






ನೆಲ್ಯಾಡಿ: ಅಶ್ವತ್ಥ ಗೆಳೆಯರ ಬಳಗ (ರಿ.), ಹೊಸಮಜಲು–ಕೌಕ್ರಾಡಿ–ನೆಲ್ಯಾಡಿ ಇದರ ವತಿಯಿಂದ ಆಯೋಜಿಸಲಾಗುವ 3ನೇ ವರ್ಷದ ‘ಕಂಡಡ್ ಒಂಜಿ ದಿನ’ ಕಾರ್ಯಕ್ರಮದ ದಿನಾಂಕವನ್ನು ನಿಗದಿಪಡಿಸಲಾಗಿದ್ದು, ಕಾರ್ಯಕ್ರಮದ ಯಶಸ್ವಿ ಆಯೋಜನೆಗಾಗಿ ಸಮಿತಿಯನ್ನು ರಚಿಸಲಾಯಿತು. ಡಿ.6ರಂದು ಕಾರ್ಯಕ್ರಮವನ್ನು ನಡೆಸಲು ನಿರ್ಧರಿಸಲಾಗಿದೆ.
ಕಾರ್ಯಕ್ರಮದ ಪೂರ್ವಸಿದ್ಧತೆ ಹಾಗೂ ಸಂಘಟನಾ ಚಟುವಟಿಕೆಗಳನ್ನು ಸುಸೂತ್ರವಾಗಿ ನಡೆಸುವ ಉದ್ದೇಶದಿಂದ ನಡೆದ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಮಿತಿಯ ಅಧ್ಯಕ್ಷರಾಗಿ ವಂದನ್, ಉಪಾಧ್ಯಕ್ಷರಾಗಿ ಜನಾರ್ಧನ ಬಟ್ಟೆಸಾಗು ಹಾಗೂ ಪ್ರಶಾಂತ್ ಜಿ., ಕಾರ್ಯದರ್ಶಿಯಾಗಿ ಗಣೇಶ್ ದೋಂತಿಲ, ಜೊತೆ ಕಾರ್ಯದರ್ಶಿಯಾಗಿ ಕಿಶೋರ್ ಹಾಗೂ ಕೋಶಾಧಿಕಾರಿಯಾಗಿ ಮೋಹನ್ ಡಿ. ಅವರನ್ನು ಆಯ್ಕೆ ಮಾಡಲಾಯಿತು.
ಸಭೆಯಲ್ಲಿ ಅಶ್ವತ್ಥ ಗೆಳೆಯರ ಬಳಗದ ಗೌರವಾಧ್ಯಕ್ಷ ಬಾಲಕೃಷ್ಣ ಬಾಣಜಾಲು, ಅಧ್ಯಕ್ಷ ರೋಷನ್ ಸೇರಿದಂತೆ ಬಳಗದ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದು, ಸತತ ಮೂರನೇ ವರ್ಷ ಆಯೋಜಿಸಲಾಗುತ್ತಿರುವ ‘ಕಂಡಡ್ ಒಂಜಿ ದಿನ’ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ನಿರ್ಧಾರ ಕೈಗೊಳ್ಳಲಾಯಿತು.








































































































