


ನೆಲ್ಯಾಡಿ: ಕಡಬ ತಾಲೂಕಿನ ಕೌಕ್ರಾಡಿ ಗ್ರಾ.ಪಂ.ನ ಮಾಜಿ ಸದಸ್ಯ, ಕೃಷಿಕ, ಇಚ್ಲಂಪಾಡಿ ಗ್ರಾಮದ ಕೊರಮೇರು ನಿವಾಸಿ ವಿಶ್ವನಾಥ ಗೌಡ (54ವ.)ಅವರು ಸೋಮವಾರದಂದು ಸಂಜೆ ಸ್ವಗೃಹದಲ್ಲಿ ನಿಧನರಾದರು.
ಇವರು ಕಳೆದ ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ವಿಶ್ವನಾಥ ಗೌಡ ಅವರು ಕಳೆದ ಅವಧಿಯಲ್ಲಿ ಕೌಕ್ರಾಡಿ ಗ್ರಾ.ಪಂ.ಸದಸ್ಯರಾಗಿದ್ದರು. ಬಿಜೆಪಿ ಸಕ್ರೀಯ ಕಾರ್ಯಕರ್ತರಾಗಿದ್ದ ಇವರು ಕೊರಮೇರು ಬೂತ್ ಸಮಿತಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಅಲ್ಲದೇ ಕೊರಮೇರು ಅಂಗನವಾಡಿ ಕೇಂದ್ರದ ಬಾಲವಿಕಾಸ ಸಮಿತಿ ಅಧ್ಯಕ್ಷರಾಗಿ, ಕೊರಮೇರು ಸರಕಾರಿ ಕಿ.ಪ್ರಾ.ಶಾಲಾ ಎಸ್ಡಿಎಂಸಿ ಅಧ್ಯಕ್ಷರಾಗಿ, ಒಕ್ಕಲಿಗ ಗೌಡ ಸೇವಾ ಸಂಘದ ಇಚ್ಲಂಪಾಡಿ ಗ್ರಾಮ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ, ಇಚ್ಲಂಪಾಡಿ ಬೀಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಸಮಿತಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಪ್ರಸ್ತುತ ವಿವಿಧ ಸಂಘಟನೆಗಳಲ್ಲಿ ಗುರುತಿಸಿಕೊಂಡು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದರು.
ಮೃತರು ಪತ್ನಿ ಹರಿಣಾಕ್ಷಿ, ಪುತ್ರರಾದ ಪ್ರದೀಪ್, ಯಕ್ಷಿತ್, ತೀರ್ಥನ್ ಅವರನ್ನು ಅಗಲಿದ್ದಾರೆ.








































































































