವರು ಅಲ್ಪಕಾಲದ ಅನಾರೋಗ್ಯದಿಂದ ...
ಧಾರ್ಮಿಕ ಸುದ್ದಿ • Religious News ನೇರ್ಲದಲ್ಲಿ ಭಕ್ತಿ ಸಡಗರದಿಂದ ಜರುಗಿದ 14ನೇ ವರ್ಷದ ಗಣೇಶೋತ್ಸವ ಇಚ್ಲಂಪಾಡಿ: ನೇರ್ಲದ ಸಿದ್ಧಿವಿನಾಯಕ ಭಜನ ಮಂದಿರದಲ್ಲಿ 14ನೇ ವರ್ಷದ ಗಣೇಶೋತ್ಸವವು ...
ವಿಕಲಚೇತನರಿಗೆ ಸವಲತ್ತು ವಿತರಣೆ, ಕ್ರೀಡಾ–ಶೈಕ್ಷಣಿಕ ಸಾಧಕರಿಗೆ ಸನ್ಮಾನ; ‘ಕಾಮಧೇನು ಸಹಕಾರ ಕಿರಣ’ ಕೈಪಿಡಿ ಬಿಡುಗಡೆ ನೆಲ್ಯಾಡಿ: ನಾಲ್ಕು ವರ್ಷಗಳ ಹಿಂದೆ ನೆಲ್ಯಾಡಿಯಲ್ಲಿ ಆರಂಭಗೊಂಡ ಕಾಮಧೇನು ಮಹಿಳಾ ಸಹಕಾರ ...
ಶಿಶಿಲ: ಸೃಷ್ಟಿ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯು ಒಕ್ಕೂಟದ ಅಧ್ಯಕ್ಷೆ ಮೀನಾಕ್ಷಿ ಬೈರಕಟ್ಟ ಅವರ ಅಧ್ಯಕ್ಷತೆಯಲ್ಲಿ ಶಿಶಿಲ ಗ್ರಾಮ ಪಂಚಾಯಿತಿ ...
ಕೊಕ್ಕಡ: ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಮೂಡುಬೈಲು ಪರಕೆ ಎಂಬಲ್ಲಿ ಶನಿವಾರ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟಾಟಾ ಸಫಾರಿ ಕಾರು ಮುಖಾಮುಖಿ ಡಿಕ್ಕಿಯಾಗಿ, ಬಸ್ಸಿನಲ್ಲಿದ್ದ ಕೆಲ ಪ್ರಯಾಣಿಕರು ...
ಪುದುವೆಟ್ಟು: ಕಸ್ತೂರಿರಂಗನ್ ವರದಿ ಹಾಗೂ ಅದರ ಆಧಾರದಲ್ಲಿ ಹೊರಡಿಸಿರುವ 7ನೇ ಕರಡು ಅಧಿಸೂಚನೆಯಡಿ ಪರಿಸರ ಸೂಕ್ಷ್ಮ ವಲಯ ಘೋಷಣೆ ಮಾಡುವ ಕ್ರಮವನ್ನು ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ...
ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಶ್ರಾವಣ ಶುಕ್ರವಾರದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳು ಭಕ್ತಿ ಹಾಗೂ ವಿಜೃಂಭಣೆಯಿಂದ ...
ನೆಲ್ಯಾಡಿ: ಜೆಸಿಐ ನೆಲ್ಯಾಡಿ ಘಟಕದ ವತಿಯಿಂದ ನೆಲ್ಯಾಡಿಯ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗಾಗಿ ನಾಯಕತ್ವ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ವಲಯ ತರಬೇತಿದಾರ ಜೆಸಿ ...
ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಕಡಬ ತಾಲೂಕು, ನೆಲ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು ಗಣೇಶೋತ್ಸವದ ಅಂಗವಾಗಿ ನೆಲ್ಯಾಡಿಯ ...