






ಕೋಡಿಂಬಾಳ: ಗ್ರಾಮದ ಕಾಂಞರವಿಳ ನಿವಾಸಿ ಅನ್ನಮ್ಮ ತಂಗಚ್ಚನ್ (68) ಅವರು ಅಲ್ಪಕಾಲದ ಅಸೌಖ್ಯದಿಂದ ಕಡಬದ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾದರು.
ಕಳೆದ ಕೆಲವು ಸಮಯದಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಕಡಬದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಕೊನೆಯುಸಿರೆಳೆದಿದ್ದಾರೆ.
ಮೃತರ ಮಗಳು ಹಾಗೂ ಸೊಸೆ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ತಾಯಿಯ ನಿಧನದ ಸುದ್ದಿ ತಿಳಿದು ಸ್ವದೇಶಕ್ಕೆ ಆಗಮಿಸುತ್ತಿದ್ದಾರೆ. ಅವರ ಆಗಮನದ ಹಿನ್ನೆಲೆಯಲ್ಲಿ ಅಂತ್ಯಸಂಸ್ಕಾರವನ್ನು ಬುಧವಾರ (ಅ.14) ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.
ಬುಧವಾರ ಬೆಳಗ್ಗೆ ಕೋಡಿಂಬಾಳದ ಕಾಂಞರವಿಳ ನಿವಾಸದಲ್ಲಿ ಧಾರ್ಮಿಕ ಪ್ರಾರ್ಥನೆ ಹಾಗೂ ಅಂತಿಮ ವಿಧಿವಿಧಾನಗಳು ನಡೆಯಲಿದ್ದು, ಬಳಿಕ ಮೃತದೇಹವನ್ನು ಕೋಡಿಂಬಾಳದ ಸಂತ ಜಾರ್ಜ್ ಮಲಂಕರ ಕ್ಯಾಥೋಲಿಕ್ ಚರ್ಚ್ಗೆ ಕೊಂಡೊಯ್ಯಲಾಗುವುದು. ಸಂಜೆ ವೇಳೆ ಚರ್ಚ್ನಲ್ಲಿ ಅಂತಿಮ ಧಾರ್ಮಿಕ ವಿಧಿವಿಧಾನಗಳು ನೆರವೇರಲಿದ್ದು, ಬಳಿಕ ಕ್ರೈಸ್ತ ಧಾರ್ಮಿಕ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಯಲಿದೆ.
ಮೃತರು ಪತಿ ತಂಗಚ್ಚನ್, ಪುತ್ರ ಸುನಿಲ್ ಟಿ.ಕೆ., ಸೊಸೆ ಜೋಳಿ ಸುನಿಲ್, ಪುತ್ರಿ ಸುನಿ ಟಿ.ಕೆ., ಅಳಿಯ ಟೋನಿ, ಮೊಮ್ಮಕ್ಕಳು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.








































































































