ಜನರ ಬದುಕನ್ನು ರೂಪಿಸಿ ಸ್ವಸ್ಥ ಸಮಾಜ ನಿರ್ಮಾಣವೇ ಗ್ರಾಮಾಭಿವೃದ್ಧಿ ಯೋಜನೆಯ ಧ್ಯೇಯ -ನಳಿನ್ ಕುಮಾರ್ ಕಟೀಲ್
ಕಡಬ: ವ್ಯಕ್ತಿಯ ನಿರ್ಮಾಣದ ಮೂಲಕ ರಾಷ್ಟ್ರ ನಿರ್ಮಾಣದ ಕನಸು ಕಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನರ ಬದುಕನ್ನು ರೂಪಿಸಿ, ಸ್ವಸ್ಥ ಸಮಾಜ ನಿರ್ಮಾಣ ಮಾಡುವ ಮಹತ್ತರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.
ಸವಣೂರಿನ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಕಡಬ ತಾಲೂಕು ಘಟಕದ ನೇತೃತ್ವದಲ್ಲಿ, ಕೇಂದ್ರ ಸರಕಾರದ ನವಭಾರತ್ ಸಂಸ್ಥೆಯ ಸಹಯೋಗದೊಂದಿಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗಾಗಿ ಒಂದು ತಿಂಗಳ ಕಾಲ ನಡೆಯಲಿರುವ ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಮಾಸಾಚರಣೆಗೆ ಅವರು ಬುಧವಾರ ಚಾಲನೆ ನೀಡಿ ಅಶ್ವಿನ್ ಎಲ್. ಶೆಟ್ಟಿ ಅವರ ಕೃತಿಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಶ್ರಮಿಕ ವರ್ಗದ ಜನರ ಜೀವನಮಟ್ಟವನ್ನು ಸುಧಾರಿಸುವುದರ ಜೊತೆಗೆ ದುಶ್ಚಟಮುಕ್ತ ಸಮಾಜ ನಿರ್ಮಾಣಕ್ಕೆ ಪ್ರೇರಣೆ ನೀಡುತ್ತಿದೆ. ಸಮಾಜದ ಆರೋಗ್ಯಕರ ಬೆಳವಣಿಗೆಗೆ ಪೂರಕವಾದ ಇಂತಹ ಕಾರ್ಯಗಳು ಶ್ಲಾಘನೀಯವಾಗಿದ್ದು, ಗ್ರಾಮಾಭಿವೃದ್ಧಿ ಯೋಜನೆಯು ಸಮಾಜಕ್ಕೆ ಮಹತ್ತರ ಕೊಡುಗೆ ನೀಡುತ್ತಿದೆ ಎಂದು ನಳಿನ್ ಕುಮಾರ್ ಕಟೀಲ್ ಅಭಿಪ್ರಾಯಪಟ್ಟರು.
29 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ವ್ಯಸನಮುಕ್ತಿಯ ಅರಿವು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯ ಸಂಘಟನಾ ಅಧ್ಯಕ್ಷ ನಟರಾಜ್ ಬಾದಾಮಿ ಮಾತನಾಡಿ ಮಹಾತ್ಮ ಗಾಂಧೀಜಿಯವರು ಸ್ವಾತಂತ್ರ್ಯಪೂರ್ವದಲ್ಲಿಯೇ ಮದ್ಯಮುಕ್ತ ಸಮಾಜ ನಿರ್ಮಾಣದ ಸಂಕಲ್ಪ ಹೊಂದಿದ್ದರು. ಅದೇ ಆಶಯದೊಂದಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ವ್ಯಸನಮುಕ್ತ ಸಮಾಜ ನಿರ್ಮಾಣಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಸುಮಾರು 29 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ವ್ಯಸನಗಳ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡುವ ಕಾರ್ಯಕ್ರಮಗಳನ್ನು ನಡೆಸಿ ಜಾಗೃತಿ ಮೂಡಿಸಲಾಗಿದೆ. ಮದ್ಯವರ್ಜನ ಶಿಬಿರಗಳ ಮೂಲಕವೂ ಅನೇಕ ಜನರ ಬದುಕಿನಲ್ಲಿ ಬದಲಾವಣೆ ತಂದು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಶ್ರಮಿಸಲಾಗುತ್ತಿದೆ ಎಂದು ತಿಳಿಸಿದರು.
ಸಮಾಜದ ಸ್ವಾಸ್ಥ್ಯ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ. ಸೀತಾರಾಮ ರೈ ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಸಮಾಜ ಮೆಚ್ಚುವಂತಹ ಕಾರ್ಯಗಳನ್ನು ಮಾಡಬೇಕು, ದುಶ್ಚಟಗಳ ವಿರುದ್ಧ ಸರಕಾರ ಎಷ್ಟೇ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡರೂ ಅವುಗಳನ್ನು ಸಂಪೂರ್ಣವಾಗಿ ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಸಮಾಜದ ಪ್ರತಿಯೊಬ್ಬರೂ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ನಮ್ಮ ಬದುಕು ಕೇವಲ ನಮಗಾಗಿ ಸೀಮಿತವಾಗದೆ, ಇತರ ಹತ್ತು ಜನರಿಗೆ ಉಪಯುಕ್ತವಾಗುವಂತಿರಬೇಕು. ವಿದ್ಯಾರ್ಥಿಗಳು ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಂಡು ದುಶ್ಚಟಗಳಿಂದ ದೂರವಿದ್ದು, ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ, ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ, ನ್ಯಾಯವಾದಿ ಸೂರ್ಯನಾರಾಯಣ ರಾವ್, ಕಡಬ ತಾಲೂಕು ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಕೆ. ಸವಣೂರು ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಜನಜಾಗೃತಿ ವೇದಿಕೆಯ ಉಡುಪಿ ಪ್ರಾದೇಶಿಕ ನಿರ್ದೇಶಕ ಗಣೇಶ್ ಆಚಾರ್ಯ ಮಾತನಾಡಿದರು.
ನ್ಯಾಯವಾದಿ ಉದಯ ಶಂಕರ್ ಶೆಟ್ಟಿ, ಜನಜಾಗೃತಿ ವೇದಿಕೆಯ ಕಡಬ ತಾಲೂಕು ಅಧ್ಯಕ್ಷ ಇಂದುಶೇಖರ ಶೆಟ್ಟಿ, ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ಎಸ್ಎನ್ಆರ್ ರೂರಲ್ ಎಜುಕೇಶನ್ ಟ್ರಸ್ಟ್ನ ಟ್ರಸ್ಟಿ ರಶ್ಮಿ ಎ. ಶೆಟ್ಟಿ, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ. ರಾಜಲಕ್ಷ್ಮೀ ಎಸ್. ಶೆಟ್ಟಿ ಹಾಗೂ ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲೆ ಶಶಿಕಲಾ ಎಸ್. ಆಳ್ವ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಅಶ್ವಿನ್ ಎಲ್. ಶೆಟ್ಟಿ ಹಾಗೂ ನಟರಾಜ್ ಬಾದಾಮಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಡಬ ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಸ್ವಾಗತಿಸಿದರು. ವಲಯ ಮೇಲ್ವಿಚಾರಕಿ ಹೇಮಾವತಿ ವಂದಿಸಿದರು. ಉಪನ್ಯಾಸಕ ಗಿರೀಶ್ ಭಟ್ ಕಾರ್ಯಕ್ರಮ ನಿರೂಪಿಸಿದರು.
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷದ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಅ.4ರ ಸಂಜೆ ...
72ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಪಂಜ ವಲಯ ಅರಣ್ಯ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ ನೆಲ್ಯಾಡಿ: “ಆವಾಸ ಸ್ಥಾನಗಳ ಜೋಡಣೆ ಹಾಗೂ ವನ್ಯಜೀವಿಗಳ ಅಭಿವೃದ್ಧಿ” ಎಂಬ ಘೋಷವಾಕ್ಯದೊಂದಿಗೆ ನಡೆಯುತ್ತಿರುವ ...
ಉಪ್ಪಿನಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಉಪ್ಪಿನಂಗಡಿ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ–ಬಾಲಕಿಯರ ಕ್ರೀಡಾಕೂಟ ಹಿರೆಬಂಡಾಡಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದಲ್ಲಿ ಇಂದ್ರಪ್ರಸ್ಥ ...
ಕೊಕ್ಕಡ: ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಶಿಶಿಲ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛತಾ ಹೀ ಸೇವಾ ಸಮಾರೋಪ ಸಮಾರಂಭದೊಂದಿಗೆ ವಿಶೇಷ ಗ್ರಾಮ ಸಭೆ ನಡೆಯಿತು. ಪಂಚಾಯತ್ ಆಡಳಿತಾಧಿಕಾರಿ ಭರತ್ ...
ಕೊಕ್ಕಡ: ಸಂತ ಜೋನ್ ಬ್ಯಾಪ್ಟಿಸ್ಟ್ ದೇವಾಲಯದಲ್ಲಿ ನೂತನ ಯಾಜಕರಾಗಿ ಗುರುದೀಕ್ಷೆ ಸ್ವೀಕರಿಸಿದ ರೆ| ಫಾ| ವಿಲ್ಫ್ರೆಡ್ ಸ್ಟೀವನ್ ರೊಡ್ರಿಗಸ್ ಹಾಗೂ ಡಾಕ್ಟರೇಟ್ ಪದವಿ ಪಡೆದ ಡಾ| ಸೈಮನ್ ...
ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪ ಎಫ್ಐಆರ್ನಲ್ಲಿ ಸೇರಿಸಿಲ್ಲ: ಬಣಕಲ್ ಪೊಲೀಸರ ವಿರುದ್ಧ ಗಾಯಾಳುಗಳ ಆಕ್ರೋಶ ಕೊಕ್ಕಡ: ಮಂತ್ರಾಲಯಕ್ಕೆ ತೆರಳುತ್ತಿದ್ದ ಶಿಶಿಲದ ಸ್ನೇಹಿತರಿದ್ದ ಕಾರಿಗೆ ಎದುರಿನಿಂದ ಬಂದ ...
ಅರಸಿನಮಕ್ಕಿ: ಮಹಾತ್ಮಗಾಂಧಿ ಜಯಂತಿಯ ಅಂಗವಾಗಿ ಅರಸಿನಮಕ್ಕಿ ಗ್ರಾಮ ಪಂಚಾಯಿತಿ ವತಿಯಿಂದ ಗಾಂಧಿ ಜಯಂತಿ ಆಚರಣೆ ಹಾಗೂ ‘ಸ್ವಚ್ಛತಾ ಹೀ ಸೇವಾ’ ಅಭಿಯಾನದ ಸಮಾರೋಪ ಸಮಾರಂಭ ನಡೆಯಿತು. ಇದೇ ...
ನೆಲ್ಯಾಡಿ: ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ನೆಲ್ಯಾಡಿ ಮಹಾಶಕ್ತಿ ಕೇಂದ್ರದ ವತಿಯಿಂದ ‘ಸೇವಾ ಸಂಕಲ್ಪ ಅಭಿಯಾನ’ದ ಅಂಗವಾಗಿ ಅ.4ರಂದು ನೆಲ್ಯಾಡಿಯಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ನೆಲ್ಯಾಡಿಯ ...
ನೆಲ್ಯಾಡಿ: ಕಡಬ ತಾಲೂಕಿನ ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಅನಿಲ ಸಮೀಪ ಶುಕ್ರವಾರ ಸಂಜೆ ಚಲಿಸುತ್ತಿದ್ದ ಕಾರಿಗೆ ಕಡವೆಯೊಂದು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸುಬ್ರಹ್ಮಣ್ಯದಿಂದ ...
ನೆಲ್ಯಾಡಿ: ನೆಲ್ಯಾಡಿಯ ಲೈಫ್ ಫಾರ್ಮಾ ಸಂಸ್ಥೆಯಲ್ಲಿ ಔಷಧ ವಿತರಣೆ ಹಾಗೂ ಕಂಪ್ಯೂಟರ್ ಬಿಲ್ಲಿಂಗ್ ಕೆಲಸ ನಿರ್ವಹಿಸಲು ಸಿಬ್ಬಂದಿ ತುರ್ತಾಗಿ ಅಗತ್ಯವಿದ್ದಾರೆ. ಅಭ್ಯರ್ಥಿಗಳು ಎಸ್ಎಸ್ಎಲ್ಸಿ, ಪಿಯುಸಿ ಅಥವಾ ಯಾವುದೇ ...
ಶಿರಾಡಿ: ಕಡಬ ತಾಲೂಕು ಶಿರಾಡಿ ಗ್ರಾಮದ ಎಸ್.ಆರ್.ಎಸ್. ಪೆಟ್ರೋಲ್ ಪಂಪ್ ಸಮೀಪ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಬೊಲೆರೋ ಪಿಕ್ಅಪ್ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ...
ಕೊಕ್ಕಡ: ನಿಡ್ಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆದ 2026-27ನೇ ಸಾಲಿನ ಕೊಕ್ಕಡ, ನಿಡ್ಲೆ ಹಾಗೂ ಪೆರ್ಲ ಕ್ಲಸ್ಟರ್ಗಳ ವಲಯ ಮಟ್ಟದ 14ರ ವಯೋಮಾನದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಶಿಶಿಲದ ಮಹರ್ಷಿ ...
ಕೊಕ್ಕಡ: ನಾಲ್ಕು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಶಿಶಿಲ–ಬೈರಾಪುರ ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳ ಮೂಲಕ ಪೂರ್ಣ ಪ್ರಮಾಣದ ಪ್ರಯತ್ನ ನಡೆಸಲಾಗುವುದು ಎಂದು ಮಂಗಳೂರು ಲೋಕಸಭಾ ...
ನೆಲ್ಯಾಡಿ: ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ನಾಟೆಕಲ್–ಮಂಗಳೂರು ಹಾಗೂ ಬದ್ರಿಯಾ ಜುಮಾ ಮಸೀದಿ ನೆಲ್ಯಾಡಿಯ ಅಧೀನ ಸಂಸ್ಥೆಯಾದ ನುಸ್ರತುಲ್ ಮಸಾಕೀನ್ ಯಂಗ್ ಮೆನ್ಸ್ ...
ಕಡಬ: ಪೊಲೀಸ್ ಇಲಾಖೆಯ ಸಿವಿಲ್ ಪರೀಕ್ಷೆ ಕಾನ್ಸ್ಟೇಬಲ್ ನೇಮಕಾತಿಯ ದೈಹಿಕ ಪರೀಕ್ಷೆಗೆ ಹಾಜರಾಗಲು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನ ದುರ್ಬಳಕೆ ಮಾಡಿಕೊಂಡು ನಕಲಿ ಪ್ರವೇಶ ಪತ್ರ ಸೃಷ್ಟಿಸಿ ವಂಚಿಸಲು ...
ನೆಲ್ಯಾಡಿ: ಉದನೆ ಸಮೀಪದ ನೆಲ್ಯಡ್ಕ ನಿವಾಸಿ ಬೆಳ್ತಂಗಡಿ ಧರ್ಮಪ್ರಾಂತ್ಯದ ವಿಕಾರಿ ಜನರಲ್ ಆಗಿ ಸೇವೆ ಸಲ್ಲಿಸುತ್ತಿದ್ದ ವಂ.ಡಾ.ಮಾಣಿ ವೆಳುತ್ತೇಡತ್ತುಪರಂಬಿಲ್(64) ಅವರು ಅಲ್ಪಕಾಲದ ಅನಾರೋಗ್ಯದಿಂದ ಗುರುವಾರದಂದು ನಿಧನರಾದರು. ಧರ್ಮಗುರುಗಳಾಗಿ, ...
ನೆಲ್ಯಾಡಿ: ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದ ಅಟೋರಿಕ್ಷಾ ಚಲಾಯಿಸಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಕಡಬ ತಾಲೂಕು ಶಿರಿಬಾಗಿಲು ಗ್ರಾಮದ ದೇರಣೆ ಎಂಬಲ್ಲಿ ಭಾನುವಾರದಂದು ...
ನೆಲ್ಯಾಡಿ: ಸರ್ ಪ್ರಕ್ರಿಯೆಯ ಸಂದರ್ಭದಲ್ಲಿ ಕೌಕ್ರಾಡಿ ಗ್ರಾ.ಪಂ. ವ್ಯಾಪ್ತಿಯ ಉದ್ಯೋಗ ನಿಮಿತ್ತ ವಿದೇಶ ಹಾಗೂ ಬೆಂಗಳೂರಿನಲ್ಲಿ ತಾತ್ಕಾಲಿಕವಾಗಿ ವಾಸಿಸುತ್ತಿರುವ ಸ್ಥಳೀಯ ನಿವಾಸಿಗಳ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವಂತೆ ...
ಕೊಕ್ಕಡ: ಹಲವು ವರ್ಷಗಳಿಂದ ಗ್ರಾಮಸ್ಥರ ಬೇಡಿಕೆಯಾಗಿರುವ ಶಿಶಿಲ-ಬೈರಾಪುರ ಅಂತರ ಜಿಲ್ಲಾ ಗ್ರಾಮೀಣ ರಸ್ತೆಯನ್ನು ಹಸಿರು ಮಾದರಿ ರಸ್ತೆಯಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮಂಗಳವಾರ ಸ್ಥಳ ಪರಿಶೀಲನೆ ನಡೆಯಿತು. ಪ್ರಧಾನಮಂತ್ರಿ ...
ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪತ್ರಡ್ಕದಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ...
ನೆಲ್ಯಾಡಿ: ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಸಮಾಜ ಸೇವಕ ಹಾಗೂ ಯಕ್ಷಗಾನ ಸಂಘಟಕ, ನೆಲ್ಯಾಡಿ ಕೆಳಗಿನಪರಾರಿ ನಿವಾಸಿ ದಿ.ಜಯಾನಂದ ಬಂಟ್ರಿಯಾಲ್ ಅವರಿಗೆ ಯಕ್ಷಗಾನ ತಾಳಮದ್ದಳೆಯ ಮೂಲಕ ನುಡಿನಮನ ...
ಕಳೆಂಜ: ಗ್ರಾಮದ ಶಾಲೆತ್ತಡ್ಕ ಎಂಬಲ್ಲಿ ಕೇಂದ್ರ ಸರಕಾರದ ಅನುದಾನದಡಿಯಲ್ಲಿ ಸುಮಾರು ರೂ. 65 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಆಯುಷ್ಮಾನ್ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕಟ್ಟಡದ ಶಿಲಾನ್ಯಾಸ ...
ಶಿಶಿಲ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ದ.ಕ. ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಬೆಳ್ತಂಗಡಿ ವತಿಯಿಂದ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ, ಶಿಶಿಲದಲ್ಲಿ ...
ಉಜಿರೆ: ಮೌಲ್ಯ ನಾಯಕ್ ಅವರು ದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯವು ಆಯೋಜಿಸಿದ್ದ ಭಾರತೀಯ ಜ್ಞಾನ ಪರಂಪರೆ (ಇಂಡಿಯನ್ ನಾಲೆಡ್ಜ್ ಸಿಸ್ಟಮ್ ) ಸಂಸ್ಕೃತ ಒಲಂಪಿಯಾಡ್ನಲ್ಲಿ ಸ್ವರ್ಣ ಪದಕ ...