




ನೆಲ್ಯಾಡಿ: ಪುತ್ತೂರು ಸಂತ ಫಿಲೋಮಿನಾ ಹೈಸ್ಕೂಲ್ ನಲ್ಲಿ ನಡೆದ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಉದನೆ ಬಿಷಪ್ ಪೋಳಿಕಾರ್ಪೋಸ್ ನ ಪಬ್ಲಿಕ್ ಹತ್ತನೇ ತರಗತಿಯ ವಿದ್ಯಾರ್ಥಿ ವರುಣ್ ಎಂ.ಡಿ. ಅವರು ಅಮೋಘ ಸಾಧನೆ ಮಾಡಿದ್ದಾರೆ.
17ರ ವಯೋಮಾನದ ವಿಭಾಗದ 100 ಮೀಟರ್, 200 ಮೀಟರ್ ಹಾಗೂ 400 ಮೀಟರ್ ಓಟದ ಸ್ಪರ್ಧೆಗಳಲ್ಲಿ ಭಾಗವಹಿಸಿದ ವರುಣ್ ಅವರು ಮೂರೂ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಗಳಿಸಿ ಮೂರು ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ವೈಯಕ್ತಿಕ ಚಾಂಪಿಯನ್ ಪಟ್ಟವನ್ನು ಅಲಂಕರಿಸಿರುವ ಅವರು, ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಅಲ್ಪಾವಧಿಯಲ್ಲೇ ಓಟದ ಸ್ಪರ್ಧೆಗಳಲ್ಲಿ ತಮ್ಮ ಪ್ರತಿಭೆ ಹಾಗೂ ಕ್ರೀಡಾ ಸಾಮರ್ಥ್ಯವನ್ನು ಪ್ರದರ್ಶಿಸಿರುವ ವರುಣ್ ಅವರ ಸಾಧನೆ ಶಾಲೆಗೆ ಹೆಮ್ಮೆ ತಂದಿದೆ. ಮುಂದಿನ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಇನ್ನಷ್ಟು ಉನ್ನತ ಸಾಧನೆ ಮಾಡಲಿ ಎಂದು ಹಾರೈಸಿದ್ದಾರೆ ಹಾಗೂ ತರಬೇತಿ ನೀಡಿ ಈ ಸಾಧನೆಗೆ ಮಾರ್ಗದರ್ಶನ ಮಾಡಿದ ದೈಹಿಕ ಶಿಕ್ಷಣ ಶಿಕ್ಷಕ ಜಿಮ್ಸನ್ ಅವರಿಗೂ ಸಂಸ್ಥೆಯ ಸಂಚಾಲಕ ರೆ. ಫಾ. ಹನಿ ಜೇಕಬ್, ಆಡಳಿತ ಅಧಿಕಾರಿ ಮ್ಯಾಥ್ಯೂ. ಟಿ.ಜಿ, ಮುಖ್ಯಶಿಕ್ಷಕ ಪ್ರಕಾಶ್, ಶಾಲಾ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ಸಿಬ್ಬಂದಿಗಳು ಕೃತಜ್ಞತೆ ಸಲ್ಲಿಸಿದ್ದಾರೆ








































































































