ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯ ಎನ್ಎಸ್ಎಸ್ ಘಟಕ ಹಾಗೂ ಯೆನೆಪೋಯ ದಂತ ಕಾಲೇಜು ಸಹಯೋಗದಲ್ಲಿ ಆಯೋಜನೆ







ನೆಲ್ಯಾಡಿ: ಸಂತ ಜಾರ್ಜ್ ವಿದ್ಯಾಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕದ ವತಿಯಿಂದ ದೇರಳಕಟ್ಟೆಯ ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆಯ ಸಮುದಾಯ ದಂತ ಆರೋಗ್ಯ ವಿಭಾಗದ ಸಹಯೋಗದಲ್ಲಿ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರವನ್ನು ಅ.11ರಂದು ಭಾನುವಾರ ಹೊಸಮಜಲಿನ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದೆ.
ಶಿಬಿರವು ಬೆಳಗ್ಗೆ 10 ಗಂಟೆಯಿಂದ ಆರಂಭವಾಗಲಿದ್ದು, ಸಾರ್ವಜನಿಕರಿಗೆ ಉಚಿತವಾಗಿ ದಂತ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯವನ್ನು ಒದಗಿಸಲಾಗುತ್ತದೆ. ಗ್ರಾಮೀಣ ಭಾಗದ ಜನರಲ್ಲಿ ದಂತ ಆರೋಗ್ಯದ ಕುರಿತು ಜಾಗೃತಿ ಮೂಡಿಸುವುದು ಹಾಗೂ ಅಗತ್ಯವಿರುವವರಿಗೆ ದಂತ ತಪಾಸಣೆ ಮತ್ತು ಚಿಕಿತ್ಸೆಯನ್ನು ಒದಗಿಸುವ ಉದ್ದೇಶದಿಂದ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ನೆಲ್ಯಾಡಿ ಅಲಂಗಡೆಯ ದಂತ ಚಿಕಿತ್ಸಾಲಯದ ಡಾ.ಈಶ ಕೃಷ್ಣ ಭಟ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದೇರಳಕಟ್ಟೆಯ ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆಯ ಸಮುದಾಯ ದಂತ ಆರೋಗ್ಯ ವಿಭಾಗದ ಮುಖ್ಯಸ್ಥ ಡಾ.ಇಮ್ರಾನ್ ಪಾಷಾ, ವಿಟ್ಲದ ಸಮುದಾಯ ಆರೋಗ್ಯ ಕೇಂದ್ರದ ದಂತ ವೈದ್ಯಾಧಿಕಾರಿ ಡಾ.ಸುಧಾಕರ ಶೆಟ್ಟಿ, ನೆಲ್ಯಾಡಿ ಶ್ರೀ ಮಹಾಗಣಪತಿ ದಂತ ಚಿಕಿತ್ಸಾಲಯದ ದಂತ ವೈದ್ಯೆ ಡಾ.ರಂಜಿತಾ ಎಂ., ಹೊಸಮಜಲು ಶಾಲೆಯ ಎಸ್ಡಿಎಂಸಿ ಸದಸ್ಯೆಯರಾದ ಜಮೀಲಾ ಹಾಗೂ ಜೈನಾಬಿ ಮತ್ತು ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆಯ ಸಮುದಾಯ ದಂತ ಆರೋಗ್ಯ ವಿಭಾಗದ ಉಪನ್ಯಾಸಕಿ ಡಾ.ಆಲ್ಫಿಯ ಭಾಗವಹಿಸಲಿದ್ದಾರೆ.
ಸಾರ್ವಜನಿಕರು ಈ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಎನ್ಎಸ್ಎಸ್ ಶಿಬಿರಾಧಿಕಾರಿ ವಿಶ್ವನಾಥ ಶೆಟ್ಟಿ ಕೆ. ಅವರು ತಿಳಿಸಿದ್ದಾರೆ.








































































































