






ನೆಲ್ಯಾಡಿ: ಸಂತ ಜಾರ್ಜ್ ಪದವಿಪೂರ್ವ ಕಾಲೇಜುನ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕದ ವತಿಯಿಂದ “ನಶಾಮುಕ್ತ ಭಾರತ ಅಭಿಯಾನದ” ಘೋಷ ವಾಕ್ಯದಲ್ಲಿ ಅ.8ರಿಂದ ಅ.14ರವರೆಗೆ ಹೊಸಮಜಲು ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ವಿಶೇಷ ಶಿಬಿರ ನಡೆಯಲಿದೆ.
ಅ.8ರಂದು ಶಿಬಿರದ ಉದ್ಘಾಟನೆಯನ್ನು ವಿದ್ಯಾಸಂಸ್ಥೆಯ ಸ್ಥಾಪಕ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್ ನೆರವೇರಿಸಲಿದ್ದು, ಸಂಸ್ಥೆಯ ಸಂಚಾಲಕ ರೆ.ಫಾ.ನೋಮಿಸ್ ಪಿ. ಕುರಿಯಾಕೊಸ್ ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಸುರೇಶ್, ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಿಶಿರಾ, ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಬಾಲಕೃಷ್ಣ ಬಾಣಜಾಲು, ಹೊಸಮಜಲು ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ರಮೇಶ್ ಬಾಣಜಾಲು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸರ್ವೋತ್ತಮ ಗೌಡ, ಸಂತ ಜಾರ್ಜ್ ಪದವಿಪೂರ್ವ ಕಾಲೇಜಿನ ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮುರಳಿ ಎಚ್., ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಕೆ. ಸವಣೂರು, ಕಡಬ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ವಿಮಲ್ ಕುಮಾರ್, ಹೊಸಮಜಲು ಶಾಲೆಯ ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಿಝರ್ ಹಾಗೂ ಮುಖ್ಯ ಶಿಕ್ಷಕಿ ವೀಣಾ ಮಸ್ಕರೇನಸ್ ಮುಖ್ಯ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ. ಕಾಲೇಜಿನ ಪ್ರಾಚಾರ್ಯ ಏಲಿಯಾಸ್ ಎಂ.ಕೆ. ಶುಭಶಂಸನೆಗೈಯಲಿದ್ದಾರೆ.
ಶಿಬಿರದ ಅವಧಿಯಲ್ಲಿ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ, ಸೇವಾ ಮನೋಭಾವ, ಆರೋಗ್ಯ ಜಾಗೃತಿ, ಮನೆ ಮನೆ ಭೇಟಿ, ಶ್ರಮದಾನ, ಉಚಿತ ವೈದ್ಯಕೀಯ ಶಿಬಿರ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ








































































































